• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯಡಿಯೂರಪ್ಪ ಕಳಪೆ ಮುಖ್ಯಮಂತ್ರಿ: ಸಿದ್ದರಾಮಯ್ಯ

Any Mind by Any Mind
June 8, 2021
in ಕರ್ನಾಟಕ
0
ಯಡಿಯೂರಪ್ಪ ಕಳಪೆ ಮುಖ್ಯಮಂತ್ರಿ: ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಯಡಿಯೂರಪ್ಪ ರಾಜೀನಾಮೆ ವಿಚಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳೆಲ್ಲವೂ ಬೃಹತ್ ನಾಟಕ. ನೀನು ಚಿವುಟಿದಂತೆ ಮಾಡು, ನಾನು ಅತ್ತಂತೆ ಮಾಡು ಎನ್ನುವಂತೆ ಆಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ.

ಬಿಜೆಪಿಯಲ್ಲಿ ನಡೆಯುತ್ತಿರುವ ಎಲ್ಲ ನಾಟಕವೂ ರಾಜ್ಯದ ಜನರಿಗೆ ಗೊತ್ತಾಗಿದೆ. ಹೀಗಾಗಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ತಮ್ಮ ನಿವಾಸದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಅವರು ಕಳಪೆ ಮುಖ್ಯಮಂತ್ರಿ. ಅವರನ್ನು ತೆಗೆಯುವ ಕುರಿತು ಮೊದಲಿನಿಂದಲೂ ಚರ್ಚೆ ನಡೆಯುತ್ತಿದೆ. ಆದರೆ, ಕರೋನಾ ಕಾಡುತ್ತಿರುವ ಸಂದರ್ಭದಲ್ಲಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಏನಾಗಬಹುದು, ಮುಂದಿನ ಮುಖ್ಯಮಂತ್ರಿ ಯಾರನ್ನು ಮಾಡಬೇಕು ಎಂಬ ಸಂಶಯ ವರಿಷ್ಠರನ್ನು ಕಾಡುತ್ತಿದೆ ಎಂದಿದ್ದಾರೆ.

ಯಡಿಯೂರಪ್ಪ ಅವರು ಶಾಸಕರಿಂದ ಸಹಿ ಸಂಗ್ರಹ ಮಾಡಬೇಡಿ ಎಂದಿದ್ದಾರೆ. ರೇಣುಕಾಚಾರ್ಯ 65 ಶಾಸಕರು ಈಗಾಗಲೇ  ಸಹಿ ಮಾಡಿದ್ದಾರೆ ಎನ್ನುತ್ತಾರೆ. ಈ ಸಹಿಗೆ ಕಿಮ್ಮತ್ತಿಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲವೂ ಡ್ರಾಮ ಎನ್ನುವುದು ತಿಳಿಯುವುದಿಲ್ಲವೇ ? ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನು ವರಿಷ್ಠರು ಹೇಳಿದ ಕೂಡಲೇ ರಾಜಿನಾಮೆ ನೀಡುತ್ತೇನೆ ಎಂದು ಯಡಿಯೂರಪ್ಪ ಅವರು  ಹೇಳಿದ್ದಾರೆ. ಇದು ಅವರ  ತಂತ್ರಗಾರಿಕೆಯ ಭಾಗ. ಮತ್ತೊಂದೆಡೆ ರೇಣುಕಾಚಾಯ೵ ಮೂಲಕ ಅವರೇ ಶಾಸಕರ ಸಹಿ ಸಂಗ್ರಹ ಮಾಡಿಸುತ್ತಿದ್ದಾರೆ. ಒಂದು ಕಡೆ ಬೆದರಿಸುವ ಮತ್ತು ನನಗೆ ಶಕ್ತಿ ಇದೆ ಎಂದು ತೋರಿಸಲು ಹೊರಟಿದ್ದಾರೆ. ಇದು ಸ್ವಾಭಾವಿಕವಾದ ರಾಜಕೀಯ ಬೆಳವಣಿಗೆಗಳು ಏನಲ್ಲ ಎಂದಿದ್ದಾರೆ.

ಒಗ್ಗಟ್ಟಿನ ಹೋರಾಟಕ್ಕೆ ಸಿಕ್ಕ ಜಯ :

ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಸವನಗೌಡ ತುರವೀಹಾಳ ಅವರು ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರು ಮಾಡಿರುವ ದ್ರೋಹವನ್ನು ಜನ ಸಹಿಸಲಿಲ್ಲ. ಅವರ ಬಗ್ಗೆ ಅಸಹ್ಯ ಭಾವನೆ ಉಂಟಾಗಿತ್ತು. ಹೀಗಾಗಿ ಮತದಾರರು ಅವರನ್ನು ಸೋಲಿಸುವ ತೀಮಾ೵ನ ಮಾಡಿದ್ದರು. ನಾನು ಮತ್ತು ಶಿವಕುಮಾರ್ ಪ್ರಚಾರ ಮಾಡಿದ್ದರ ಜೊತೆಗೆ ಸ್ಥಳೀಯ ನಾಯಕರೂ ನಮ್ಮ ಅಭ್ಯಥಿ೵ ಗೆಲುವಿಗೆ ಶ್ರಮಿಸಿದರು. ಒಗ್ಗಟ್ಟಾಗಿ ಕೆಲಸ ಮಾಡಿದ ಪರಿಣಾಮ ಮತ್ತು ಅನುಕಂಪದ ಅಲೆ ಬಸವನಗೌಡ ಅವರ ಗೆಲುವಿಗೆ ಕಾರಣವಾಯಿತು. ಈ ಮೂಲಕ ಮಸ್ಕಿ ಕ್ಷೇತ್ರದ ಜನ ಪಕ್ಷಾಂತರ ಮಾಡಿದವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಚುನಾವಣೆಯಾದರೆ ನಮ್ಮದೇ ಗೆಲುವು

ರಾಜ್ಯದಲ್ಲಿ ಯಾವುದೇ ಸಂದಭ೵ದಲ್ಲಿ ವಿದಾನಸಭೆ ಚುನಾವಣೆ ನಡೆದರೂ ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವ ವಾತಾವರಣ ನಿಮಾ೵ಣವಾಗಿದೆ. ಬಿಜೆಪಿ ಸಕಾ೵ರ ಎಲ್ಲ ರಂಗಗಳಲಿಯೂ ವಿಫಲವಾಗಿರುವುದೇ ಇದಕ್ಕೆ ಕಾರಣ. ಈ ಸಕಾ೵ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ವಿಷಯವನ್ನಂತೂ ಕೇಳುವಂತಿಲ್ಲ. ನಮ್ಮ ಶಾಸಕರು ಚುನಾವಣೆ ವೇಳೆ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಶಕ್ತಿ ಕಳೆದುಕೊಂಡಿದ್ದಾರೆ. ಅಭಿವೃದ್ಧಿಗೆ ಸಕಾ೵ರದಿಂದ ಅನುದಾನ ಬಿಡುಗಡೆ ಆಗದಿರುವುದೇ ಇದಕ್ಕೆ ಕಾರಣ. ಈಗಲೇ ಚುನಾವಣೆ ಬರಬೇಕು ಎಂದು ನಾವು ಬಯಸುವುದಿಲ್ಲ. ಸರ್ಕಾರ ಉರುಳಿಸುವ ಪ್ರಯತ್ನಕ್ಕೂ ಕೈ ಹಾಕುವುದಿಲ್ಲ ಸಿದ್ದರಾಮಯ್ಯ ಹೇಳಿದ್ದಾರೆ.

ಸುಪ್ರೀಂ ಚಾಟಿ ಬಳಿಕ ಎಚ್ಚತ್ತ ಮೋದಿ

ಸುಪ್ರೀಂಕೋಟ್೵ ಚಾಟಿ ಬೀಸಿದ ಬಳಿಕ ಕರೋನಾ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಲಸಿಕೆಯನ್ನು ಶೇ. 75ರಷ್ಟು ಕೇಂದ್ರ ಸಕಾ೵ರ ಮತ್ತು ಶೇ. 25ರಷ್ಟನ್ನು ಖಾಸಗಿಯವರು ಖರೀದಿ ಮಾಡಲು ಅವಕಾಶ ನೀಡಲಾಗಿದೆ. ಖಾಸಗಿಯವರು ಉಚಿತವಾಗಿ ಲಸಿಕೆ ಹಾಕುವುದಿಲ್ಲ. ರಾಜ್ಯದಲ್ಲಿ ಟೆಸ್ಟಿಂಗ್ ಪಾಸಿಟಿವಿಟಿ ದರ ಕಡಿಮೆಯಾಗಿಲ್ಲ. ಇನ್ನೂ ಶೇ. 9ರ ಆಸುಪಾಸಿನಲ್ಲೇ ಇದೆ. ಮರಣ ಪ್ರಮಾಣ ಕೂಡ ಹೆಚ್ಚಾಗಿಯೇ ಇದೆ. ಸೋಂಕು ನಿಯಂತ್ರಣ ಮಾಡುವ ಕೆಲಸ ಸಮಪ೵ಕವಾಗಿ ನಡೆಯದಿರುವುದೇ ಇದಕ್ಕೆ ಕಾರಣ. ಸಕಾ೵ರ ಸಂಪೂಣ೵ವಾಗಿ ನಿಷ್ಕ್ರಿಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಸಿಬಿ ನಿಷ್ಕ್ರಿಯ : ಬಿಜೆಪಿ ಕಾರಣ

ರಾಜ್ಯ ಸಕಾ೵ರದ ವಿರುದ್ಧ ಭ್ರಷ್ಟಾಚಾರದ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿದೆ. ಹಲವಾರು ಸಚಿವರುಗಳ ವಿರುದ್ಧ ಭ್ರಷ್ಟಾಚಾರದ ದೂರುಗಳನ್ನು ನೀಡಿದರೂ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುತ್ತಿಲ್ಲ. ಎಸಿಬಿಯಂತೂ ನಿಷ್ಕ್ರಿಯವಾಗಿದೆ. ಎಸಿಬಿಯನ್ನು ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದರು. ಈಗ ಅದರ ಅಸ್ತಿತ್ವವನ್ನೇ ಇಲ್ಲವಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ದೂರುಗಳು ಬಂದರೂ ಕ್ರಮ ಕೈಗೊಳ್ಳುತ್ತಿಲ್ಲ. ಹಾಗಾದರೆ ಸಕಾ೵ರ ಎಸಿಬಿ ವಿರುದ್ಧ ಯಾವ ಕ್ರಮ ಕೈಗೊಂಡಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Previous Post

ಉತ್ತರಪ್ರದೇಶದ ಆರೋಗ್ಯ ವ್ಯವಸ್ಥೆ ಅನಾರೋಗ್ಯಕ್ಕೆ ತುತ್ತಾಗಿದೆ: ಆಸ್ಪತ್ರೆ ವ್ಯವಸ್ಥೆಯ ಚಿತ್ರಣ ಇಲ್ಲಿದೆ.!

Next Post

ರೈತರ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ- ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್

Related Posts

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
0

https://youtube.com/live/i9mkXF_1kPE

Read moreDetails
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

July 9, 2025
Next Post
ರೈತರ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ- ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್

ರೈತರ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ- ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್

Please login to join discussion

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!