2024ರ ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಇಬ್ಭಾಗವಾಗಲಿದ್ದು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಸಚಿವ ಉಮೇಶ್ ಕತ್ತಿ ರಾಜ್ಯ ಒಡೆಯುವ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ನಗರದಲ್ಲಿಂದು ಮಾತನಾಡಿದ ಅವರು, 2024ರ ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಇಬ್ಭಾಗವಾಗಲಿದ್ದು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ. ದೇಶದಲ್ಲಿ 50 ಹೊಸ ರಾಜ್ಯಗಳು ಉದಯಿಸಲಿವೆ. ಆಗ ಕರ್ನಾಟಕ 2 ರಾಜ್ಯಗಳಾಗಿ ವಿಭಜನೆಯಾಗಲಿದೆ ಎಂದಿದ್ದಾರೆ.

ಇನ್ನು “ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಬೆಳಗಾವಿಯಲ್ಲಿ ಸುವರ್ಣಸೌಧ, ಧಾರವಾಡದಲ್ಲಿ ಹೈಕೋರ್ಟ್ ಇದೆ. ಪ್ರತ್ಯೇಕ ರಾಜ್ಯಕ್ಕೆ ಬೇಕಾದ ಎಲ್ಲಾ ಮೂಲಸೌಕರ್ಯವೂ ನಮ್ಮಲ್ಲಿದೆ”ಎಂದು ಹೇಳಿದ್ದಾರೆ.












