ಮಂಗಳೂರು :ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅನುಕಂಪದ ಆಧಾರದ ಮೇಲೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೂತನಾ ನೆಟ್ಟಾರು ನೇಮಕಾತಿಯನ್ನು ಹೊಸ ಸರ್ಕಾರ ರದ್ದು ಮಾಡಿದೆ.

2022ರ ಸೆಪ್ಟೆಂಬರ್ 22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಗುತ್ತಿದೆ ಆಧಾರದಲ್ಲಿ ನೂತನಾ ನೆಟ್ಟಾರುಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕೆಲಸ ನೀಡಿದ್ದರು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಈ ನೇಮಕಾತಿಯನ್ನು ರದ್ದು ಮಾಡಿದೆ.
ಪ್ರವೀಣ್ ನೆಟ್ಟಾರು ಪತ್ನಿ ನೂತನ ನೆಟ್ಟಾರುಗೆ ನೀಡಿದ ಕೆಲಸದ ಆದೇಶ ಪ್ರತಿಯಲ್ಲಿಯೇ ಪ್ರಸ್ತುತ ಸರ್ಕಾರ ಅಧಿಕಾರದಲ್ಲಿ ಇರುವವರೆಗೆ ಮಾತ್ರ ಈ ಹುದ್ದೆ ಇರಲಿದೆ ಎಂದು ನಮೂದಾಗಿತ್ತು. ಅಂತೆಯೇ ಹೊಸ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರ್ತಿದ್ದಂತೆಯೇ ನೂತನಾ ನೆಟ್ಟಾರು ಕೆಲಸಕ್ಕೆ ಕೊಕ್ಕೆ ಬಿದ್ದಿದೆ.
ಕೆಲವೇ ದಿನಗಳ ಹಿಂದೆಯಷ್ಟೇ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸುಸಜ್ಜಿತ ಮನೆ ನಿರ್ಮಾಣ ಮಾಡಿ ಕೊಡಲಾಗಿತ್ತು.