ಧರ್ಮಸ್ಥಳದ ಸೌಜನ್ಯ(Soujanya) ಮೇಲಿನ ಅತ್ಯಾಚಾರ ಹಾಗೂ ಕೊಲೆ(Murder) ಪ್ರಕರಣ ಕುರಿತು ಹೈಕೋರ್ಟ್(High Court) ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಏಕಸದಸ್ಯ ಪೀಠವು CBIಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
ಮೃತ ಬಾಲಕಿಯ ತಂದೆ ಧರ್ಮಸ್ಥಳದ(Dharmasthala) ಪಾಂಗಳದ ನಿವಾಸಿ ಚಂದಪ್ಪಗೌಡ ಅವರು ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ಆದೇಶ ನೀಡಿದೆ. ಪ್ರಕರಣದಿಂದ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್(Criminal) ಮೇಲ್ಮನವಿ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ. ಮೇಲ್ಮನವಿಯ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆಗೆ ನಿಗದಿಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲ ಬಾಲಕೃಷ್ಣ ಮನವಿ ಮಾಡಿದರು. ಇದನ್ನು ಪರಿಗಣಿಸಿದ ಪೀಠ ರೋಸ್ಟರ್ ಅನುಸಾರ ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿ ಮಾಡುವಂತೆ ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಯವರಿಗೆ ಸೂಚಿಸಿದೆ.
ರಾಜ್ಯ ಗೃಹಇಲಾಖೆ(Home Department) ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, CID, ADGP, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ADGP, ದಕ್ಷಿಣಕನ್ನಡ ಪೊಲೀಸ್ ವರಿಷ್ಠಾಧಿಕಾರಿ, CID ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ, ಮತ್ತು CBIಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಖುಲಾಸೆಗೊಂಡಿರುವ ಆರೋಪಿ ಸಂತೋಷ್ ರಾವ್ ಹತ್ತನೇ ಪ್ರತಿವಾದಿಯಾಗಿದ್ದಾರೆ. ಆರೋಪಿ ಸಂತೋಷ್ ರಾವ್(Santhosh Rao) ನಿರಪರಾಧಿ, ಆತನ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ ಎಂದು ಜೂನ್ ೧೬ರಂದು ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಈ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಮಾಡಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕಳೆದ ಎಂಟು ತಿಂಗಳಿನಿಂದ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ದಕ್ಷಿಣಕನ್ನಡದಲ್ಲಿ ಈಗಲೂ ಪ್ರತಿಭಟನೆಗಳು ನಡೆಯುತ್ತಿವೆ. ಸರ್ಕಾರ ಮರು ತನಿಖೆಗೆ ಆದೇಶ ನೀಡಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹವಾಗಿದೆ.
#SoujanyaCase #RapeMurder #HighCourt #CBI #Karnataka