Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

Karnataka cm Oath-Ttaking ; ನಾಳೆ ಸಿಎಂ, ಡಿಸಿಎಂ ಪ್ರಮಾಣವಚನ ; ಬೆಂಗಳೂರಿನಲ್ಲಿ ಸಂಚಾರ ಬದಲಾವಣೆ

ಪ್ರತಿಧ್ವನಿ

ಪ್ರತಿಧ್ವನಿ

May 19, 2023
Share on FacebookShare on Twitter

ಬೆಂಗಳೂರು:ಮೇ.19: ರಾಜ್ಯದ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭ (Oath-Ttaking Ceremony) ನಾಳೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ನೂತನ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ವಾಹನ ಸಂಚಾರ ಮಾರ್ಗದಲ್ಲಿ‌ ಬದಲಾವಣೆ ಮಾಡಲಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

BJP strongly opposed to Rahul Gandhi’s statement : ಪ್ರಧಾನಿ ಮೋದಿ ದೇವರನ್ನೂ ಕನ್ಫ್ಯೂಸ್ ಮಾಡುತ್ತಾರೆ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿ ..!

Implementation of Congress Five Guarantee : ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳ ಜಾರಿ : ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಮುಂದೂಡಿಕೆ

Protest of wrestlers : ಕುಸ್ತಿಪಟುಗಳ ಪ್ರತಿಭಟನೆ ; ‘ಮಹಾ ಪಂಚಾಯತ್‌’ ನಡೆಸುವುದಾಗಿ ಟಿಕಾಯತ್‌ ಹೇಳಿಕೆ..!

ನಾಳೆ ಬೆಳಗ್ಗೆ 9.30 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ

1.ಹಲಸೂರು ಗೇಟ್ ಕಡೆಯಿಂದ ಸಿದ್ದಲಿಂಗಯ್ಯ ಸರ್ಕಲ್ ಕಡೆಗೆ ಹೋಗುವ ವಾಹನಗಳನ್ನು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.

2. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯ ವ್ಯಕ್ತಿಗಳ ವಾಹನಗಳನ್ನು ಸೆಂಟ್ ಜೋಸೆಫ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

3.ಇತರೆ ವಾಹನಗಳನ್ನು ಬಿಬಿಎಂಪಿ ಮುಖ್ಯ ಕಛೇರಿ ಆವರಣ, ಬದಾಮಿ ಹೌಸ್, ಕೆ.ಜಿ. ರಸ್ತೆಯ ಎಡ ಬದಿಯಲ್ಲಿ ಹಾಗು ಯುನೈಟೆಡ್ ಮಿಷನ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಬಹುದು.

4.ಆರ್.ಆರ್.ಎಂ.ಆರ್ ರಸ್ತೆ ಹಾಗು ಕಸ್ತೂರ್ಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

5.ಕಾರ್ಯಕ್ರಮಕ್ಕೆ ಆಗಮಿಸುವ ಆಹ್ವಾನಿತರು ತಮ್ಮ ತಮ್ಮ ವಾಹನಗಳಿಂದ ಇಳಿದು ಕೆ.ಬಿ. ರಸ್ತೆ,ಆರ್.ಆರ್.ಎಂ.ಆರ್ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯ ಗೇಟ್‌ಗಳ ಮೂಲಕ ನಡೆದು ಒಳಗೆ ಪ್ರವೇಶಿಸಬೇಕಾಗಿರುತ್ತೆ. ಹಾಗು ತಮ್ಮ ವಾಹನಗಳನ್ನು ಮೇಲ್ಕಂಡ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಲು ಮನವಿ ಮಾಡಲಾಗಿದೆ.

6.ಸಾರ್ವಜನಿಕರು ಕೆಜಿ ರಸ್ತೆಯ ಎಸ್.ಬಿ.ಎಂ ಜಂಕ್ಷನ್ ಬಳಿ, ರಿಚ್ ಮಂಡ್ ಸರ್ಕಲ್ ಬಳಿ/ಕ್ವೀನ್ಸ್ ಸರ್ಕಲ್ ಬಳಿ ವಾಹನದಿಂದ ಇಳಿದು ತಮ್ಮ ವಾಹನಗಳನ್ನು ಅರಮನೆ ಮೈದಾನದಲ್ಲಿ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

7.ಸಮಾರಂಭ ಸ್ಥಳದಲ್ಲಿ ಯಾವುದೇ ರೀತಿಯ ಸ್ಫೋಟಕ, ಚೂಪಾದ ವಸ್ತುಗಳನ್ನು ಬೆಂಕಿಪಟ್ಟಣ, ಲೈಟರ್, ಇತ್ಯಾದಿಗಳನ್ನು ಕೊಂಡೊಯ್ಯಬಾರದು.

8.ರಸ್ತೆ ಬಳಕೆದಾರರು ಸಂಚಾರ ಪೊಲೀಸರು ನೀಡುವ ಸೂಚನೆಗಳನ್ನು ಪಾಲಿಸಬೇಕು

9.ನಗರದ ಯಾವುದಾದರೂ ರಸ್ತೆಯಲ್ಲಿ ವಾಹನ ಕೆಟ್ಟು ನಿಂತಲ್ಲಿ ಅಥವಾ ಅಪಘಾತ ಸಂಭವಿಸಿದಲ್ಲಿ ಗಮನಿಸಿದ ಕೂಡಲೇ ಸಂಚಾರ ನಿಯಂತ್ರಣ ಕೋಣೆ ದೂರವಾಣಿ ಸಂಖ್ಯೆ-080-22943131 ಅಥವಾ 080-22943030 ಗೆ ಕರೆ ಮಾಡಿ ಮಾಹಿತಿ ನೀಡಲು ಕೋರಿಕೆ.

10.ಮುಖ್ಯ ಕೆಲಸಗಳಿಗೆ ಹಾಗು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಇಚ್ಛಿಸುವವರು ಸಾಕಷ್ಟು ಮುಂಚೆಯೇ ಪ್ರಯಾಣವನ್ನು ಪ್ರಾರಂಭಿಸಲು ಮನವಿ

11.ಸಿಇಟಿ ಪರೀಕ್ಷೆಗೆ ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬೆಳಿಗ್ಗೆ 8.30ರ ಒಳಗಾಗಿ ತಲುಪುವಂತೆ ಸೂಚನೆ ನೀಡಲಾಗಿದೆ.

12.ಯಾವುದೇ ವಿದ್ಯಾರ್ಥಿಗೆ ಸಂಚಾರ ಸಂಬಂಧಿತ ಸಹಾಯ ಬೇಕಿದ್ದಲ್ಲಿ, ರಸ್ತೆಯಲ್ಲಿ ಕರ್ತವ್ಯನಿರತ ಸಂಚಾರ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.

13.ಮಧ್ಯಾಹ್ನದ ಸಿಇಟಿ ಪರೀಕ್ಷೆಗೆ ಸೆಂಟ್ ಜೋಸೆಫ್ ಪಿಯು ಇಂಡಿಯನ್ ಕಾಲೇಜು, ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು ಸೆಂಟ್ ಮಾರ್ಕ್ಸ್ ರಸ್ತೆ, ವಿಠಲ್ ಮಲ್ಯ ರಸ್ತೆ ಮೂಲಕ ಬಂದು ಯೂಬಿ ಸಿಟಿಯ ಮುಂಭಾಗದ ಗೇಟ್‌ನಿಂದ ಕಾಲೇಜಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

14.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಸೆಂಟ್ ಜೋಸೆಫ್ ಪಿಯು ಕಾಲೇಜಿನ ಅಧಿಕಾರಿಗಳು ಸೆಂಟ್ ಜೋಸೆಫ್ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಗತ್ಯ ಉಟೋಪಚಾರವನ್ನು ಏರ್ಪಡಿಸಿರುತ್ತಾರೆ.

15.ಸ್ಟೀನ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಭಂದಿಸಿದ್ದು, ರಸ್ತೆ ಬಳಕೆದಾರರು ಕ್ಲೀನ್ಸ್ ವೃತ್ತದಲ್ಲಿ ಎಡ ಅಥವಾ ಬಲ ತಿರುವು ಪಡೆದು ಲ್ಯಾವಲ್ಲೆ ರಸ್ತೆ ಅಥವಾ ಕ್ಲೀನ್ಸ್ ರಸ್ತೆಯ ಮೂಲಕ ಸಂಚರಿಸಬಹುದಾಗಿದೆ.

16.ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ತೆರಳುವ ವಾಹನಗಳನ್ನು ಪಟ್ಟಾ ಜಂಕ್ಷನ್‌ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ಡೈವರ್ಷನ್ ಮಾಡುವುದರಿಂದ ಬಿಎಂಟಿಸಿ ಹಾಗು ಇತರೆ ವಾಹನಗಳು ಪೊಲೀಸ್ ತಿಮ್ಮಯ್ಯ ವೃತ್ತದಲ್ಲಿ ಎಡ ತಿರುವು ಪಡೆದು ಕೆ.ಆರ್.ಸರ್ಕಲ್ ಮುಖೇನ ಸಂಚರಿಸಬಹುದು.

17.ಸಿಟಿಓ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ವಾಹನಗಳ ಸಂಚಾರವನ್ನು ನಿರ್ಭಂದಿಸಿದ್ದು, ರಸ್ತೆ ಬಳಕೆದಾರರು.

18.ಕಬ್ಬನ್ ರಸ್ತೆಯ ಮುಖೇನ ಅನಿಲ್ ಕುಂಬ್ಳೆ ವೃತ್ತದ ಕಡೆಗೆ ಅಥವಾ ಮಣಿಪಾಲ್ ಸೆಂಟರ್‌ ಕಡೆಗೆ ಸಂಚರಿಸಬಹುದು.

RS 500
RS 1500

SCAN HERE

Pratidhvani Youtube

«
Prev
1
/
4512
Next
»
loading
play
Brij Bhushan Sharan Singh | ನನ್ನ ವಿರುದ್ಧದ ಆರೋಪ‌‌ ಸಾಬೀತಾದ್ರೆ ನಾನು ನೇಣಿಗೆ ಶರಣಾಗುತ್ತೇನೆ #Pratidhvani
play
Live : ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ #congress #dcmdkshivakumar
«
Prev
1
/
4512
Next
»
loading

don't miss it !

We will prepare a master plan : ಬೆಂಗಳೂರು ಬದಲಾವಣೆಗೆ ಮಾಸ್ಟರ್ ಪ್ಲಾನ್ ಶೀಘ್ರ ರೂಪಿಸುತ್ತೇವೆ : ಡಿಸಿಎಂ
Top Story

We will prepare a master plan : ಬೆಂಗಳೂರು ಬದಲಾವಣೆಗೆ ಮಾಸ್ಟರ್ ಪ್ಲಾನ್ ಶೀಘ್ರ ರೂಪಿಸುತ್ತೇವೆ : ಡಿಸಿಎಂ

by ಪ್ರತಿಧ್ವನಿ
May 29, 2023
Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ  ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ
Top Story

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

by ಪ್ರತಿಧ್ವನಿ
May 30, 2023
New Ministers of the State | ರಾಜ್ಯದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ
Top Story

New Ministers of the State | ರಾಜ್ಯದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ

by ಪ್ರತಿಧ್ವನಿ
May 29, 2023
congress gurantees | ಮನೆ ಯಜಮಾನಿ.. ಮನೆ ಇಬ್ಭಾಗ.. ಮತ ಇಬ್ಭಾಗ.. ಕಾಂಗ್ರೆಸ್‌‌ಗೆ ಭೀತಿ..!
Top Story

congress gurantees | ಮನೆ ಯಜಮಾನಿ.. ಮನೆ ಇಬ್ಭಾಗ.. ಮತ ಇಬ್ಭಾಗ.. ಕಾಂಗ್ರೆಸ್‌‌ಗೆ ಭೀತಿ..!

by ಕೃಷ್ಣ ಮಣಿ
May 31, 2023
ನೀರಿನ ದಾಹ ನೀಗಿಸಲು ಸ್ವಂತ ಹಣದಲ್ಲಿ ಬೋರವೆಲ್ ಕೊರಿಸಿದ ಆಂಧ್ರ ರೈತ- ಸ್ಥಳೀಯರ ಮೆಚ್ಚುಗೆ
ಕರ್ನಾಟಕ

ನೀರಿನ ದಾಹ ನೀಗಿಸಲು ಸ್ವಂತ ಹಣದಲ್ಲಿ ಬೋರವೆಲ್ ಕೊರಿಸಿದ ಆಂಧ್ರ ರೈತ- ಸ್ಥಳೀಯರ ಮೆಚ್ಚುಗೆ

by Prathidhvani
May 26, 2023
Next Post
New State Government | ನೂತನ ರಾಜ್ಯ ಸರ್ಕಾರ, ಹೇಗಿದೆ ಭದ್ರತೆ..? ಟ್ರಾಫಿಕ್,​​​ ಕಾಂಗ್ರೆಸ್​ ಗ್ಯಾರಂಟಿ..!

New State Government | ನೂತನ ರಾಜ್ಯ ಸರ್ಕಾರ, ಹೇಗಿದೆ ಭದ್ರತೆ..? ಟ್ರಾಫಿಕ್,​​​ ಕಾಂಗ್ರೆಸ್​ ಗ್ಯಾರಂಟಿ..!

Bajrangi didn’t come to BJP’s help | ಬಿಜೆಪಿ ಸಹಾಯಕ್ಕೆ ಭಜರಂಗಿ ಬರಲಿಲ್ಲ, ಮುಂದೆ ​ಶ್ರೀರಾಮನೂ ಬರಲ್ವಾ..!?

Bajrangi didn't come to BJP's help | ಬಿಜೆಪಿ ಸಹಾಯಕ್ಕೆ ಭಜರಂಗಿ ಬರಲಿಲ್ಲ, ಮುಂದೆ ​ಶ್ರೀರಾಮನೂ ಬರಲ್ವಾ..!?

Congress High Command | ಕಾಂಗ್ರೆಸ್ ಹೈಕಮಾಂಡ್ ಮಾಡಿದ ಸರಣಿ ತಪ್ಪುಗಳು

Congress High Command | ಕಾಂಗ್ರೆಸ್ ಹೈಕಮಾಂಡ್ ಮಾಡಿದ ಸರಣಿ ತಪ್ಪುಗಳು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist