ಕೋವಿಡ್ ನಿಯಂತ್ರಣ ಹಿನ್ನೆಲೆ ರಾಜ್ಯದಲ್ಲಿ ಜೂನ್ 7 ರ ಬಳಿಕ ಮತ್ತೆ ಒಂದು ವಾರಗಳ ಕಾಲ ಲಾಕ್ಡೌನ್ ವಿಸ್ತರಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಭೆ ನಡೆದಿದ್ದು, ಈ ಕುರಿತು ಸಿಎಂ ನಾಳೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ.

ಕೋವಿಡ್ 3ನೇ ಅಲೆ ಸಂಬಂಧ ಪೂರ್ವಸಿದ್ಧತೆ ಕುರಿತಂತೆ ರಚಿಸಲಾಗಿರುವ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೂ ಸಿಎಂ ಸಭೆ ನಡೆಸಿದ್ದು, ಒಂದು ವಾರದೊಳಗೆ ಕಾರ್ಯಪಡೆ ವರದಿಯನ್ನು ಸಲ್ಲಿಸಲಿದ್ದು, ವರದಿ ಆಧರಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ

ಇದರ ಮಧ್ಯೆಯೇ ರಾಜ್ಯ ಸರ್ಕಾರ ಲಾಕ್ಡೌನ್ ಮಾರ್ಗಸೂಚಿಯಲ್ಲಿ ಸ್ವಲ್ಪ ಸಡಿಲಿಕೆ ಮಾಡಿದೆ. ಆರ್ಥಿಕ ನಷ್ಟ ಅನುಭವಿಸುತ್ತಿರುವ ಹಿನ್ನೆಲೆ, ಆರ್ಥಿಕ ಚುಟುವಟಿಕೆ ಚುರುಕುಗೊಳಿಸುವ ಸಲುವಾಗಿ ರಫ್ತು ಆಧಾರಿತ ಕೈಗಾರಿಕೆಗಳಿಗೆ ಸರ್ಕಾರದಿಂದ ಅವಕಾಶ ಲಭ್ಯವಾಗಿದೆ. ಶೇಕಡಾ 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಣೆ ಮಾಡಬಹುದೆಂದು ಸರ್ಕಾರ ಆದೇಶ ಹೊರಡಿಸಿದೆ.










