ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ(Winter Session 2025) ಇಂದು ಮಹತ್ವದ ವಿಧೇಯಕವೊಂದನ್ನು ಅಂಗೀಕಾರ ಮಾಡಲಾಗಿದೆ. ರಾಜ್ಯದಲ್ಲಿ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್ ಸರ್ಕಾರ ಮಹತ್ವ ಹೆಜ್ಜೆಯಿಟ್ಟಿದೆ.

ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ವಿಧಾನಸಭೆಯಲ್ಲಿ ಇಂದು ದ್ವೇಷ ಭಾಷಣ (Hate Speech Bill) ತಡೆ ವಿಧೇಯಕ ಅಂಗೀಕಾರ ಮಾಡಲಾಗಿದೆ. ವಿಪಕ್ಷ ಸದಸ್ಯರ ತೀವ್ರ ವಿರೋಧ ಮತ್ತು ಗದ್ದಲದ ನಡುವೆಯೂ ಸ್ಪೀಕರ್ ಯು.ಟಿ ಖಾದರ್ ಈ ಬಿಲ್ ಅಂಗೀಕಾರ ಮಾಡಿದ್ದಾರೆ.

ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರವಾಗುತ್ತಿದ್ದಂತೆ ಬಿಜೆಪಿ ನಾಯಕರು ಸಿಟ್ಟಿಗೆದ್ದಿದ್ದು, ವಿಪಕ್ಷ ನಾಯಕ ಆರ್. ಅಶೋಕ್ ವಿಧೇಯಕದ ಪ್ರತಿಯನ್ನು ಹರಿದು ಬಿಸಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಸದ್ಯ ಸದನವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದಾರೆ.












