ಕರ್ನಾಟಕ: ಲಾಕ್‌ಡೌನ್‌ ವಿಸ್ತರಣೆ- ನಾಳೆ ಅಧಿಕೃತ ಘೋಷಣೆ ಸಾಧ್ಯತೆ..?

ಕೋವಿಡ್‌ ನಿಯಂತ್ರಣ ಹಿನ್ನೆಲೆ  ರಾಜ್ಯದಲ್ಲಿ ಜೂನ್‌ 7 ರ ಬಳಿಕ ಮತ್ತೆ ಒಂದು ವಾರಗಳ  ಕಾಲ ಲಾಕ್‌ಡೌನ್‌  ವಿಸ್ತರಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು  ಸಭೆ ನಡೆದಿದ್ದು, ಈ ಕುರಿತು ಸಿಎಂ ನಾಳೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ.

ಕೋವಿಡ್ 3ನೇ ಅಲೆ ಸಂಬಂಧ ಪೂರ್ವಸಿದ್ಧತೆ ಕುರಿತಂತೆ ರಚಿಸಲಾಗಿರುವ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೂ ಸಿಎಂ  ಸಭೆ ನಡೆಸಿದ್ದು, ಒಂದು ವಾರದೊಳಗೆ ಕಾರ್ಯಪಡೆ ವರದಿಯನ್ನು ಸಲ್ಲಿಸಲಿದ್ದು, ವರದಿ ಆಧರಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ

ಇದರ ಮಧ್ಯೆಯೇ ರಾಜ್ಯ ಸರ್ಕಾರ ಲಾಕ್‌ಡೌನ್‌ ಮಾರ್ಗಸೂಚಿಯಲ್ಲಿ ಸ್ವಲ್ಪ ಸಡಿಲಿಕೆ ಮಾಡಿದೆ. ಆರ್ಥಿಕ ನಷ್ಟ ಅನುಭವಿಸುತ್ತಿರುವ ಹಿನ್ನೆಲೆ, ಆರ್ಥಿಕ ಚುಟುವಟಿಕೆ ಚುರುಕುಗೊಳಿಸುವ ಸಲುವಾಗಿ ರಫ್ತು ಆಧಾರಿತ ಕೈಗಾರಿಕೆಗಳಿಗೆ ಸರ್ಕಾರದಿಂದ ಅವಕಾಶ ಲಭ್ಯವಾಗಿದೆ. ಶೇಕಡಾ 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಣೆ ಮಾಡಬಹುದೆಂದು ಸರ್ಕಾರ ಆದೇಶ ಹೊರಡಿಸಿದೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...