ಬೆಂಗಳೂರು: ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಮೂವರನ್ನು ಮಾಧ್ಯಮ ಕಾರ್ಯದರ್ಶಿಯವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಸಿ.ಎಂ.ಡಿ.ಕೆ.ಶಿವಕುಮಾರ್ ಅವರ ಜೊತೆ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದ ಪಿ.ತ್ಯಾಗರಾಜ್ ಅವರನ್ನು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ-1 ಆಗಿ ನೇಮಿಸಲಾಗಿದೆ.


ಉಳಿದಂತೆ ಆರ್. ಜಯಪ್ರಕಾಶ್ ಮತ್ತು ರಾಘವೇಂದ್ರ ಭಟ್ ಅವರನ್ನೂ ಸಹ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗಾಯತ್ರಿ ಜಿ.ಎನ್ ಅವರು ಈ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ, ಆದೇಶಿಸಿದ್ದಾರೆ.



ಹೊಸದಾಗಿ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ನೇಮಕಗೊಂಡಿರುವ ಈ ಮೂವರು ಮಾಧ್ಯಮ ಕಾರ್ಯದರ್ಶಿಗಳು ಕೂಡ ಪತ್ರಿಕೋದ್ಯಮದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.






