• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, June 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
June 8, 2026
in Top Story, ಕರ್ನಾಟಕ, ರಾಜಕೀಯ
0
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ
Share on WhatsAppShare on FacebookShare on Telegram

ಬೆಂಗಳೂರು: ʼರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರೂ ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರು ಹೇಳುವುದಿಲ್ಲʼ ಎಂದು ಸಿಎಂ ಡಿ.ಕೆ ಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದ್ದಾರೆ.

ADVERTISEMENT
DK Shivakumar : ಮಾಜಿ ಪ್ರಧಾನಿ ದೇವೇಗೌಡರಿಗೆ ಕೈ ತಪ್ಪಿದ ರಾಜ್ಯಸಭಾ ಟಿಕೆಟ್.. #pratidhvani

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ, ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯೆ ನೀಡಿದರು.

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿಸಿ ಬಿಜೆಪಿ ಅನ್ಯಾಯ ಮಾಡಿದೆ ಎನ್ನುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಟೀಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಡಿ.ಕೆ ಶಿವಕುಮಾರ್, ʼನಾನು ಸದ್ಯಕ್ಕೆ ಏನು ಮಾತನಾಡುವುದಿಲ್ಲ. ಅವರು ಮಾತಾಡಿದ್ದಾರೆ. ಆದರೆ ನಾನು ಮಾತಾಡಕ್ಕೆ ಹೋಗುವುದಿಲ್ಲ. ನಮ್ಮ ಪಕ್ಷದ ಚಿಂತನೆಯನ್ನು ನಾನು ಪಾಲನೆ ಮಾಡುತ್ತೇನೆʼ ಎಂದರು.

ಇನ್ನು ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರ ಅಗಲಿಕೆ ಬಗ್ಗೆ ಮಾತನಾಡಿದ ಅವರು, ʼಸೂರಜ್ ಹೆಗ್ಡೆ ಆತ್ಮೀಯ ಸ್ನೇಹಿತ. ತ್ಯಾಗಕ್ಕೆ ಹೆಸರಾದವರು. ಇದೇ ಸ್ಥಾನ ಬೇಕು ಎಂದೂ ಕೇಳುತ್ತಿರಲಿಲ್ಲ. ನಾನು ಹಿಂದೆ ಅವರಿಗೆ ಮೈಸೂರು ಸಂಸದ ಸ್ಥಾನಕ್ಕೆ ಟಿಕೆಟ್ ಕೊಡಿಸಬೇಕು ಅಂತ ಬಹಳ ಹೋರಾಟ ಮಾಡಿದ್ದೆ. ಅವರು ದೇವರಾಜ ಅರಸು ಅವರ ಮೊಮ್ಮಗ. ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನನ್ನ ಜೊತೆ ಪದಾಧಿಕಾರಿಯಾಗಿದ್ದವರು. ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾಗಿದ್ದವರು. ನಮ್ಮ ಸರ್ಕಾರ ರಾಜ್ಯ ಮಟ್ಟದ ಸಚಿವ ಸ್ಥಾನ ಕೊಟ್ಟಿತ್ತು. ಅವರ ಮೇಲೆ ನಾನು ದೊಡ್ಡ ಆಕಾಂಕ್ಷೆ ಇಟ್ಟುಕೊಂಡಿದ್ದೆ. ಪಕ್ಷ ಅವರ ಮೇಲೆ ಅವಲಂಬಿಸಿತ್ತುʼ ಎಂದು ತಿಳಿಸಿದರು.

BY Vijayendra on HDD, Sumalatha : ದೇವೇಗೌಡರು, ಸುಮಲತಾ ಬಗ್ಗೆ ವಿಜಯೇಂದ್ರ ಹೇಳಿದ್ದೇನು..! #sumalatha

ʼನಿಷ್ಠಾವಂತ ಕಾರ್ಯಕರ್ತ ಪಕ್ಷಕ್ಕೆ ಸಿಗುವುದು ಬಹಳ ವಿಶೇಷ. ಈಗಲೂ ಕೂಡ ಅನೇಕ ವಿಚಾರಗಳನ್ನು ಅವರ ವಿಚಾರದಲ್ಲಿ ಚಿಂತನೆ ಮಾಡಲಾಗಿತ್ತು. ಎಐಸಿಸಿ ನಮ್ಮ ಕಾರ್ಯದರ್ಶಿಗಳಾಗಿ, ನಮ್ಮ ರಾಜ್ಯ ಮಟ್ಟದ ಪದಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರುʼ ಎಂದರು.

Yatnal on DkShivakumar: ಸಿಎಂ ಡಿಕೆ ಶಿವಕುಮಾರ್ ಕ್ಷಮೆ ಕೇಳೋಕೆ ಮುಂದಾಗಿದ್ದೇಕೆ ಶಾಸಕ ಯತ್ನಾಳ್? #farmer

ʼಅವರ ಕುಟುಂಬದ ದುಃಖ ನೋಡಲು ಆಗುತ್ತಿಲ್ಲ. ಅವರ ತಂದೆ ಕೂಡ ಒಬ್ಬ ಹಿರಿಯ ದೊಡ್ಡ ರಾಜಕಾರಣಿ. ವೈಯಕ್ತಿಕವಾಗಿ ನಮ್ಮೆಲ್ಲರಿಗೂ ಕೂಡ ಬಹಳ ದುಃಖ ಉಂಟಾಗಿದೆ. ಪಕ್ಷದ ಹಾಗೂ ಸರ್ಕಾರದ ಪರವಾಗಿ ಗೌರವ ನಮನ ಸಲ್ಲಿಸುತ್ತೇನೆ. ಕರ್ನಾಟಕ ಸರ್ಕಾರ ಅವರಿಗೆ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲಾಗುವುದು. ಅವರ ಕುಟುಂಬದವರು ಅಂತಿಮ ಕಾರ್ಯ ಯಾವಾಗ ತೀರ್ಮಾನ ಮಾಡುತ್ತಾರೋ ಆಗ ಗೌರವವನ್ನು ಕೊಡುತ್ತೇವೆ. ಈ ವಿಚಾರವಾಗಿ ನಾನು ಈಗಾಗಲೇ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶ ತಿಳಿಸಿದ್ದೇನೆ. ಅವರ ಅಂತ್ಯಕ್ರಿಯೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆʼ ಎಂದರು.

Previous Post

ಟಾಕ್ಸಿಕ್‌ ಮೇಕಿಂಗ್‌ ವಿಡಿಯೋ ರಿಲೀಸ್‌‌: ಇದು ನಿರ್ದೇಶಕಿ ಗೀತು ಬರ್ತ್ ಡೇ ಸ್ಪೆಷಲ್

Next Post

ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

Related Posts

ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ
Top Story

ಕೊಟ್ಟಿಯೂರು ಶಿವಕ್ಷೇತ್ರದ ಮಹಿಮೆ ಏನು: ಇಲ್ಲಿದೆ‌ ಕೊಟ್ಟಿಯೂರು ರಹಸ್ಯ

by ಪ್ರತಿಧ್ವನಿ
June 8, 2026
0

ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವಕ್ಷೇತ್ರ ಇತ್ತೀಚೆಗೆ ಮತ್ತೆ ಸುದ್ದಿಯಲ್ಲಿದೆ. ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಸಮರ್ಪಕ ಸೌಲಭ್ಯಗಳ ಕೊರತೆ ಇದೆ ಎಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ...

Read moreDetails
ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ

ದೇವೇಗೌಡ, ಸುಮಲತಾ ಅವರಿಗೆ ರಾಜ್ಯಸಭೆ ಟಿಕೆಟ್ ಸಿಗದ ವಿಚಾರ: ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸ್ಪಷ್ಟನೆ

June 8, 2026
ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ

ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ

June 8, 2026
ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

June 8, 2026
ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

June 8, 2026
Next Post
ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!