ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವುದು, ಮೊಬೈಲ್ ಆಪ್ ಮೂಲಕ ಬೆಳೆ ಸರ್ವೆ, ಇನ್ವೆಸ್ಟ್ ಕರ್ನಾಟದ ಆಯೋಜನೆ, ರಾಜ್ಯದಲ್ಲಿ ಆಮ್ಲಜನಕದ ತಯಾರಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಯೋಜನೆಗಳಿಗೆ ಅನುಮತಿ ನೀಡಲಾಯಿತು.
ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್‌ವರೆಗೂ ನಡೆಸುವುದು ಬೇಡ ಎಂಬ ತೀರ್ಮಾನಕ್ಕೆ ಸಂಪುಟ ಬಂದಿದೆ. ಆದರೆ ಸಹಕಾರ ಇಲಾಖೆಯಿಂದ ಪ್ರಸ್ತಾಪಿತವಾದ ಸಹಕಾರ ಸಂಘ ಹಾಗೂ ಬ್ಯಾಂಕ್ ಚುನಾವಣೆಗೆ ಗ್ರೀನ್‌ಸಿಗ್ನಲ್ ನೀಡಲಾಗಿದೆ. ಅಲ್ಲಿನ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳ ಚುನಾವಣೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಸಚಿವ ಸಂಪುಟ ಸಭೆಯ ಬಳಿಕ ಸಂಪುಟ ನಿರ್ಣಯಗಳ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೆಳೆ ಸರ್ವೆಗೆ ಹೊಸ ಆಯಪ್ ರಚನೆಗೆ ಒಪ್ಪಿಗೆ ನೀಡಲಾಗಿದೆ. ವಿಶ್ವಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಫೆಬ್ರವರಿ 9 ರಿಂದ 12ರವರೆಗೆ ಮೂರು ದಿನ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ಗದಗ ಪಶುವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ 50 ಕೋಟಿಗೆ ಹೆಚ್ಚುವರಿ 30 ಕೋಟಿ ಅನುದಾನ ನೀಡೋದಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಕೊರೊನಾ ವೈರಸ್ ಹಾವಳಿಯಿಂದ ಮುಂದೂಡಲ್ಪಟ್ಟಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ರ ಫೆಬ್ರವರಿಯಲ್ಲಿ ಆಯೋಜಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಫೆಬ್ರವರಿ 9, 10 ಮತ್ತು 11ಕ್ಕೆ ಜಾಗತಿಕ ಹೂಡಿಕೆದಾರರ ಸಮಾವೇಶ ಮಾಡಲು ನಿರ್ಧಾರಿಸಲಾಗಿದೆ.

ಜಾಬ್ ಓರಿಯಂಟ್ ಕೋರ್ಸ್ ಬೇಡಿಕೆ ಇತ್ತು. ಜೆಒಸಿಯನ್ನ ಪಿಯುಸಿಗೆ ತತ್ಸಮಾನವಾಗಿ ನೀಡಲಾಗುತ್ತದೆ. ದೇವದುರ್ಗದಲ್ಲಿ ಎಂಜಿಜಿಯರಿಂಗ್ ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ 58 ಕೋಟಿ ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಉತ್ತಮ ನಡವಳಿಕೆ ತೋರಿದಂತ 139 ಖೈದಿಗಳಿಗೆ ಬಿಡುಗಡೆ ಭಾಗ್ಯಕ್ಕೆ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಇಂತಹ 139 ಖೈದಿಗಳನ್ನು ಬಿಡುಗಡೆಗೊಳಿಸಲಾಗುತ್ತದೆ ಎಂದು ಹೇಳಿದರು.
ಸಿರಗುಪ್ಪನಗರಕ್ಕೆ ನೀರುಪೂರೈಕೆಗೆ ಯೋಜನೆಗಾಗಿ 45.46 ಲಕ್ಷ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಲಾಗಿದೆ. ರಾಣೆಬೆನ್ನೂರಿನಲ್ಲಿ 18 ಕೆರೆ ನೀರು ತುಂಬುವ ಯೋಜನೆಗಾಗಿ 206 ಕೋಟಿ ಹಣವನ್ನ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಕೊಪ್ಪಳದ 5 ಕೆರೆಗಳಿಗೆ ನೀರು ಪೂರೈಕೆಗೆ ಯೋಜನೆಗಾಗಿ 95 ಕೋಟಿ ಅನುದಾನಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಕಂದಾಯ ಇಲಾಖೆಯಲ್ಲಿ ಬಡ್ತಿ ನಿಯಮ ಸಡಿಲಿಕೆ ಮಾಡುವಂತ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಲಾಗಿದೆ. 3050 ಎಸ್ ಡಿಎ ಫೋಸ್ಟ್ ಹಾಗೂ 2454 ಎಫ್ ಡಿಎ ಫೋಸ್ಟ್ ಗಳಿವೆ ಕಂಬೈನ್ಡ್ ಆಗಿ ಬಡ್ತಿ ನೀಡಲು ಒಪ್ಪಿಗೆ ನೀಡಲಾಗಿದೆ. ಜರ್ಮನ್ ಟೆಕ್ನಾಲಜಿಯಡಿ ತರಬೇತಿ ನೀಡೋದಕ್ಕಾಗಿ ಮಂಗಳೂರು, ಬೆಳಗಾವಿಯಲ್ಲಿ ಟೆಕ್ನಾಲಜಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದರು.
ಇನ್ನೂ ಅಧಿವೇಶನ ನಡೆಸುವ ಬಗ್ಗೆ ಮುಂದೆ ಚರ್ಚೆ ನಡೆಸ್ತೇವೆ. ಅಧಿವೇಷನಕ್ಕೆ ಅನುದಾನ ಸಿಗುತ್ತಿಲ್ಲವೆಂಬ ಆರೋಪ ಸರಿಯಲ್ಲ. ನಾವು ಸಂಪುಟದಲ್ಲಿ ಹಣ ರಿಲೀಸ್ ಮಾಡ್ತೇವೆ. ಫೈನಾನ್ಸ್ ಡಿಪಾರ್ಟ್ ಮೆಂಟ್ ಅಪ್ರೂವಲ್ ಕೊಡುತ್ತದೆ. ಆರ್ಥಿಕ ಸಮಸ್ಯೆಯೇನು ಉದ್ಬವಿಸಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.
ಕೋವಿಡ್ ನಿಂದಾಗಿ ಜನರಲ್ ಎಲೆಕ್ಷನ್ ಮಾಡಲ್ಲ ಎಂಬುದು ಇಂದಿನ ಸಂಪುಟದಲ್ಲೂ ಚರ್ಚೆಯಾಗಿದೆ. ಸಹಕಾರ ಸಂಘದ ಎಲೆಕ್ಷನ್ ಮಾಡಬಹುದು. ಇಂದು ಸಂಪುಟ ಇದಕ್ಕೆ ಒಪ್ಪಿಗೆ ಸಿಕ್ಕಿದೆ ಎಂಬುದಾಗಿ ತಿಳಿಸಿದರು.