• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
February 14, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

“ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2023 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಭಾಗವಹಿಸಿ ಮಾತನಾಡಿದರು.

“ಕಳೆದ ನಾಲ್ಕು ದಿನಗಳಲ್ಲಿ ಈ ಸಮಾವೇಶದಲ್ಲಿ ಅನೇಕ ಒಪ್ಪಂದಗಳು, ಚರ್ಚೆಗಳು ನಡೆದಿವೆ. ನೀವೆಲ್ಲರೂ ಕರ್ನಾಟಕ ರಾಜ್ಯದಲ್ಲಿ ಸೋಲುವ ಮಾತಿಲ್ಲ. ಹೀಗಾಗಿ ಈ ರಾಜ್ಯದ ಮೇಲೆ ನೀವು ವಿಶ್ವಾಸವಿಡಬಹುದು. ಈ ರಾಜ್ಯಕ್ಕೆ ಬಂದವರು ಬರಿಗೈಯಲ್ಲಿ ಹೋಗುವುದಿಲ್ಲ. ಈ ಸಮಾವೇಶದಲ್ಲಿ ಭಾಗವಹಿಸಿದ ಸಜ್ಜನ್ ಜಿಂದಾಲ್, ಆನಂದ್ ಮಹೀಂದ್ರಾ ಅವರ ಮಾತು ಕೇಳಿದ್ದೀರಿ. ಅವರ ಯೋಶೋಗಾಥೆ ಕೇಳಿದ್ದೀರಿ. ಇವರ ಮಾತು ಕೇಳಿದ ನಂತರ ವಿಶ್ವ ಭಾರತವನ್ನು ಬೆಂಗಳೂರು ಹಾಗೂ ಕರ್ನಾಟಕದ ಮೂಲಕ ನೋಡುತ್ತಿದೆ” ಎಂದು ತಿಳಿಸಿದರು.

“ನಿಮ್ಮ, ಕರ್ನಾಟಕ ರಾಜ್ಯ ಹಾಗೂ ದೇಶದ ಭವಿಷ್ಯಕ್ಕಾಗಿ ನೀವು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು. ಇದು ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಮಾತ್ರವಲ್ಲ ಬೆಂಗಳೂರಿನ ಹೊರತಾಗಿ ಪ್ರಗತಿ ಸಾಧಿಸಲು ನಾವು ಗುರಿ ಹೊಂದಿದ್ದೇವೆ. ನಮ್ಮ ರಾಜ್ಯದಲ್ಲಿ ಏರೋಸ್ಪೇಸ್ ಕ್ಷೇತ್ರದಲ್ಲಿ ನಮ್ಮ ಎಂಎಸ್ಎಂಇಗಳು ದೊಡ್ಡ ಶಕ್ತಿ ತುಬುತ್ತಿವೆ. ಬಾಹ್ಯಾಕಾಶ ಕ್ಷೇತ್ರದ ಸಾಧನೆಗೆ ರಾಕೆಟ್ ಗಳನ್ನು ನಮ್ಮ ಪೀಣ್ಯ ಕೈಗಾರಿಕಾ ಪ್ರದೇಶದಲ್ಲೇ ತಯಾರು ಮಾಡಿದ್ದೆವು” ಎಂದರು.

“ನೆಹರೂ ಅವರ ಕಾಲದಿಂದ ದೊಡ್ಡ ಕೈಗಾರಿಕೆಗಳು ಆರಂಭವಾಗಿ ದೊಡ್ಡ ಮಟ್ಟಕ್ಕೆ ಬೆಳೆದಿವೆ. ದೇಶದ ದೊಡ್ಡ ಕಂಪನಿಗಳು ನಮ್ಮ ರಾಜ್ಯದ ನೀತಿಗಳು, ಸ್ನೇಹ ಸಂಬಂಧವನ್ನು ಮೆಚ್ಚಿ ನಮ್ಮ ರಾಜ್ಯಕ್ಕೆ ಬಂದಿದ್ದಾರೆ. ನಾವೆಲ್ಲರೂ ಒಟ್ಟಾಗಿ ಸೇರಿ ಭವಿಷ್ಯದತ್ತ ಹೆಜ್ಜೆ ಹಾಕೋಣ. ಈ ಸಮಾವೇಶದ ಮೂಲಕ ರಾಜ್ಯಕ್ಕೆ 10 ಲಕ್ಷ ಕೋಟಿ ಗುರಿ ಹೊಂದಿದೆ. ನಮ್ಮ ನೂತನ ಕೈಗಾರಿಕಾ ನೀತಿಯು ಬೆಂಗಳೂರಿನ ಹೊರತಾಗಿ ರಾಜ್ಯದ ಇತರ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿದೆ” ಎಂದು ಭರವಸೆ ನೀಡಿದರು.

“ಸಚಿವ ಹೆಚ್.ಕೆ ಪಾಟೀಲ್ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಪ್ರವಾಸೋದ್ಯಮ ನೀತಿ ಪ್ರಕಟಿಸಿದೆ. ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ನವೀನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ 300 ಕಿ.ಮೀ ಕರಾವಳಿ ಪ್ರದೇಶವಿದ್ದು, ಈ ಭಾಗದಲ್ಲಿ ನಮ್ಮ ಐತಿಹಾಸಿಕ ಸ್ಥಳಗಳನ್ನು ಉಳಿಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು. ಕರ್ನಾಟಕ ರಾಜ್ಯ ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಈ ಸಮಾವೇಶ ನಮ್ಮ ರಾಜ್ಯ ಜಾಗತಿಕ ಮಟ್ಟದಲ್ಲಿ ವ್ಯಾಪಾರ ವ್ಯವಹಾರ ಮಾಡುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ನಾವು ದೇಶದ ಇತರೆ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಇದು ನಮ್ಮ ಸಾಮರ್ಥ್ಯ” ಎಂದು ತಿಳಿಸಿದರು.

“ಈ ದೇಶದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭಿಸಿದ್ದೆ ಎಸ್.ಎಂ ಕೃಷ್ಣ ಅವರ ಸರ್ಕಾರ ಕರ್ನಾಟಕದಲ್ಲಿ. ಈ ಸಮಾವೇಶ ಕೇವಲ ಆರಂಭವಷ್ಟೇ, ಇಲ್ಲಿಂದ ನಿಮಗೆ ಅವಕಾಶಗಳು ತೆರೆದುಕೊಳ್ಳಲು ಆರಂಭವಾಗುತ್ತವೆ. ವರ್ಷದ 365 ದಿನಗಳು ಕೂಡ ನಿಮಗಾಗಿ ನಾವು ಬಾಗಿಲು ತೆರೆದಿರುತ್ತೇವೆ. ನೀವು ಯಾವಾಗ ಬಂದರೂ ನಾವು ನಿಮಗೆ ಅಗತ್ಯ ನೆರವು ನೀಡಿ ನಿಮ್ಮ ಪ್ರಗತಿ, ಕರ್ನಾಟಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ. ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ಈ ಸಮಾವೇಶ ಯಶಸ್ವಿಯಾಗಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

Tags: Anand MahindracongressDK ShivakumarHK PatilInvest KarnatakaMB PatilneharuSajjan JindalSM KrishnaV somanna
Previous Post

ಕಣ್ವಜಲಾಶಯದಲ್ಲಿ. ತೆಪ್ಪೋತ್ಸವ ಕೆ ಡಿಕೆ ಸುರೇಶ್ ಭಾಗಿ

Next Post

ಎಲ್ಲಾ ಅಕ್ರಮಗಳ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ಮಾಡ್ತಿಲ್ಲ ಎಂದ ಸ್ನೇಹಮಹಿ ಕೃಷ್ಣ

Related Posts

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
0

ಕನ್ನಡ ಚಿತ್ರರಂಗದ ಬಾದ್‌ಷಾ ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟ ಸುದೀಪ್‌ ಮನೆಯಲ್ಲಿ ಅವರ ತಾಯಿ ನಿಧನದ ಬಳಿಕ ನಡೆಯುತ್ತಿರುವ ಮೊದಲ ಶುಭಕಾರ್ಯ...

Read moreDetails
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
Next Post

ಎಲ್ಲಾ ಅಕ್ರಮಗಳ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ಮಾಡ್ತಿಲ್ಲ ಎಂದ ಸ್ನೇಹಮಹಿ ಕೃಷ್ಣ

Recent News

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!