• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ –ಹೆಚ್‌ಡಿಕೆ

Any Mind by Any Mind
May 10, 2021
in ಕರ್ನಾಟಕ
0
ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ –ಹೆಚ್‌ಡಿಕೆ

Bengaluru: Karnataka Chief Minister H. D. Kumaraswamy addresses during a JD-S programme in Bengaluru on June 7, 2019. (Photo: IANS)

Share on WhatsAppShare on FacebookShare on Telegram

ADVERTISEMENT

ಕರೋನಾ ಸೋಂಕು ಹೆಚ್ಚು ಉಲ್ಬಣಗೊಂಡ ಕಾರಣ ಇಂದಿನಿಂದ 14 ದಿನಗಳಕಾಲ ರಾಜ್ಯ ಸರ್ಕಾರ ಲಾಕ್‌ಡೌನ್‌ ಅವಧಿಯನ್ನು ವಿಸ್ತರಿಸಿದೆ. ಈ ಸಂಬಂಧ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್ ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ ಎಂದು ಆಕ್ರೋಶಗೊಂಡಿದ್ದಾರೆ.

ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್ ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್ ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು ಎಂದಿದ್ದಾರೆ.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು, ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕುತ್ತದೆ ಎಂದು ರಾಜ್ಯ ಸರ್ಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕಿಸಿದ್ದಾರೆ.

Previous Post

ಕೊನೆಗೂ ಅಪ್ಪನ ಮುಖ ನೋಡಲಾಗಲಿಲ್ಲ: ವಿಜ್ಞಾನಿ, CPIM ಸದಸ್ಯ ಮಹಾವೀರ್ ನರ್ವಾಲ್ ಕರೋನಗೆ ಬಲಿ

Next Post

ಸರಕಾರ, ಸಾರ್ವಜನಿಕರು ಎಚ್ಚೆತ್ತುಕೊಳ್ಳದಿದ್ದರೆ ಆಗಸ್ಟ್ ನೊಳಗೆ 10 ಲಕ್ಷ ಜನರ ಸಾವಿನ ಸೂಚನೆ..!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಭಾರತದಲ್ಲಿ ಕರೋನಾ 2ನೇ ಅಲೆ; ಮೋದಿ ಸೃಷ್ಟಿಸಿದ ರಾಷ್ಟ್ರೀಯ ದುರಂತ

ಸರಕಾರ, ಸಾರ್ವಜನಿಕರು ಎಚ್ಚೆತ್ತುಕೊಳ್ಳದಿದ್ದರೆ ಆಗಸ್ಟ್ ನೊಳಗೆ 10 ಲಕ್ಷ ಜನರ ಸಾವಿನ ಸೂಚನೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada