ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟಿರುವವರ ಕುಟುಂಬಗಳಿಗೆ ತಮಿಳುನಾಡು ಸರ್ಕಾರ ₹ 3 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಇದಕ್ಕೆ ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತ್ತಿಬೆಲೆ ಆಕ್ಸ್ಫರ್ಡ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿರುವ ಶವಾಗಾರಕ್ಕೆ ಭೇಟಿ ನೀಡಿದ್ದ ತಮಿಳುನಾಡಿನ ಆರೋಗ್ಯ ಸಚಿವ ಮಾ. ಸುಬ್ರಹ್ಮಣ್ಯನ್ ಅವರನ್ನು ಸುತ್ತುವರೆದಿದ್ದ ಸಂಬಂಧಿಕರು, ‘ಕರ್ನಾಟಕ ಸರ್ಕಾರ ₹ 5 ಲಕ್ಷ ಪರಿಹಾರ ಘೋಷಿಸದೆ. ಕರ್ನಾಟಕಕ್ಕೆ ಇರುವವಷ್ಟು ಕರುಣೆ ನಿಮಗಿಲ್ಲವೇ?’ ಎಂದು ತರಾಟೆಗೆ ತೆಗೆದುಕೊಂಡರು.
ಆಂಬುಲೆನ್ಸ್ ಅಡ್ಡಗಟ್ಟಿ ಧರಣಿ..!
ಮಧ್ಯಪ್ರವೇಶಿಸಿದ ಪೊಲೀಸರು, ಸಂಬಂಧಿಕರನ್ನು ಸಮಾಧಾನಪಡಿಸಿದರು. ನಂತರ, ಸಚಿವರು ಸ್ಥಳದಿಂದ ಹೊರಟು ಹೋದರು. ‘₹3 ಲಕ್ಷ ಪರಿಹಾರ ನಮಗೆ ಬೇಡ. ಅದಕ್ಕಿಂತ ಹೆಚ್ಚಿನ ಪರಿಹಾರ ನೀಡಬೇಕು. ಮೃತರ ಕುಟುಂಬದವ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಿಸಬೇಕು ಎಂದು ಆಗ್ರಹಿಸಿ ಕೆಲ ಸಂಬಂಧಿಕರು, ಶವ ಸಾಗಿಸುತ್ತಿದ್ದ ಆಂಬುಲೆನ್ಸ್ಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು. ಪ್ರತಿಭಟನಕಾರರನ್ನು ಚದುರಿಸಿದ ಪೊಲೀಸರು, ಆಂಬುಲೆನ್ಸ್ ಹೋಗಲು ದಾರಿ ಮಾಡಿಕೊಟ್ಟರು.