• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

Covid-19: ಸ್ವಂತ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಸರ್ಕಾರದಿಂದ ಅನುಮತಿ

by
April 23, 2021
in ಕರ್ನಾಟಕ
0
Covid-19: ಸ್ವಂತ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಸರ್ಕಾರದಿಂದ ಅನುಮತಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಕರೋನಾ ಸೋಂಕಿನ ತೀವ್ರತೆ ಹೆಚ್ಚಾಗಿರುವುದರಿಂದ ಸಾವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಈಗ ಮೃತರ ಅಂತ್ಯಸಂಸ್ಕಾರಕ್ಕೂ ಸ್ಥಳಾವಕಾಶದ ಕೊರತೆ ಉಂಟಾಗಿರುವುದು ನಿಜಕ್ಕೂ ಆತಂಕಕಾರಿಯಾಗಿದೆ. ಬೆಂಗಳೂರು ನಗರದ ಪ್ರಮುಖ ಚಿತಾಗಾರಗಳಲ್ಲಿ ಬಿಡುವಿಲ್ಲದೇ ಅಂತ್ಯಸಂಸ್ಕಾರಗಳು ನಡೆಯುತ್ತಿವೆ. ಆದರೂ ಮೃತರ ದೇಹಗಳು ಶವಾಗಾರದ ಮುಂದೆ ಸಾಲುಗಟ್ಟಿ ನಿಂತಿವೆ.

ADVERTISEMENT

ಕೋವಿಡ್‌ನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯೂ ಮಾಡಿಲ್ಲ ಎಂದು ಜೆಡಿಎಸ್‌ ನಾಯಕ ಹೆಚ್‌ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೂ ಮೊದಲು ಇದೇ ರೀತಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್‌ ಅವರು ಕೂಡಾ ಆರೋಪವನ್ನು ಮಾಡಿದ್ದರು. ಇದು ಸರ್ಕಾರದ ವೈಫಲ್ಯ ಎಂದು ಕಿಡಿ ಕಾರಿದ್ದರು.

ಈಗ ಎಚ್ಚೆತ್ತುಕೊಂಡ ಸರ್ಕಾರ ಬೆಂಗಳೂರು ನಗರದ ಆಸುಪಾಸಿನಲ್ಲಿ ಅಂತ್ಯಸಂಸ್ಕಾರಕ್ಕೆ ಸ್ಥಳವನ್ನು ಹುಡುಕುತ್ತಿದೆ. ತಾವರೆಕೆರೆ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ಸ್ಮಶಾನದ ಸಿದ್ದತೆ ಕಾರ್ಯವನ್ನು ಕಂದಾಯ ಸಚಿವ ಆರ್‌ ಅಶೋಕ್‌ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಗುರುವಾರ ರಾತ್ರಿ ಪರಿಶೀಲಿಸಿದ್ದಾರೆ.

50 ಎಕರೆ ಪ್ರದೇಶದಲ್ಲಿ ಏಕಕಾಲಕ್ಕೆ 20 ಶವಗಳನ್ನು ದಹನ ಮಾಡುವ ಸಾಮರ್ಥ್ಯದ ಸ್ಮಶಾನ ನಿರ್ಮಾಣವಾಗುತ್ತಿದೆ. 100 ಟನ್‌ಗೂ ಅಧಿಕ ಪ್ರಮಾಣದ ಕಟ್ಟಿಗೆಯನ್ನು ಸಂಗ್ರಹಿಸಿ ಇಡಲಾಗಿದ್ದು, ಬೋರ್‌ವೆಲ್‌ ಸೇರಿದಂತೆ ಇತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.

ಸ್ವಂತ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅನುಮತಿ:

ಮಾಧ್ಯಮಗಳೊಂದಿಗೆ ಮಾತನಾಡಿರುವ ಕಂದಾಯ ಸಚಿವ ಆರ್‌ ಅಶೋಕ್‌ ಅವರು ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಸ್ವಂತ ತೋಟ, ಜಮೀನಿನಲ್ಲೂ ಅನುಮತಿ ನೀಡಲಾಗಿದೆ ಎಂದಿದ್ದಾರೆ.

“ಕೋವಿಡ್‌ ಮಾರ್ಗಸೂಚಿಗಳನ್ನು ಪಾಲನೆ ಮಾಡಿ ಅಂತ್ಯಸಂಸ್ಕಾರ ನಡೆಸಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,” ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ ಸುತ್ತಮುತ್ತಲಿನ ಸುಮಾರು 20 ಕಿಲೋಮೀಟರ್‌ ವ್ಯಾಪ್ತಿಯ ಜನರು ಶವ ಸಂಸ್ಕಾರಕ್ಕೆಂದು ನಗರಕ್ಕೆ ಬರುತ್ತಿದ್ದಾರೆ. ಆ ಕಾರಣದಿಂದಾಗಿ ಮೃತದೇಹಗಳ ಸಂಖ್ಯೆ ದಿಢೀರನೆ ಹೆಚ್ಚಾಗಿದೆ, ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Previous Post

ಒಂದೇ ಲಸಿಕೆಯನ್ನು ವಿವಿಧ ದರಗಳಲ್ಲಿ ಮಾರುತ್ತಿರುವ ಕೇಂದ್ರದ ಉದ್ದೇಶವೇನು?: ಮಮತಾ ಬ್ಯಾನರ್ಜಿ ಪ್ರಶ್ನೆ

Next Post

ಹೆಮ್ಮೆಯಿಂದ ನೆನೆಯಬಹುದಾದ ಡಾ. ರಾಜ್

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಹೆಮ್ಮೆಯಿಂದ ನೆನೆಯಬಹುದಾದ ಡಾ. ರಾಜ್

ಹೆಮ್ಮೆಯಿಂದ ನೆನೆಯಬಹುದಾದ ಡಾ. ರಾಜ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada