ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ..? ಬಿಜೆಪಿ ನಾಯಕರ ಕೆಲವು ಹೇಳಿಕೆಗೆ ಹೆಚ್‌ಡಿಕೆ ಗರಂ

ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ..? ಜಡ್ಜ್‌ಗಳು ಸರ್ವಜ್ಞರಲ್ಲ, ಕರೋನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು, ನೇಣು ಹಾಕಿಕೊಳ್ಳಲು ಆಗುತ್ತಾ..? ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ, ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ ಎಂದ ಬಿಜೆಪಿ ನಾಯಕರ ಹೇಳಿಕೆಗೆ ಜೆಡಿಎಸ್‌ ನಾಯಕ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು ಎಂದಿದ್ದಾರೆ.

ರಾಜ್ಯದಲ್ಲಿ ಕರೋನಾ ಲಸಿಕೆ, ಆಕ್ಸಿಜನ್‌ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರು, ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ‘ನಿಮ್ಮ ಕರ್ತ್ಯವ್ಯ ನೀವು ಮಾಡಿ.’ ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ ಎಂದು ಎಚ್ಚರಿಸಿದ್ದಾರೆ.

ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ ಎಂದು ರಾಜ್ಯದ ಬಿಜೆಪಿ ನಾಯಕರಿಗೆ ಮನದಟ್ಟು ಮಾಡುವ ಪ್ರಯತ್ನ ಮಾಡಿದ್ದಾರೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...