ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಪ್ರಶ್ನೆಗೆ ಉತ್ತರಿಸಿದ ಶ್ರೀನಿವಾಸ ಪೂಜಾರಿ, ನ್ಯಾಯಾಲಯದ ಆದೇಶದಂತೆ ಅತಿಥಿ ಶಿಕ್ಷಕರ ಮನವಿ ಪರಿಶೀಲಿಸಿ ಅತಿಥಿ ಶಿಕ್ಷಕರನ್ನು ಪೂರ್ಣ ಕಾಲಿಕ ಶಿಕ್ಷಕರನ್ನಾಗಿ ಕಾಯಂಗೊಳಿಸಲು ನಿಯಮಾನುಸಾರ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.
ಪ್ರಸ್ತುತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ 826 ವಸತಿ ಶಾಲೆ/ಕಾಲೇಜುಗಳು ಕಾರ್ಯನಿರ್ವಹಿಸಿತ್ತಿದ್ದು, ಇಲ್ಲಿ 2213 ಅತಿಥಿ ಶಿಕ್ಷಕರು/ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಇತ್ತ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಅತಿಥಿ ಉಪನ್ಯಾಸಕರಿಂದ ಮತ್ತೆ ಪ್ರತಿಭಟನೆ ಆರಂಭ
ಅತಿಥಿ ಉಪನ್ಯಾಸಕರ ಒಕ್ಕೂಟ: ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಿ, ಸೇವಾ ಭದ್ರತೆ ಒದಗಸಬೇಕು’ ಎಂದು ಒತ್ತಾಯಿಸಿ ‘ರಾಜ್ಯ ಅತಿಥಿ ಉಪನ್ಯಾಸಕರ ಒಕ್ಕೂಟ’ ನೇತೃತ್ವದಲ್ಲಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಧಾರವಾಡದಲ್ಲಿ ಅಹೋರಾತ್ರಿ ಧರಣಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನೂರಾರು ಅತಿಥಿ ಉಪನ್ಯಾಸಕರು ಜಂಟಿ ನಿರ್ದೇಶಕರ ಕಚೇರಿ ಎದುರು ಕಳೆದ ವರ್ಷದ ಡಿ.10 ರಂದು ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ (Strike) ಪ್ರಾರಂಭಿಸಿದ್ದರು.

ಗೌರವಧನಕ್ಕಾಗಿ ಪಾವತಿಗೆ ತಾಶೀಲ್ದಾರ್ಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು
ದೇವದುರ್ಗದ ಸರ್ಕಾರಿ ಪಾಲಿಟಿಕ್ನಿಕ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅರೆಕಾಲಿ ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿ ಮಾಡಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಶ್ರೀನಿವಾಸ ಚಾಪಲ್ ಅವರಿಗೆ ಉಪನ್ಯಾಸಕರು ಮನವಿ ಸಲ್ಲಿಸಿದರು.
ಅತಿಥಿ ಉಪನ್ಯಾಸಕರಿಗೆ ಒಬ್ಬರಿಗೂ 86 ಸಾವಿರ ರೂ. ಗೌರವಧನ ಬರಬೇಕಿದೆ. ಗೌರವಧನ ವಿಳಂಬದಿಂದ ಬಹುತೇಕ ಉಪನ್ಯಾಸಕರು ಕುಟುಂಬ ನಿರ್ವಹಣೆ ಮಾಡಲು ಸಂಕಷ್ಟ ಪಡುವಂತಾಗಿದೆ. ಕೊಡಲೇ ಬಾಕಿ ಗೌರವಧನ ನೀಡದೇ ಇದ್ದಲ್ಲ ಪ್ರಾಚಾರ್ಯ ವಿರುದ್ಧ ಕಾನೂನು ವಿರುದ್ಧ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದರು.
ಅತಿಥಿ ಉಪನ್ಯಾಸದ ಆದಾಯಕ್ಕೆ ಜಿಎಸ್‌ಟಿ
ಅತಿಥಿ ಉಪನ್ಯಾಸದ ಆದಾಯಕ್ಕೆ ಶೇಕಡ 18 ರಷ್ಟು ಜಿಎಸ್ಟಿ ಪಾವತಿಸಬೇಕು ಎಂದು ಅಥಾರಿಟಿ ಆಫ್ ಅಡ್ವಾನ್ಸ್ ರೋಲಿಂಗ್(AAR) ಕರ್ನಾಟಕ ಪೀಠ ಆದೇಶ ನೀಡಿದೆ. ಅತಿಥಿ ಉಪನ್ಯಾಸ ನೀಡಿ ಗಳಿಸುವ ಆದಾಯಕ್ಕೆ ಶೇಕಡ 18 ರಷ್ಟು ಜಿಎಸ್ಟಿ ಪಾವತಿಸಬೇಕು ಎಂದು ಹೇಳಲಾಗಿದೆ.
ಅತಿಥಿ ಉಪನ್ಯಾಸವು ತೆರಿಗೆ ವಿನಾಯಿತಿ ಇರುವ ವರ್ಗದ ಅಡಿಯಲ್ಲಿ ಬರುವುದಿಲ್ಲ. ಇತರ ವೃತ್ತಿಗಳು, ತಾಂತ್ರಿಕ ಮತ್ತು ವಾಣಿಜ್ಯ ಸೇವೆಗಳ ವರ್ಗದ ಅಡಿಯಲ್ಲಿ ಇದು ಬರುತ್ತದೆ. ಹಾಗಾಗಿ, ಈ ಸೇವೆಗೆ ಜಿಎಸ್‌ಟಿ ಅಡಿ ಶೇ 18ರಷ್ಟು ತೆರಿಗೆ ಪಾವತಿಸಬೇಕು ಎಂದು ಆದೇಶಿಸಲಾಗಿದೆ.
ಎಎಆರ್ ನೀಡಿರುವ ಆದೇಶದ ಅನ್ವಯ, ವಾರ್ಷಿಕವಾಗಿ ₹ 20 ಲಕ್ಷಕ್ಕಿಂತ ಹೆಚ್ಚು ವಹಿವಾಟು ನಡೆಸುವ, ವೃತ್ತಿಪರ ಸೇವೆ ಒದಗಿಸುವವರು ಅತಿಥಿ ಉಪನ್ಯಾಸದಿಂದ ಗಳಿಸುವ ಆದಾಯಕ್ಕೆ ಶೇ 18ರಷ್ಟು ತೆರಿಗೆ ಕೊಡಬೇಕಾಗುತ್ತದೆ.