• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀಟ್ ಪರೀಕ್ಷೆ ಅಕ್ರಮ: ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರತಿಧ್ವನಿ by ಪ್ರತಿಧ್ವನಿ
July 22, 2026
in Top Story, ಕರ್ನಾಟಕ, ರಾಜಕೀಯ
0
ನೀಟ್ ಪರೀಕ್ಷೆ ಅಕ್ರಮ: ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ದೇಶದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

NEET Protest : ದೇಶದ್ರೋಹಿಗಳು ಸರ್ಕಾರ ನಡೆಸುತ್ತಿದ್ದಾರೆ..! #pratidhvani

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕುಸಿತಗೊಳಿಸಿವೆ. ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಅನ್ಯಾಯವಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಇಲಾಖೆಯ ವೈಫಲ್ಯಕ್ಕೆ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು. ನೀಟ್ ಅಕ್ರಮಗಳ ಕುರಿತು ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಶಿಕ್ಷಿಸಬೇಕು ಹಾಗೂ ದೇಶದ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಕಚೇರಿಯತ್ತ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ಬ್ಯಾರಿಕೇಡ್‌ಗಳ ಮೂಲಕ ತಡೆದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

NEET Protest : ನೀಟ್ ವಿರುದ್ಧ ವಿದ್ಯಾರ್ಥಿಗಳ ಹೊರಟ ನ್ಯಾಯವಾಗಿದೆ.! #pratidhvani

ಪಕ್ಷವು ಸ್ಪಷ್ಟಪಡಿಸಿರುವಂತೆ, ದೇಶದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕುವವರೆಗೆ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಸಂಪೂರ್ಣ ಸತ್ಯ ಹೊರಬರುವವರೆಗೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗುವವರೆಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ತನ್ನ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಿದೆ ಎಂದು ಪ್ರತಿಭಟನಾನಿರತ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Delhi Congress Protest:  ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದ ಪೊಲೀಸ್ರು #pratidhvani
Previous Post

ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ : ಸಚಿವ ಜಾರ್ಜ್‌ ಬಿಗ್‌ ಅಪ್ಡೇಟ್..!

Next Post

ಕಾವೇರಿ ನೀರು ಹಂಚಿಕೆ: ಮಳೆ ಸ್ಥಿತಿ ನೋಡಿದ ಬಳಿಕವೇ ಅಂತಿಮ ನಿರ್ಧಾರ

Related Posts

ಯಾರು ಈ ಅಭಿಜೀತ್ ದಿಪ್ಕೆ? ಕೆಲವೇ ದಿನಗಳಲ್ಲಿ ವೈರಲ್ ಆದ ‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದಿರುವ ಯುವಕನ ಕಥೆ ಇಲ್ಲಿದೆ
Top Story

ಯಾರು ಈ ಅಭಿಜೀತ್ ದಿಪ್ಕೆ? ಕೆಲವೇ ದಿನಗಳಲ್ಲಿ ವೈರಲ್ ಆದ ‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದಿರುವ ಯುವಕನ ಕಥೆ ಇಲ್ಲಿದೆ

by ಪ್ರತಿಧ್ವನಿ
July 22, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ 'ಕಾಕ್ರೋಚ್ ಜನತಾ ಪಾರ್ಟಿ' (Cockroach Janata Party - CJP) ಹಿಂದೆ ನಿಂತಿರುವ ಪ್ರಮುಖ ವ್ಯಕ್ತಿ ಅಭಿಜೀತ್...

Read moreDetails
ಚೆನ್ನಮ್ಮ ಸಮಾಧಿ ಬಳಿ ಭಾವುಕ ಮಾತು; ಒಂದೂವರೆ ವರ್ಷದ ನೋವು ಹಂಚಿಕೊಂಡ ಕುಮಾರಸ್ವಾಮಿ

ಚೆನ್ನಮ್ಮ ಸಮಾಧಿ ಬಳಿ ಭಾವುಕ ಮಾತು; ಒಂದೂವರೆ ವರ್ಷದ ನೋವು ಹಂಚಿಕೊಂಡ ಕುಮಾರಸ್ವಾಮಿ

July 22, 2026
ಕಾಂಗ್ರೆಸ್ ಪಕ್ಷದ ಕಚೇರಿ ರಕ್ಷಣೆಗಾಗಿ ಕಾರ್ಯಕರ್ತರು ಪ್ರಾಣತ್ಯಾಗ ಮಾಡಲು ಸಿದ್ಧ-ಬಿ.ಕೆ ಹರಿಪ್ರಸಾದ್

ಕಾಂಗ್ರೆಸ್ ಪಕ್ಷದ ಕಚೇರಿ ರಕ್ಷಣೆಗಾಗಿ ಕಾರ್ಯಕರ್ತರು ಪ್ರಾಣತ್ಯಾಗ ಮಾಡಲು ಸಿದ್ಧ-ಬಿ.ಕೆ ಹರಿಪ್ರಸಾದ್

July 22, 2026
ಕಾವೇರಿ ನೀರು ಹಂಚಿಕೆ: ಮಳೆ ಸ್ಥಿತಿ ನೋಡಿದ ಬಳಿಕವೇ ಅಂತಿಮ ನಿರ್ಧಾರ

ಕಾವೇರಿ ನೀರು ಹಂಚಿಕೆ: ಮಳೆ ಸ್ಥಿತಿ ನೋಡಿದ ಬಳಿಕವೇ ಅಂತಿಮ ನಿರ್ಧಾರ

July 22, 2026
ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ : ಸಚಿವ ಜಾರ್ಜ್‌ ಬಿಗ್‌ ಅಪ್ಡೇಟ್..!

ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ : ಸಚಿವ ಜಾರ್ಜ್‌ ಬಿಗ್‌ ಅಪ್ಡೇಟ್..!

July 22, 2026
Next Post
ಕಾವೇರಿ ನೀರು ಹಂಚಿಕೆ: ಮಳೆ ಸ್ಥಿತಿ ನೋಡಿದ ಬಳಿಕವೇ ಅಂತಿಮ ನಿರ್ಧಾರ

ಕಾವೇರಿ ನೀರು ಹಂಚಿಕೆ: ಮಳೆ ಸ್ಥಿತಿ ನೋಡಿದ ಬಳಿಕವೇ ಅಂತಿಮ ನಿರ್ಧಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!