• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ನಲ್ಲಿ ‘ಅಧಿಕಾರದ ಬೆಂಕಿ’ ಹಚ್ಚುವ ಪ್ರಯತ್ನ ನಡೆದಿದ್ಯಾ..?

Any Mind by Any Mind
November 8, 2023
in ಕರ್ನಾಟಕ
0
ಕಾಂಗ್ರೆಸ್‌ನಲ್ಲಿ ‘ಅಧಿಕಾರದ ಬೆಂಕಿ’ ಹಚ್ಚುವ ಪ್ರಯತ್ನ ನಡೆದಿದ್ಯಾ..?
Share on WhatsAppShare on FacebookShare on Telegram

ADVERTISEMENT

ಕಾಂಗ್ರೆಸ್‌ನಲ್ಲಿ ಅಧಿಕಾರದ ವಿಚಾರ ಭಾರೀ ಚರ್ಚೆ ಆಗುತ್ತಿದೆ. ಒಂದು ಕಡೆ ಡಿಸಿಎಂ ಆಗಿರುವ ಡಿ.ಕೆ ಶಿವಕುಮಾರ್‌‌, ಮುಖ್ಯಮಂತ್ರಿ ಆಗಬೇಕು ಅನ್ನೋ ಹಂಬಲದಲ್ಲಿ ಓಡಾಡುತ್ತಿದ್ದಾರೆ. ಅದರ ಬೆನ್ನಲ್ಲೇ ಡಿ.ಕೆ ಶಿವಕುಮಾರ್‌‌ ಮುಖ್ಯಮಂತ್ರಿ ಆಗುವುದಾದರೆ ನಾವು ಜೆಡಿಎಸ್‌‌ನ 19 ಜನರೂ ಬೆಂಬಲ ನೀಡಲು ಸಿದ್ಧ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಹಿರಂಗವಾಗಿ ಘೋಷಣೆ ಮಾಡಿದ್ದರು. ಇದು ವ್ಯಂಗ್ಯವಾಗಿಯೇ ಆದರೂ D.K ಶಿವಕುಮಾರ್‌ ಸಿಎಂ ಆಗುವುದಾದರೆ ನಾವು ಬೆಂಬಲ ಕೊಡುತ್ತೇವೆ ಎನ್ನುವ ಮೂಲಕ ಒಂದು ಸಂದೇಶವನ್ನು ಕಳುಹಿಸಯವ ಪ್ರಯತ್ನ ಮಾಡಿದ್ದರು.

ಡಿ.ಕೆ ಶಿವಕುಮಾರ್‌ ಮನಸ್ಸಲ್ಲಿ ‘ಒಕ್ಕಲಿಗ’ ಶಕ್ತಿ ಬಿತ್ತಿದ HDK

D.K ಶಿವಕುಮಾರ್‌ ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಜೆಡಿಎಸ್‌ ಪ್ರಮುಖವಾಗಿ ಒಕ್ಕಲಿಗರ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲೇ ಮೇಲುಗೈ ಸಾಧಿಸುತ್ತ. ಒಕ್ಕಲಿಗರ ಕೋಟೆಯನ್ನು ಕಟ್ಟಿಕೊಂಡಿದೆ. ಒಂದು ವೇಳೆ ಒಕ್ಕಲಿಗರಾದ ಡಿ.ಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುವಾಗ ಜೆಡಿಎಸ್‌ ಪರೋಕ್ಷವಾಗಿ ಆದರೂ ಬೆಂಬಲಿಸಿದರೂ ಅಚ್ಚರಿಯೇನಲ್ಲ. ಡಿ.ಕೆ ಶಿವಕುಮಾರ್‌ ಬೆಂಬಲಿಸಿದ್ರೆ ಒಕ್ಕಲಿಗ ನಾಯಕನನ್ನು ಪಕ್ಷಾತೀತವಾಗಿ ಬೆಂಬಲಿಸಿದ್ದಕ್ಕೆ ಒಕ್ಕಲಿಗರ ಪ್ರೀತಿ ಮತ್ತಷ್ಟು ಹೆಚ್ಚಿಸಿಕೊಳ್ಳಲು ಕುಮಾರಸ್ವಾಮಿ ದಾಳ ಉರುಳಿಸಿದರೂ ಅಚ್ಚರಿ ಏನಿಲ್ಲ. ಜೆಡಿಎಸ್‌ ಈಗ ಎನ್‌ಡಿಎ ಮೈತ್ರಿಕೂಟದಲ್ಲಿದೆ ಎಂದು ಡಿ.ಕೆ ಶಿವಕುಮಾರ್‌ ಹೇಳಿಕೆ ಕೊಟ್ಟಿರಬಹುದು. ಆದರೂ ರಾಜಕೀಯದಲ್ಲಿ ನಿರ್ಧಾರಗಳು ಅದಲು ಬದಲಾಗುವುದು ಅಸಾಧ್ಯವೇನಲ್ಲ.

ದಲಿತ ಮುಖ್ಯಮಂತ್ರಿ ಕೂಗಿಗೆ ಸುರೇಶ್‌ಗೌಡರ ಶಕ್ತಿ..

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಕೇಳಿಬರುತ್ತಿರುವ ಸಮಯದಲ್ಲೇ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್‌ ಗೌಡ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ. ಡಾ ಜಿ ಪರಮೇಶ್ವರ್ ಸಿಎಂ ಆಗ್ತಾರೆ ಎನ್ನುವ ಸಚಿವ ರಾಜಣ್ಣ ಹೇಳಿಕೆ ಬೆನ್ನಲ್ಲೇ, ಪರಮೇಶ್ವರ್‌ ಮುಖ್ಯಮಂತ್ರಿ ಆದರೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ಶಾಸಕ ಸುರೇಶ್‌ಗೌಡ ಮಧುಗಿರಿಯಲ್ಲಿ ಹೇಳಿದ್ದಾರೆ. ನಾನು ಈ ಹಿಂದೆ ಗೋವಿಂದ ಕಾರಜೋಳ ಅವರನ್ನ ಮುಖ್ಯಮಂತ್ರಿ ಮಾಡಿ ಅಂತ ಬಿಜೆಪಿ ನಾಯಕರಿಗೇ ಕೇಳಿಕೊಂಡಿದ್ದೆ. ಈಗ ಡಾ ಜಿ. ಪರಮೇಶ್ವರ್ ಅವರ ಹೆಸರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಚರ್ಚೆಗೆ ಬಂದಿದೆ. ಸ್ವಾತಂತ್ರ ಬಂದು ಇಷ್ಟು ವರ್ಷ ಆದರೂ ತುಮಕೂರಿನಿಂದ ಯಾರೊಬ್ಬರೂ ಮುಖ್ಯಮಂತ್ರಿ ಆಗಿಲ್ಲ. ಹಿಗಾಗಿ ಪರಮೇಶ್ವರ್‌ಗೆ ನಮ್ಮ ಸಂಪೂರ್ಣ ಬೆಂಬಲ ಎಂದಿದ್ದಾರೆ.

ಜೆಡಿಎಸ್‌ ‘ಒಕ್ಕಲಿಗ ಅಸ್ತ್ರ’ ಬಿಜೆಪಿ ‘ದಲಿತ ಅಸ್ತ್ರ’

ಜೆಡಿಎಸ್‌ ಒಕ್ಕಲಿಗರನ್ನೇ ನೆಚ್ಚಿಕೊಂಡಿರುವ ಪಾರ್ಟಿ. ಹೀಗಾಗಿ ಒಕ್ಕಲಿಗ ನಾಯಕನಿಗೆ ಸಪೋರ್ಟ್‌ ಮಾಡುವ ಮೂಲಕ ರಾಜಕೀಯ ದಾಳ ಉರುಳಿಸಿದೆ. ಅದೇ ರೀತಿ ಬಿಜೆಪಿ ನಾಯಕರು ದಲಿತ ನಾಯಕನನ್ನು ಸಿಎಂ ಮಾಡುವುದಾದರೆ ನಮ್ಮ ಬೆಂಬಲ ಎನ್ನುವ ಮೂಲಕ ದಲಿತಾಸ್ತ್ರ ಪ್ರಯೋಗ ಮಾಡಿದೆ. ಜೆಡಿಎಸ್‌ ಹಾಗು ಬಿಜೆಪಿ ಇಬ್ಬರಿಗೂ ಬೇಕಿರುವುದು ಒಂದೇ ಕೆಲಸ. ಅದು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇರಬಾರದು ಅಷ್ಟೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದಲಿತ ಸಮುದಾಯದ ನಾಯಕರಾದರೂ ಸರಿ. ಡಿಸಿಎಂ ಆಗಿರುವ ಡಿ.ಕೆ ಶಿವಕುಮಾರ್‌ ನೇತೃತ್ವದ ಒಕ್ಕಲಿಗ ಸಮುದಾಯದ ಶಾಸಕರಾದರೂ ಸರಿ ತಿರುಗಿ ಬೀಳಬೇಕು ಎನ್ನುವ ಉದ್ದೇಶ ಅಡಗಿದೆ ಎನ್ನುವಂತಹ ಮಾತುಗಳು ಕೇಳಿಬರುತ್ತಿವೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲಿಂಗಾಯತ ಮಠಗಳು ಹೀಗಿರಬೇಕು..! : ಡಾ. ಜೆ ಎಸ್ ಪಾಟೀಲ ಅವರ ಬರಹ

Next Post

ಭಾರತದ ಆರ್ಥಿಕತೆ ವಿಚಾರದಲ್ಲಿ ನಾಯಕರ ಕೀಳುಮಟ್ಟದ ವ್ಯಂಗ್ಯ..!

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಭಾರತದ ಆರ್ಥಿಕತೆ ವಿಚಾರದಲ್ಲಿ ನಾಯಕರ ಕೀಳುಮಟ್ಟದ ವ್ಯಂಗ್ಯ..!

ಭಾರತದ ಆರ್ಥಿಕತೆ ವಿಚಾರದಲ್ಲಿ ನಾಯಕರ ಕೀಳುಮಟ್ಟದ ವ್ಯಂಗ್ಯ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada