ಬಸವ ಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 20,629 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇಲ್ಲಿನ ಬಿ.ವಿ. ಭೂಮರೆಡ್ಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು, ಶರಣು ಸಲಗರ ಅವರು ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡಿದ್ದರು.
ಕಾಂಗ್ರೆಸ್ ತೆಕ್ಕೆಗೆ ಮಸ್ಕಿ
ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಅವರು 30,606 ಮತಗಳ ಅಂತರದೊಂದಿಗೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಕಳೆದ ಮೂರು ಬಾರಿ ಶಾಸಕರಾಗಿದ್ದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಅವರಿಗೆ 55,731 ಮತಗಳನ್ನು ಪಡೆದಿದ್ದರೆ, ಬಸನಗೌಡ ಅವರಿಗೆ 86,337 ಮತಗಳು ಬಂದಿವೆ.
ಬೆಳಗಾವಿ ಲೋಕಸಭೆ ಕ್ಷೇತ್ರ ಉಪಚುನಾವಣೆ -ಸತೀಶ್ ಜಾರಕಿಹೊಳಿ ಮುನ್ನಡೆ
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮುಂದುವರಿದಿದ್ದು ಮಧ್ಯಾಹ್ನದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ 9,248 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ 2,79,859 ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ 2,89,107 ಮತಗಳನ್ನು ಪಡೆದಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನಾ ಬೆಂಬಲಿತ ಅಭ್ಯರ್ಥಿ ಶುಭಂ ಶೆಳಕೆ 86,894 ಮತಗಳನ್ನು ಗಳಿಸಿದ್ದಾರೆ.