• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Lakshmi Hebbalkar: ಕರ್ನಾಟಕ ಸರ್ಕಾರದ ಮಾಡೆಲ್‌ ಇಡೀ ದೇಶಕ್ಕೆ ಮಾದರಿ..!!

ಪ್ರತಿಧ್ವನಿ by ಪ್ರತಿಧ್ವನಿ
September 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ನವೆಂಬರ್‌ 19ಕ್ಕೆ ಅಕ್ಕಾ ಪಡೆಗೆ ಚಾಲನೆ, ಸರ್ಕಾರಿ ಮಾಂಟೆಸ್ಸರಿ ಆರಂಭ, ಬೆಳಗಾವಿ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸಚಿವರ ಹೇಳಿಕೆ

ADVERTISEMENT

ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಿರುವ ಕರ್ನಾಟಕ ಸರ್ಕಾರದ ಮಾಡೆಲ್‌ (ಮಾದರಿ) ಅನ್ನು ಕೇಂದ್ರ ಸರ್ಕಾರವೂ ಅನುಸರಿಸುತ್ತಿದ್ದು, ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆಲಸಗಳ ಕುರಿತು ಕೇಂದ್ರ ಸರ್ಕಾರ ಶ್ಲಾಘನೆ ವ್ಯಕ್ತಪಡಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ.

ಸುವರ್ಣ ಸೌಧದಲ್ಲಿ ಬೆಳಗಾವಿ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇಲಾಖೆ ಸುಧಾರಣೆ ಬಗ್ಗೆ ಚರ್ಚೆ ನಡೆಸಲಾಯಿತು. ನಮ್ಮದು ಜೀವನಮಟ್ಟ ಸುಧಾರಣೆ ಮಾಡುವ ಇಲಾಖೆಯಾಗಿದೆ ಎಂದರು.

ಮಕ್ಕಳ ವಿದ್ಯಾಭ್ಯಾಸ, ಪೌಷ್ಠಿಕಾಂಶ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿವಿಧ ‌ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಜೊತೆಗೆ ನಮ್ಮ ಸರ್ಕಾರ ಮಹಾತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯೂ ಫಲಾನುಭವಿಗಳಿಗೆ ತಲುಪುತ್ತಿರುವ ಬಗ್ಗೆ, ಸಾಮಾಜಿಕ ಪೀಡುಗಾಗಿರುವ ಬಾಲ್ಯ ವಿವಾಹ ನಿರ್ಮೂಲನೆ, ಪೋಕ್ಸೋ ಪ್ರಕರಣಗಳು ಸೇರಿದಂತೆ ವಿಕಲಚೇತನರಿಗೆ ಸಂಬಂಧಪಟ್ಟ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಸಚಿವರು ವಿವರಿಸಿದರು.

  • ನವೆಂಬರ್‌ 19ಕ್ಕೆ ಅಕ್ಕಾ ಪಡೆಗೆ ಚಾಲನೆ

  • ಕರ್ನಾಟಕದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು ಮುಂದಿನ ತಿಂಗಳಿಗೆ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನವೆಂಬರ್‌ 19ರಂದು ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ನವೆಂಬರ್‌ 19ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಂದೇ ಅಂಗನವಾಡಿ ಸುವರ್ಣ ಮಹೋತ್ಸವ ಸಮಾರಂಭ ನಡೆಸಲು ಉದ್ದೇಶಿಸಿದ್ದು, ಅಂದೇ ಅಕ್ಕಾ ಪಡೆಗೆ ಚಾಲನೆ ನೀಡಲಾಗುವುದು. ಪ್ರಾಯೋಗಿಕವಾಗಿ ಮೈಸೂರು, ಉಡುಪಿ, ಬೆಳಗಾವಿಯಲ್ಲಿ ಅಕ್ಕಾಪಡೆ ಜಾರಿಗೆ ಬರಲಿದೆ ಎಂದು ಸಚಿವರು ವಿವರಿಸಿದರು.

ಈಗಾಗಲೇ 200 ಅಂಗನವಾಡಿ ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳು ಆರಂಭಗೊಂಡಿದ್ದು, ಸದ್ಯ ಮೊದಲ ಹಂತದಲ್ಲಿ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳಲಿವೆ. ಬಳಿಕ ಹಂತ ಹಂತವಾಗಿ ವಿಸ್ತರಿಸಲಾಗುವುದು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್‌ ಇಲಾಖೆಯ ಸಹಯೋಗದಲ್ಲಿ ಅಕ್ಕಾ ಪಡೆ ಕಾರ್ಯನಿರ್ವಹಿಸಲಿದೆ. ಎನ್‌ಸಿಸಿ ವಿದ್ಯಾರ್ಥಿಗಳು, ಮಹಿಳಾ ಪೇದೆಗಳು ಜನನಿಬೀಡ ಪ್ರದೇಶಗಳು ಹಾಗೂ ಮಹಿಳಾ ಕಾಲೇಜುಗಳ ಬಳಿ ಕಾರ್ಯನಿರ್ವಹಿಸಲಿವೆ. ಇದಕ್ಕಾಗಿ 109 ಸಹಾಯವಾಣಿ ಆರಂಭಿಸಲಾಗಿದೆ ಎಂದರು.

ದೇಶದಲ್ಲೇ ಪ್ರಥಮ ಬಾರಿಗೆ ದೇವದಾಸಿ ಸಮೀಕ್ಷೆ, ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗಳು ನಡೆಯುತ್ತಿದ್ದು, ಕಳೆದ ಮುಂಗಾರು ಅಧಿವೇಶನದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು (ತಿದ್ದುಪಡಿ) ಜಾರಿಗೆ ತರಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದ್ದರೂ ನಮ್ಮ ಇಲಾಖೆಗೆ ಹೆಚ್ಚು ಅನುದಾನವನ್ನು ತಂದಿರುವೆ. ನಮ್ಮ ಇಲಾಖೆಯ ಕಾರ್ಯವೈಖರಿಗೆ ಕೇಂದ್ರ ಸರ್ಕಾರವೇ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

Tags: lakshmi hebbalkar​Lakshmi hebbalkarlakshmi hebbalkar​​lakshmi hebbalkar belgaumlakshmi hebbalkar brotherlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar familylakshmi hebbalkar healthlakshmi hebbalkar historylakshmi hebbalkar net worthlakshmi hebbalkar newslakshmi hebbalkar reactionlakshmi hebbalkar speachlakshmi hebbalkar speechlakshmi hebbalkar twitterlakshmi hebbalkar videolakshmi hebbalkar wikiMinister Lakshmi Hebbalkar
Previous Post

M B Patil: ಧಾರವಾಡದಲ್ಲಿ ಜಪಾನಿನ ಹಿಟಾಚಿ ಮಷಿನರಿ ಕಂಪನಿಯ ಅಭಿವೃದ್ಧಿ ಕೇಂದ್ರ ಸ್ಥಾಪನೆ : ಎಂ. ಬಿ. ಪಾಟೀಲ

Next Post

ಧರ್ಮ ಕಾಲಂನಲ್ಲಿ ಹಿಂದೂ; ಕಸುಬು ಕಾಲಂನಲ್ಲಿ ನೇಕಾರಿಕೆ ನಮೂದಿಸಿ-ಬಿ.ಎಸ್. ಸೋಮಶೇಖರ್

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post

ಧರ್ಮ ಕಾಲಂನಲ್ಲಿ ಹಿಂದೂ; ಕಸುಬು ಕಾಲಂನಲ್ಲಿ ನೇಕಾರಿಕೆ ನಮೂದಿಸಿ-ಬಿ.ಎಸ್. ಸೋಮಶೇಖರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada