• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣಕ್ಕೆ ಕರ್ನಾಟಕ ಸರ್ಕಾರದ ಮಹತ್ವದ ಹೆಜ್ಜೆ

ಪ್ರತಿಧ್ವನಿ by ಪ್ರತಿಧ್ವನಿ
December 4, 2025
in Top Story, ಕರ್ನಾಟಕ, ರಾಜಕೀಯ
0
ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣಕ್ಕೆ ಕರ್ನಾಟಕ ಸರ್ಕಾರದ ಮಹತ್ವದ ಹೆಜ್ಜೆ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕದ ವಿವಿಧ ವಿಶ್ವವಿದ್ಯಾನಿಲಯಗಳ ವ್ಯಾಪ್ತಿಯ ಸಂಗ್ರಹದಲ್ಲಿರುವ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣಗೊಳಿಸುವ(digitization) ಬಗ್ಗೆ ರಾಜ್ಯ ಸರ್ಕಾರದಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಸೂಚನಾ ಪತ್ರ ಹೊರಡಿಸಲಾಗಿದ್ದು, ರಾಜ್ಯದಲ್ಲಿರುವ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕುರಿತಂತೆ ಮಾಹಿತಿಗಳನ್ನು ನೀಡುವಂತೆ ಕೋರಲಾಗಿದೆ.

ADVERTISEMENT
DK Shivakumar: ವೋಟ್ ಚೋರಿ ಪ್ರತಿಭಟನೆಗೆ ಎಲ್ಲ ಮಂತ್ರಿಗಳು ಜನರನ್ನ ಕರೆದುಕೊಂಡು ಬರ್ಬೇಕು ಎಂದ ಡಿಕೆಶಿ..!

ಈ ಬಗ್ಗೆ ಪತ್ರದಲ್ಲಿ ವಿವರಿಸಿರುವ ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು, ಜ್ಞಾನಭಾರತ್‌ ಮಿಷನ್ ಅಡಿಯಲ್ಲಿ ಭಾರತ ದೇಶಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಸಮೀಕ್ಷೆಯನ್ನು ಕೈಗೊಂಡು. ಇಂದಿನ ತಂತ್ರಜ್ಞಾನ ಬಳಸಿಕೊಂಡು ಸಂರಕ್ಷಣೆ ಮತ್ತು ಡಿಜಿಟಲೀಕರಣಗೊಳಿಸುವ ಮೂಲಕ ಭವಿಷ್ಯದ ಪೀಳಿಗೆಗೆ ಅವುಗಳ ಜ್ಞಾನ ಸಂಪತ್ತಿನ ಸಂರಕ್ಷಣೆ ಮತ್ತು ಬಳಕೆಗೆ ಈ ಕೆಳಕಂಡಂತೆ ಪರಂಪರೆ ಮತ್ತು ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮಾನ್ಯ ಪ್ರಧಾನ ಮಂತ್ರಿಗಳ ಅಧ್ಯಕ್ಷತೆಯಲ್ಲಿ 5ನೇ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಈ ವಿಷಯವಾಗಿ ಚರ್ಚಿಸಲಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕುರಿತಂತೆ ಮಾಹಿತಿ ನೀಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Uttar Pradesh:  ಭಾರತಕ್ಕೆ ಪುಟಿನ್ ಎಂಟ್ರಿ ಯೋಗಿ ನಾಡಲ್ಲಿ ಮಹಿಳೆಯರ ಸಂಭ್ರಮ..! #uttarpradesh

ಪತ್ರದಲ್ಲಿರುವ ವಿವರಗಳೇನು..?

*ರಾಷ್ಟ್ರೀಯ ಸಮೀಕ್ಷೆಯ ಮೂಲಕ ರಾಜ್ಯಗಳಲ್ಲಿರುವ ಹಸ್ತಪ್ರತಿಗಳ ದಾಖಲೀಕರಣ ಕೈಗೊಳ್ಳುವ ಸಲುವಾಗಿ Gyan Bharatam Web & mobile portal ಅನ್ನು ಅಭಿವೃದ್ಧಿಗೊಳಿಸಿದೆ.
*ದೇಣಿಗೆಯ ಮೂಲಕ ಹಸ್ತಪ್ರತಿಗಳ ಸಂಗ್ರಹಣೆ ಮಾಡಲು ಉದ್ದೇಶಿಸಿದೆ.
*ರಾಷ್ಟ್ರೀಯ ಹಸ್ತಪ್ರತಿಗಳ ಮಹೋತ್ಸವ ಮತ್ತು ವಸ್ತುಪ್ರದರ್ಶನ ಆಯೋಜನೆ
*Podcast on Indian Manuscripts ಆಯೋಜನೆ
* International Conference on Manuscript Conservation ಆಯೋಜನೆ
* ರಾಜ್ಯಗಳಲ್ಲಿರುವ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣವನ್ನು ರಾಜ್ಯಗಳ ಸಹಭಾಗಿತ್ವದಲ್ಲಿ ಕೈಗೊಳ್ಳಲು ಎಲ್ಲಾ ರೀತಿಯ ನೆರವು ಮತ್ತು ಸಹಕಾರವನ್ನು ನೀಡಲಿರುವರು.

Nirmala Sitharaman : ನಿರ್ಮಲಾ ಸೀತಾರಾಮನ್ ಮಾತಿಗೆ ಶಾಕ್ ಆದ ಮೋದಿ, ರಾಹುಲ್ ಗಾಂಧಿ.. #pratidhvani

ಭಾರತದ ಹಸ್ತಪತಿ ಸಂಗ್ರಹವು ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಮಹತ್ವದ್ದಾಗಿದ್ದು, ಸಾವಿರಾರು ವರ್ಷಗಳಿಂದ, ನಮ್ಮ ಪೂರ್ವಜರು ಬೂರ್ಜ ಪತ್ರ, ತಾಳೆಗರಿ, ಕಾಗದ ಹಾಗೂ ಕಡತಗಳ ಬರವಣಿಗೆಯ ದಾಖಲೆಗಳಾಗಿವೆ. ಕರ್ನಾಟಕ ಹಸ್ತಪ್ರತಿಗಳು ಹಳೆಯ ಕನ್ನಡ, ತುಳು, ಮೋದಿ (ತಿಗಳಾರಿ), ದೇವನಾಗರಿ ಮತ್ತು ಉರ್ದು ಸಂಸ್ಕೃತ, ತೆಲುಗು, ಪರ್ಷಿಯನ್, ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಗಳಲ್ಲಿ ಕಂಡುಬರುತ್ತವೆ.

ಹಸ್ತಪ್ರತಿ ಸಂರಕ್ಷಣೆ ಮತ್ತು ಡಿಜಿಟಲೀಕರಣವು ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುವ ಎರಡು ಪೂರಕ ಪ್ರಕ್ರಿಯೆಗಳಾಗಿದ್ದು, ಈ ಅಮೂಲ್ಯ ಪರಂಪರೆಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿರುತ್ತದೆ.

ಹಸ್ತಪ್ರತಿಗಳ ಸಂರಕ್ಷಣೆಯು ಲ್ಯಾಮಿನೇಷನ್, ಆಮೀಕರಣವನ್ನು ಕಡಿಮೆ ಮಾಡುವುದು ಮತ್ತು ಪರಿಸರ ನಿಯಂತ್ರಣಗಳಂತಹ ಬಳಸಿಕೊಂಡು ಭೌತಿಕ ಸಂರಕ್ಷಣೆಯನ್ನು ಒಳಗೊಂಡಿರುತ್ತದೆ. ತಂತ್ರಗಳನ್ನು ಡಿಜಿಟಲೀಕರಣವು ವ್ಯಾಪಕ ಪ್ರವೇಶ, ಹುಡುಕಾಟ ಮತ್ತು ದೀರ್ಘಕಾಲೀನ ಸಂಗ್ರಹಣೆಗಾಗಿ ಡಿಜಿಟಲ್ ಪ್ರತಿಗಳನ್ನು ಸೃಷ್ಟಿಸುತ್ತದೆ, ಭೌತಿಕ ನಿರ್ವಹಣೆಯಿಂದ ದುರ್ಬಲವಾದ ಮೂಲಗಳನ್ನು ರಕ್ಷಿಸುತ್ತದೆ.

Nirmala Sitharaman Parliament: ನಾನು ಮನಮೋಹನ್ ಸಿಂಗ್ ರೀತಿ ಆಗುವುದಕ್ಕೆ ಇಷ್ಟ ಪಡಲ್ಲಾ..! #manmohansingh

ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಒಂದೇ ರಾಷ್ಟ್ರೀಯ ವೇದಿಕೆಯ ಮೂಲಕ ಸಾರ್ವಜನಿಕ ಪ್ರವೇಶವನ್ನು ಒದಗಿಸುವ ಸಲುವಾಗಿ ಡಿಜಿಟಲೀಕರಣಗೊಳಿಸಲು ಮತ್ತು ಸಂಯೋಜಿಸಲು ಕೇಂದ್ರ ಸಂಸ್ಕೃತಿ ಸಚಿವಾಲಯವು ಸಮಗ್ರ ಯೋಜನೆಯನ್ನು ರೂಪಿಸುತ್ತಿದ್ದು, ಪ್ರಾಚೀನ ಹಸ್ತಪ್ರತಿಗಳ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅವುಗಳ ಜ್ಞಾನವನ್ನು ಶಾಶ್ವತವಾಗಿ ಉಳಿಸಲು ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಅಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ತಮ್ಮ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಶೈಕ್ಷಣಿಕ ಸಂಸ್ಥೆಗಳು ಹಾಗೂ ವಸ್ತುಸಂಗ್ರಹಾಲಯಗಳ ಸಂಗ್ರಹದಲ್ಲಿರುವ ಹಸ್ತಪ್ರತಿಗಳನ್ನು ವಿವರಗಳನ್ನು ಮತ್ತು ಇವುಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣಗೊಳಿಸುವ ಮತ್ತು ಡಿಜಿಟಲೀಕರಣಗೊಳಿಸಿರುವ ಮಾಹಿತಿಯನ್ನು ಕಳುಹಿಸಿಕೊಡುವಂತೆ ಪತ್ರದಲ್ಲಿ ತಿಳಿಸಲಾಗಿದೆ.

 

Tags: KarnatakaPoliticsState GovernmentUniversity
Previous Post

ಡಿಸೆಂಬರ್‌ 10 ದೌರ್ಜನ್ಯ ದಿನ ಆಚರಣೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ

Next Post

ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್: SPPಯಾಗಿ ಪ್ರಸನ್ನ ಕುಮಾರ್ ನೇಮಕ

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post
ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್: SPPಯಾಗಿ ಪ್ರಸನ್ನ ಕುಮಾರ್ ನೇಮಕ

ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್: SPPಯಾಗಿ ಪ್ರಸನ್ನ ಕುಮಾರ್ ನೇಮಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada