ಎಂಇಎಸ್ ಮಹಾಮೇಳಕ್ಕೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದ ಬೆನ್ನಲ್ಲೇ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗಡಿವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ದೇವೇಂದ್ರ ಫಡ್ನವಿಸ್, ಗಡಿ ಭಾಗದ ಮರಾಠಿಗರ ಜೊತೆಗೆ ಮಹಾರಾಷ್ಟ್ರ ಸರ್ಕಾರವಿದೆ
ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮತ್ತೊಮ್ಮೆ ತನ್ನ ಉದ್ಧಟತನ ತೋರಿದೆ.
ಎಂಇಎಸ್ ಮಹಾಮೇಳಕ್ಕೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದ ಬೆನ್ನಲ್ಲೇ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗಡಿವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ದೇವೇಂದ್ರ ಫಡ್ನವಿಸ್, ಗಡಿ ಭಾಗದ ಮರಾಠಿಗರ ಜೊತೆಗೆ ಮಹಾರಾಷ್ಟ್ರ ಸರ್ಕಾರವಿದೆ. ಮರಾಠಿಗರಿಗೆ ಅನ್ಯಾಯ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ಮಹಾಮೇಳಕ್ಕೆ ಅವಕಾಶ ಕೊಡದಿರುವುದು ಸರಿಯಲ್ಲ, ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಅಲ್ಲದೇ ಮಹಾರಾಷ್ಟ್ರ ಮುಖ್ಯಮಂತ್ರಿ ಈಗಾಗಲೇ ಗಡಿ ಭಾಗದ ನೀರಾವರಿ ಯೋಜನೆಗೆ 2 ಸಾವಿರ ಕೋಟಿ ಘೋಷಿಸಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೆ ಗೃಹ ಸಚಿವ ಅಮಿತ್ ಶಾ ಅವರ ಮುಂದೆ ಇದನ್ನ ಹೇಳಿದ್ದಾರೆ. ಅಲ್ಲದೇ ಗಡಿ ವಿವಾದ ವಿಚಾರವಾಗಿ ಮಾಡಿದ್ದ ಟ್ವಿಟ್ ನನ್ನದಲ್ಲ ಅಂತಾ ಹೇಳಿದ್ದಾರೆ. ಹಾಗಾದರೆ ಸಿಎಂ ಹೆಸರಿನ ಟ್ವಿಟ್ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದಾರೆ ಅನ್ನೋದನ್ನ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಕೇಳುತ್ತೇವೆ ಎಂದು ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.