ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತಿರುವ ಸಿಎಂ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕಾಂಗ್ರೆಸ್ನವರು ಮಾಡಿರುವ ಆರೋಪ ಆಧಾರರಹಿತ ಈ ಬಗ್ಗೆ ಪ್ರಕರಣವನ್ನ ದಾಖಲಿಸಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಈ ಕುರಿತು ಗುರುವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕರು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖಾ ತಂಡ ಮತ್ತು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದರು.