• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಒಟ್ಟು 34 JN.1 ಸೋಂಕಿತ ಪ್ರಕರಣ; ನಾಳೆ ಸಂಪುಟ ಉಪ ಸಮಿತಿ ಸಭೆ – ಸಚಿವ ದಿನೇಶ್ ಗುಂಡೂರಾವ್

Any Mind by Any Mind
December 25, 2023
in ಕರ್ನಾಟಕ
0
ಕೋಮುದ್ವೇಷಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ದಿನೇಶ್​ ಗುಂಡೂರಾವ್​ ಗುಡುಗು
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮೊ ಸಿಕ್ವೇನ್ಸಿಂಗ್ ನಲ್ಲಿ ಒಮೆಕ್ರಾನ್ ವೈರಾಣು ಉಪತಳಿ JN.1 ಪತ್ತೆಯಾಗಿದೆ. ಸುಮಾರು 34 ಕೋವಿಡ್ ಸೊಂಕಿತರಿಗೆ JN.1 ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮದವರಿಗೆ ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, JN.1 ವೈರಾಣು ರಾಜ್ಯದಲ್ಲಿ ಇರಬಹುದು ಎಂದು ಮೊದಲೇ ನಿರೀಕ್ಷಿಸಲಾಗಿತ್ತು. ಆದರೆ ಅದು ಜಿನೋಮೊ ಸಿಕ್ವೆನ್ಸಿಂಗ್ ನಲ್ಲೇ ನಮಗೆ ಸ್ಪಷ್ಟವಾಗಿ ಗೊತ್ತಾಗೊದು. ಹೀಗಾಗಿ ಜಿನೋಮೊ ಸಿಕ್ವೆನ್ಸಿಂಗ್ ಗೆ ಕಳಿಸಿದ್ವಿ.‌ ಇದೀಗ ವರದಿ ಬಂದಿದ್ದು, ರಾಜ್ಯದಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿದೆ ಎಂದರು.

ಆದರೆ ರಾಜ್ಯದ ಜನರು ಕೋವಿಡ್ ಸಂಬಂಧ ಆತಂಕ ಪಡುವ ಅಗತ್ಯವಿಲ್ಲ. JN.1 ಉಪತಳಿ ಅಪಾಯಕಾರಿ ಅಲ್ಲ ಎಂಬುದನ್ನ ತಜ್ಞರು ಈಗಾಗಲೇ ಹೇಳಿದ್ದಾರೆ. ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸ್ಬಲ್ಪ ಎಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆಯಿಂದ ಕೂಡ ಈಗಾಗಲೇ ಎಲ್ಲ ರೀತಿಯ ತಯಾರಿಗಳನ್ನ ಮಾಡಿಕೊಳ್ಳಲಾಗಿದೆ. ಕೋವಿಡ್ ಎದುರಿಸಲು ಸನ್ನದ್ದರಾಗುವಂತೆ ಎರಡು ಮೂರು ಬಾರಿ ಸಭೆ ನಡೆಸಿ ಆಸ್ಪತ್ರೆಗಳಿಗೆ ಹಾಗೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಜೆ.ಎನ್.1 ಪ್ರಕರಣಗಳ ಸಂಬಂಧ ಯಾರು ಹೊಸದಾಗಿ ಗಾಬರಿಪಡುವ ಅಗತ್ಯವಿಲ್ಲ.‌ ಬಹುತೇಕ ಜೆ.ಎನ್ 1 ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿವೆ. ಬೆಂಗಳೂರಿನಲ್ಲಿ – 20, ಮೈಸೂರು – 4, ಮಂಡ್ಯ – 3 ಸೇರಿದಂತೆ ರಾಮನಗರದಲ್ಲಿ – 1 ಒಮೆಕ್ರಾನ್ ಉಪತಳಿ JN.1 ಪತ್ತೆಯಾಗಿದ್ದು, ಇಲ್ಲಿಯ ವರೆಗೆ ಕೋವಿಡ್ ಬಂದವರಲ್ಲಿ ಮೂವರು ಸಾವನ್ನಪ್ಪಿರುವುದು ವರದಿಯಾಗಿದೆ. ಸಾವನ್ನಪ್ಪಿದವರಲ್ಲೂ JN.1 ಪಾಜಿಟಿವ್ ಇದ್ದಿದ್ದು ವರದಿಯಲ್ಲಿ ಬೆಳಕಿಗೆ ಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಕೋವಿಡ್ ಸಂಬಂಧ ರಚಿಸಲಾಗಿರುವ ಕ್ಯಾಬಿನೆಟ್ ಉಪಸಮಿತಿ ಸಭೆ ನಾಳೆ ನಡೆಯಲಿದೆ. ನಾಳೆಯ ಸಭೆಯಲ್ಲಿ ಜೆ.ಎನ್ 1 ಪ್ರಕರಣಗಳು ಸೇರಿದಂತೆ, ಕೋವಿಡ್ ನಿಯಂತ್ರಣ ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು.‌ ಸದ್ಯಕ್ಕೆ ಯಾವುದೇ ಹೊಸ ನಿರ್ಬಂಧವಿಲ್ಲ. ಈಗಾಗಲೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯನ್ನ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರು ಮಾಸ್ಕ್ ಧರಿಸುವುದು ಉತ್ತಮ ಎಂಬುದು ನಮ್ಮ ಸಲಹೆ. ಇನ್ನು 60 ವರ್ಷ ಮೇಲ್ಪಟ್ಟವರು, ಇತರ ಕಾಯಿಲೆ ಹೊಂದಿದವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.‌

ಜೆ.ಎನ್ .1 ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದು ಮಾರ್ಗಸೂಚಿ ಇಲ್ಲ. ಹೊಸ ವರ್ಷಾಚರಣೆಗೆ ನಿರ್ಭಂದ ಹೇರುವು ಬಗ್ಗೆ ಯಾವುದೇ ಚಿಂತನೆಗಳಲ್ಲ.. ನಾಳೆಯ ಸಭೆಯಲ್ಲಿ Tac ಸಮಿತಿಯ ತಜ್ಞರೊಂದಿಗೂ ಚರ್ಚಿಸಿ ಮುಂದೆ ಯಾವ ಕ್ರಮಗಳ ಬಗ್ಗೆ ತೀರ್ಮಾನಿಸ್ತೇವೆ. ಜನ‌ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡ್ತಿಲ್ಲ.‌ಆ ಮಟ್ಟಕ್ಕೆ ಪ್ಯಾನಿಕ್ ಆಗುವ ಅಗತ್ಯವಿಲ್ಲ. ಪಾಸಿಟಿವ್ ಬಂದವರು ಐಸೊಲೇಷನ್ ನಲ್ಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Tags: BJPCongress PartyCovid -19Covid 19Dinesh Gundu RaoVarientಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕರ್ನಾಟಕದಲ್ಲಿ 8 ಮಂದಿಗೆ ಜೆಎನ್‌.1 ಸೋಂಕು!

Next Post

ಸಂಸ್ಕೃತಿ ವಾಹಕ ಮಹಿಳೆಯೇ ಶೋಷಿತಳೂ ಹೌದು! : ನಾ ದಿವಾಕರ ಅವರ ಬರಹ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಸಂಸ್ಕೃತಿ ವಾಹಕ ಮಹಿಳೆಯೇ ಶೋಷಿತಳೂ ಹೌದು! : ನಾ ದಿವಾಕರ ಅವರ ಬರಹ

ಸಂಸ್ಕೃತಿ ವಾಹಕ ಮಹಿಳೆಯೇ ಶೋಷಿತಳೂ ಹೌದು! : ನಾ ದಿವಾಕರ ಅವರ ಬರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada