• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಬೆಂಗಳೂರು ಕೆರೆ ಒತ್ತುವರಿ: ಬಿಜೆಪಿ-ಕಾಂಗ್ರೆಸ್‌ ಜಟಾಪಟಿ!

Any Mind by Any Mind
September 19, 2022
in ಕರ್ನಾಟಕ
0
ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಬೆಂಗಳೂರು ಕೆರೆ ಒತ್ತುವರಿ: ಬಿಜೆಪಿ-ಕಾಂಗ್ರೆಸ್‌ ಜಟಾಪಟಿ!
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ ವಿಷಯ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ಸದಸ್ಯರ ನಡುವೆ ಜಟಾಪಟಿ ನಡೆದು ಕಲಾಪವನ್ನು ಮುಂದೂಡಲಾಯಿತು.

ADVERTISEMENT

ವಿಧಾನಸಭೆ ಅಧಿವೇಶನದ 6ನೇ ದಿನವಾದ ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಮಳೆ ಅನಾಹುತ ವಿಷಯ ಮತ್ತೊಮ್ಮೆ ಪ್ರಸ್ತಾಪವಾಯಿತು. ಕಾಂಗ್ರೆಸ್‌ ನಾಯಕರ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಮತ್ತು ಕಂದಾಯ ಸಚಿವರ ಉತ್ತರಗಳಿಗೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್‌ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಮಾತಿನ ಚಕಮಕಿ ನಡೆದು ಕಲಾಪವನ್ನು ಮಧ್ಯಾಹ್ನ ಭೋಜನ ವಿರಾಮದ ನಂತರಕ್ಕೆ ಮುಂದೂಡಲಾಯಿತು.

ಕಂದಾಯ ಸಚಿವ ಆರ್.ಅಶೋಕರ್‌ ಕೆರೆ ಮುಚ್ಚಲು ಕಂದಾಯ ಇಲಾಖೆಗೆ ಅನುಮತಿ ಇಲ್ಲ. ಆದರೆ ಕಂದಾಯ ಇಲಾಖೆ ಅಥವಾ ಸಣ್ಣ ನೀರಾವರಿ ಸಚಿವರು ಸಂಪುಟಕ್ಕೆ ಶಿಫಾರಸು ಮಾಡುತ್ತಾರೆ. ಅಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಕೆಂಪೇಗೌಡರ ನಂತರ ಬೆಂಗಳೂರಿನಲ್ಲಿ ಯಾವುದೇ ಕೆರೆಗಳು ನಿರ್ಮಾಣ ಆಗಿಲ್ಲ. ಬದಲಾಗಿ ಮುಚ್ಚಲಾಗುತ್ತಿದೆ ಎಂದು ವಿವರಿಸಿದರು.

ಬೆಂಗಳೂರಿನಲ್ಲಿ 42 ಕೆರೆಗಳನ್ನು ಮುಚ್ಚಲಾಗಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದಲೇ 28 ಕೆರೆಗಳನ್ನು ಮುಚ್ಚಲಾಗಿದೆ. ಬಿಬಿಎಂಪಿಯಿಂದ ೫ ಹಾಗೂ ಖಾಸಗಿ ಒತ್ತುವರಿಗಳಿಂದ 5 ಕೆರೆಗಳನ್ನು ಮುಚ್ಚಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಅದರಲ್ಲೂ ವಿಧಾನಸೌಧ ಮತ್ತು ಹೈಕೋರ್ಟ್‌ ಸುತ್ತಮುತ್ತ ಸುರಿದ ಮಳೆ ಕಂಠೀರವ ಕ್ರೀಡಾಂಗಣಕ್ಕೆ ಹೋಗುತ್ತದೆ. ಅಲ್ಲಿ ಶೇಖರಣೆ ಆದ ನಂತರ ಕೋರಮಂಗಲ, ಎಚ್‌ ಎಸ್‌ ಆರ್‌ ಲೇಔಟ್‌ ತಲುಪುತ್ತದೆ. ಆದರೆ ಈಗ ಕೆರೆಗಳು ಮುಚ್ಚಿರುವುದರಿಂದ ಬೊಮ್ಮಾನಹಳ್ಳಿ ಭಾಗದಲ್ಲಿ ನುಗ್ಗುತ್ತಿದೆ ಎಂದು ಅವರು ವಿವರಿಸಿದರು.

ಈಗ ಮುಚ್ಚಿರುವ ಕೆರೆಗಳಿಂದ ಸುಮಾರು 2ರಿಂದ 4 ಟಿಎಂಸಿ ನೀರು ಸಂಗ್ರಹವಾಗುತ್ತಿತ್ತು. ಆದರೆ ನೀರು ಸಂಗ್ರಹ ಆಗಲು ಜಾಗವಿಲ್ಲದೇ ಬಡಾವಣೆಗಳಿಗೆ ನುಗ್ಗುತ್ತಿದೆ. ಇದಿರಂದ ಸುಮಾರು 5ರಿಂದ 6 ಕಿ.ಮೀ. ವ್ಯಾಪ್ತಿಯಲ್ಲಿ ಮಳೆ ಬಂದಾಗ ಪ್ರವಾಹ ಪರಿಸ್ಥಿತಿ ನಿರ್ಮಾಣಗುತ್ತಿದೆ ಎಂದು ಅಶೋಕ್‌ ವಿವರಿಸಿದರು.

ಅಶೋಕ್‌ ಇದುವರೆಗೆ ಕೆರೆಗಳನ್ನು ಮುಚ್ಚಿರುವ ಅವಧಿ ಪಟ್ಟಿ ನೀಡಿದಾಗ ಕೆರಳಿದ ಕಾಂಗ್ರೆಸ್‌ ಕಾಂಗ್ರೆಸ್‌ ಸದಸ್ಯರು, ನೀರು ಹಳೆ ಕಥೆಗಳನ್ನು ಹೇಳಬೇಡಿ. ಸಮಸ್ಯೆಗೆ ಪರಿಹಾರ ಏನು ಎಂದು ಹೇಳಿ. ಸಮಸ್ಯೆಗೆ ಪರಿಹಾರ ನೀಡದೇ ವಿಷಯ ಮಂಡಿಸುವುದು ಸರಿಯಲ್ಲ ಎಂದು ಪ್ರತಿರೋಧ ವ್ಯಕ್ತಪಡಿಸಿದರು.

ಈ ವೇಳೆ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್‌ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದರಿಂದ ಸ್ಪೀಕರ್‌ ವಿಶ್ವೇ‍ಶ್ವರ ಹೆಗಡೆ ಕಾಗೇರಿ ಮಧ್ಯಾಹ್ನ 2.45ರವರೆಗೆ ಭೋಜನ ಅವಧಿ ಮುಂದೂಡಿದರು.

Previous Post

ನಟಿ ಅಪಾರ್ಟ್‌ ಮೆಂಟ್‌ ನಲ್ಲಿ ಶವವಾಗಿ ಪತ್ತೆ!

Next Post

ಪ್ರಥಮ ದರ್ಜೆ ಸಹಾಯಕರ ಪರೀಕ್ಷಾ ಅಕ್ರಮ: ಪಿಎಸ್‌ ಐ ಅ‍ಶ್ವಿನಿ ಅನಂತಪುರ ಅಮಾನತು!

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಪ್ರಥಮ ದರ್ಜೆ ಸಹಾಯಕರ ಪರೀಕ್ಷಾ ಅಕ್ರಮ: ಪಿಎಸ್‌ ಐ ಅ‍ಶ್ವಿನಿ ಅನಂತಪುರ ಅಮಾನತು!

ಪ್ರಥಮ ದರ್ಜೆ ಸಹಾಯಕರ ಪರೀಕ್ಷಾ ಅಕ್ರಮ: ಪಿಎಸ್‌ ಐ ಅ‍ಶ್ವಿನಿ ಅನಂತಪುರ ಅಮಾನತು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!