2022ರ ವರ್ಷಾಂತ್ಯದೊಳಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಬಿಬಿಎಂಪಿ ವಾರ್ಡ್ವಾರು ಮೀಸಲಾತಿಯಲ್ಲಿ ತಾರತ್ಮ್ಯ ಎಸಗಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿ ವಿಚಾರನೆ ನಡೆಸಿದ ನ್ಯಾಯಾಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠವು ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿದೆ.
ಸರ್ಕಾರ ಒಬಿಸಿ ಆಯೋಗಕ್ಕೆ ಅಮಕಿ ಅಂಶ ಒದಗಿಸಬೇಕು ನವೆಂಬರ್ ಅಂತ್ಯದ ವೇಳೆಗೆ ಮೀಸಲಾತಿ ಪ್ರಕಟಿಸಬೇಕು ಮತ್ತು ವರ್ಷಾಂಯತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ನ್ಯಾಯಾಲಯವು ಆದೇಶಿಸಿದೆ.
ಅಂತೆಯೇ ರಾಜ್ಯ ಸರ್ಕಾರ ಈ ಮೊದಲು ಹೊರಡಿಸಿದ್ದ 243 ವಾರ್ಡ್ಗಳ ಮೀಸಲು ಅಧಿಸೂಚನೆಯನ್ನು ನ್ಯಾಯಾಲಯ ರದ್ದುಪಡಿಸಿದೆ.