ಕರೋನಾ ಬಗ್ಗೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದ ಆರೋಪ- ವೈದ್ಯನ ಕ್ಲಿನಿಕ್ ಲೈಸೆನ್ಸ್ ರದ್ದುಗೊಳಿಸಲು ಆದೇಶ

ಕರೋನಾ ಎರಡನೇ ಅಲೆ ರಾಜ್ಯದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಕರೋನಾ ನಿಯಂತ್ರಣ ವಿಚಾರ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ  ವೈದ್ಯರು ನಾನಾ ರೀತಿ ಸಂದೇಶ ನೀಡುತ್ತಿದ್ದು, ಯಾವುದು ಸರಿ, ಯಾವುದು ತಪ್ಪು ಎಂಬುವುದರ  ಬಗ್ಗೆ ಜನರು ಗೊಂದಲಕ್ಕೀಡಾಗಿದ್ದಾರೆ. ಕೆಲವು ದಿನಗಳ ಹಿಂದೆ ಮಾಧ್ಯಮಯೊಂದರಲ್ಲಿ ಕರೋನಾ ನಿಯಂತ್ರಣ ವಿಚಾರ ಕುರಿತು ಮಾಸ್ಕ್, ಸಾಮಾಜಿಕ ಅಂತರಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಸಾರ್ವಜನಿಕರಿಗೆ ತಪ್ಪು ಮಾಹಿತಿ‌ ನೀಡಿದ  ಡಾ.ರಾಜು ಎಂಬ ವೈದ್ಯರ ಕ್ಲಿನಿಕ್‌ ಲೈಸೆನ್ಸ್‌ ರದ್ದುಗೊಳಿಸುವಂತೆ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌ ಆದೇಶ ನೀಡಿದೆ.

ಈ ಸಂಬಂಧ ಮೇ 15 ರಂದು ಬೆಂಗಳೂರು ನಗರ ಜಿಲ್ಲೆಯ ಮೂಡಲಪಾಳ್ಯದಲ್ಲಿರುವ ಸಾಗರ್‌ ಕ್ಲಿನಿಕ್‌ ಮಾಲೀಕರಾದ ಡಾ. ರಾಜು ಅವರು ಕೋವಿಡ್‌ ಬಗ್ಗೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದು,  ಇವರು ಸರ್ಕಾರದ ನಿಯಮವನ್ನು ಉಲ್ಲಂಘಿಸಿದ್ದಾರೆಂದು ಸಂಬಂಧ ಪಟ್ಟ ಇಲಾಖೆಯಿಂದ ನೋಟಿಸ್‌ ನೀಡಲಾಗಿತ್ತು.

ನೋಟಿಸ್ ಪ್ರತಿ

ಸಾಗರ್‌ ಕ್ಲಿನಿಕ್‌ನಲ್ಲಿ ವೈದ್ಯರು, ಶುಶ್ರೂಷಕರು ಸೇರಿದಂತೆ ಯಾವುದೇ ವೈದ್ಯಕೀಯ ಸಿಬ್ಬಂದಿ ಮಾಸ್ಕ್‌, ಸ್ಯಾನಿಟೈಸರ್ ಬಳಸದೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಇದಕ್ಕೆ ಸಾರ್ವಜನಿಕರು, ತಜ್ಞರು ಆತಂಕ ವ್ಯಕ್ತಪಡಿಸಿದ್ದರು.

ಕರೋನಾ ಮೊದಲ ಅಲೆಯಲ್ಲಿ ಡಾ.ರಾಜು ಪ್ರತಿಧ್ವನಿಯೊಂದಿಗೆ ಮಾತನಾಡಿದ್ದು ಹೀಗೆ

ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದ ಡಾ.ರಾಜು ಮಾಸ್ಕ್‌ ಹಾಕಿಕೊಳ್ಳದೆ, ಸ್ಯಾನಿಟೈಸರ್ ಬಳಸದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ನನ್ನ ವೈಯಕ್ತಿಕ ಆಯ್ಕೆ. ಮಾಸ್ಕ್ ಹಾಕದೇ ಇರುವುದಕ್ಕೆ ಅಪಾಯವಾಗುವುದಿದ್ದರೆ ಪರಿಣಾಮ ನನ್ನ ಮೇಲೆಯೇ ಆಗುತ್ತದೆ. ಇಲ್ಲಿ ರೋಗಿಗಳಿಗೆ ಧೈರ್ಯ ತುಂಬುವುದು ಮುಖ್ಯ  ಆ ಕೆಲಸ ಮಾಡಲಾಗುತ್ತಿದೆ ಎಂದಿದ್ದರು. ಧೈರ್ಯ ತುಂಬುವ ಕೆಲಸ ಮೆಚ್ಚುವಂತಹದ್ದೇ, ಹಾಗಂತ ಮಾಸ್ಕ್, ಸ್ಯಾನಿಟೈಜರ್‌, ಸಾಮಾಜಿಕ ಅಂತರ ಕಾಪಾಡದೆ ರೋಗಿಗಳಿಗೆ  ಚಿಕಿತ್ಸೆ ನೀಡುವುದನ್ನು  ತಜ್ಞರು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು.

 ವೈದ್ಯನ ಕ್ಲಿನಿಕ್‌ ಲೈಸೆನ್ಸ್‌ ರದ್ದುಗೊಳಿಸುವಂತೆ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌ ಆದೇಶ ನೀಡಿದ ಬೆನ್ನಲೆ, ಮೂಡಳಪಾಳ್ಯದಲ್ಲಿರುವ ಅವರ ಕ್ಲಿನಿಕ್​ಗೆ ಬೀಗ ಹಾಕಲು ಜಿಲ್ಲಾ ಆರೋಗ್ಯಾಧಿಕಾರಿ ಮುಂದಾಗಿದ್ದಾರೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...