ನವದೆಹಲಿ :ಮೇ.18: ಕರ್ನಾಟಕದ ಸಿಎಂ ಆಯ್ಕೆ ವಿಚಾರ ಬಗೆಹರಿದಿದೆ. ಅಧಿಕಾರ ಹಂಚಿಕೆ ಮಾಡಲಾಗಿದ್ದು, 5 ವರ್ಷಗಳ ಅವಧಿಯಲ್ಲಿ ತಲಾ ಎರಡೂವರೆ ವರ್ಷಗಳ ಕಾಲ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರ ಅನುಭವಿಸಲಿದ್ದಾರೆ. ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಹಾಗೂ ಡಿಕೆಶಿ ಡಿಸಿಎಂ ಆಗಲಿದ್ದಾರೆ. ಶನಿವಾರ ಮೇ 20 ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.


ಒಂದೇ ಕಾರಿನಲ್ಲಿ ಡಿಕೆಶಿ-ಸಿದ್ದು : ದೆಹಲಿಯ ಕೆ.ಸಿ.ವೇಣುಗೋಪಾಲ್ ಮನೆಯಲ್ಲಿ ಸಭೆ ಮಾಡಿದ ಬಳಿಕ ಒಂದೇ ಕಾರಿನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ.