• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಜನರಿಗೆ ವೀಕೆಂಡ್ ಕರ್ಫ್ಯೂನಿಂದ ಮುಕ್ತಿ; ಸರ್ಕಾರದ ಹೊಸ ಮಾರ್ಗಸೂಚಿ ಏನು?

ಕರ್ಣ by ಕರ್ಣ
January 21, 2022
in ಕರ್ನಾಟಕ
0
ರಾಜ್ಯದ ಜನರಿಗೆ ವೀಕೆಂಡ್ ಕರ್ಫ್ಯೂನಿಂದ ಮುಕ್ತಿ; ಸರ್ಕಾರದ ಹೊಸ ಮಾರ್ಗಸೂಚಿ ಏನು?
Share on WhatsAppShare on FacebookShare on Telegram

ಕೊರೋನಾ ಹೆಚ್ಚಾದಾಗ ವೀಕೆಂಡ್ ಕರ್ಫ್ಯೂ ಹೇರಿದ್ದ ಸರ್ಕಾರ ಈಗ ವೀಕೆಂಡ್ ಲಾಕ್ ಗೆ ಇತಿಶ್ರೀ ಹಾಡಿದೆ. ಸಾರ್ವಜನಿಕ ವಲಯಗಳಲ್ಲಿ ಹಾಗೂ ಉದ್ಯಮಿಗಳಿಂದ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಆದರೆ ನೈಟ್ ಕರ್ಫ್ಯೂ ಹಾಗೂ ಇತರೆ ನಿರ್ಬಂಧಗಳು ಮುಂದುವರೆಯಲಿದೆ.

ADVERTISEMENT

ವೀಕೆಂಡ್ ಕರ್ಫ್ಯೂ ಮಾತ್ರ ಇಲ್ಲ.. ಉಳಿದೆಲ್ಲಾ ನಿರ್ಬಂಧಗಳು ಮುಂದುವರಿಕೆ !

ಇಂದು ಸಿಎಂ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ಸಭೆ ನಡೆಸಿದ್ದು ಎಲ್ಲರ ಚಿತ್ತ ಅತ್ತ ನೆಟ್ಟಿತ್ತು. ವೀಕೆಂಡ್ ಕರ್ಫ್ಯೂ ಕಳೆದರಡು ವಾರದಿಂದ ಜಾರಿಯಲ್ಲಿದ್ದು ಸಾರ್ವಜನಿಕ ವಲಯದಲ್ಲಿ ಸರ್ಕಾರ ಭಾರೀ ಟೀಕೆ ಟಿಪ್ಪಣಿಗಳನ್ನು ಎದುರಿಸುವಂತೆ ಮಾಡಿತ್ತು. ಜೊತೆಗೆ ಉದ್ದಿಮೆದಾರರು ಕೂಡ ವೀಕೆಂಡ್ ಕರ್ಫ್ಯೂ ಬಗ್ಗೆ ಕೆಂಡಕಾರಿದ್ದರು‌. ಇದೀಗ ಎಲ್ಲರ ಬೇಡಿಕೆಗೆ ಮನ್ನಣೆ ಸಿಕ್ಕಿದ್ದು, ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿಡುವುದಾಗಿ ಹೇಳಿದೆ. ಈ ಆದೇಶ ನಾಳೆ ಶನಿವಾರದಿಂದಲೇ ಜಾರಿಯಾಗಲಿದ್ದು, ನಾಳೆ ಎಂದಿನಂತೆ ಸಾರ್ವಜನಿಕ ಓಡಾಟ, ವ್ಯಾಪಾರ ಚಟುವಟಿಕೆಗಳು ನಡೆಯಲಿದೆ.

ನೈಟ್ ಕರ್ಫ್ಯೂ, ಇತರೆ ನಿರ್ಬಂಧಗಳು ಮುಂದುವರಿಕೆ !

ಸದ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಮಾತ್ರ ರದ್ದು ಮಾಡಿದೆ. ಆದರೆ ಎಂದಿನಂತೆ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಇದರ ಜೊತೆಗೆ ಹೋಟೆಲ್, ರೆಸ್ಟೋರೆಂಟ್ ಗಳಿಗೆ ನೀಡಲಾದ 50-50 ರೂಲ್ಸ್ ಕೂಡ ಮುಂದುವರೆಯಲಿದೆ. ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿಯಲ್ಲಿರಲಿದೆ. ಜನರು‌ ಗುಂಪುಗಟ್ಟಿ ಓಡಾಡುವುದು ಎಲ್ಲವನ್ನೂ ನಿಷೇಧಿಸಿದೆ. ಇದರ ಜೊತೆಗೆ ಬೆಂಗಳೂರು ಹೊರತು ಪಡಿಸಿ ಇತರೆ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರಯಲು ಅನುಮತಿ ನೀಡಲಾಗಿದೆ. ಆದರೆ ಒಂದು ಶಾಲೆಯಲ್ಲಿ 5 ಮಕ್ಕಳ ವರೆಗೆ ಪಾಸಿಟಿವ್ ಬಂದರೆ 3 ದಿನ ಹಾಗೂ 25ಕ್ಕೂ ಹೆಚ್ಚು ಮಕ್ಕಳಿಗೆ ಪಾಸಿಟಿವ್ ಬಂದ್ರೆ 7 ದಿನ ಶಾಲೆ ಬಂದ್ ಮಾಡಬೇಕು ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಬಿಇಓಗಳು ತೀರ್ಮಾನ ಮಾಡುವಂತೆ ಸೂಚನೆ ನೀಡಲಾಗಿದೆ.

ಇನ್ನು ಮುಂದಿನ ದಿನಗಳಲ್ಲಿ ಕೊರೋನಾ ಸ್ಪೈಕ್ ಆಗುವ ಸಾಧ್ಯಾಸಾಧ್ಯತೆಗಳ ಬಗ್ಗೆ ತಜ್ಞರು ಈ ಹಿಂದೆಯೇ ಎಚ್ಚರಿಸಿದ್ದಾರೆ. ಆಸ್ಪತ್ರೆ ಸೇರುತ್ತಿರುವವರ ಸಂಖ್ಯೆ ಕಡಿಮೆಯಿದೆ. ಹೀಗಾಗಿ ಸದ್ಯಕ್ಕೆ ಕರ್ಫ್ಯೂ ತೆರವುಗೊಳಿಸಲಾಗಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ. ಇನ್ನು ಸರ್ಕಾರದ ಈ ನಿರ್ಧಾರವನ್ನು ಎಲ್ಲಾ ಉದ್ಯಮಿಗಳು ಒಕ್ಕೊರಲಿನಿಂದ ಸ್ವಾಗತಿಸಿದ್ದಾರೆ.

Restriction-order21-1Download
Tags: BJPCongress PartyKarnataka government lifts weekend curfew night curfew remainsಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತುಮಕೂರು | ದಾಸೋಹ ದಿನದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ

Next Post

ಪ್ರತಿಕ್ರಿಯೆ | ಕೊರೋನಾ ಹೆಚ್ಚಳ‌ ಬಗ್ಗೆ ವೈದ್ಯ ಡಾ.ಶ್ರೀಕಾಂತ್‌ ಶಿವಗೊಂಡ್‌ ಮಾತು

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಪ್ರತಿಕ್ರಿಯೆ | ಕೊರೋನಾ ಹೆಚ್ಚಳ‌ ಬಗ್ಗೆ ವೈದ್ಯ ಡಾ.ಶ್ರೀಕಾಂತ್‌ ಶಿವಗೊಂಡ್‌ ಮಾತು

ಪ್ರತಿಕ್ರಿಯೆ | ಕೊರೋನಾ ಹೆಚ್ಚಳ‌ ಬಗ್ಗೆ ವೈದ್ಯ ಡಾ.ಶ್ರೀಕಾಂತ್‌ ಶಿವಗೊಂಡ್‌ ಮಾತು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada