ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಹೈಕೋರ್ಟ್ ಕಲಾಪವನ್ನು ಯೂಟೂಬ್ ಮೂಲಕ ನೇರ ಪ್ರಸಾರ ಮಾಡಲಾಗಿದೆ.
ಸೋಮವಾರ ಮಧ್ಯಾಹ್ನ 2.40 ಕ್ಕೆ ನಡೆದ ಕೋರ್ಟ್ ಹಾಲ್ -1 ರ ಕಲಾಪವನ್ನು ನೇರ ಪ್ರಸಾರ ಮಾಡಲಾಗಿದೆ. ಇದು ಲೈವ್ ಸ್ಟ್ರೀಮ್ ಪ್ರಾಯೋಗಿಕ ಯೋಜನೆಯ ಭಾಗವಾಗಿದೆ ಎಂದು ಮೂಲಗಳು ತಿಳಿಸಿವೆ.
ಯೂಟ್ಯೂಬ್ ಚಾನೆಲ್ ಲಿಂಕ್ ಅನ್ನು (https://youtu.be/p-4vySjlTYY) ಕರ್ನಾಟಕ ಹೈಕೋರ್ಟ್ ವೆಬ್ಸೈಟ್ನಲ್ಲಿ ಹಂಚಿಕೊಳ್ಳಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ, ವರ್ಚುವಲ್ ವೀಡಿಯೋ ಮೂಲಕ ಕೋರ್ಟ್ ಕಾರ್ಯಕಲಾಪಗಳನ್ನು ನಡೆಸಲು ನಿರ್ಧರಿಸಲಾಗಿದೆ. ಆದರೆ ಈ ಕಲಾಪದಲ್ಲಿ ವಕೀಲರು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿತ್ತು.
ಮೂಲ: NIE