ಬೆಂಗಳೂರು: ಕರ್ನಾಟಕದ ರಾಜಭವನಕ್ಕೆ ಹೆಸರು ಬದಲಾಯಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿರುವ ರಾಜ ಭವನಕ್ಕೆ ಲೋಕ ಭವನ ಕರ್ನಾಟಕ ಎಂದು ಮರು ನಾಮಕರಣ ಮಾಡುವಂತೆ ಭಾರತ ಸರ್ಕಾರದ ಗೃಹ ಸಚಿವಾಲಯ ಸೂಚನೆ ನೀಡಿದೆ.

ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳಿಗೆ ಪತ್ರ ಬರೆದು, ರಾಜ ಭವನಗಳನ್ನು ಲೋಕ ಭವನ ಎಂದು ಮರುನಾಮಕರಣ ಮಾಡುವಂತೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ ಭವನಕ್ಕೂ ಮರುನಾಮಕರಣ ಮಾಡಲಾಗಿದೆ.

ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭುಶಂಕರ್, ಮುಂದಿನ ದಿನಗಳಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳು, ಸರ್ಕಾರಿ ಆದೇಶಗಳು, ಅಧಿಕೃತ ಪತ್ರ ವ್ಯವಹಾರಗಳು, ವೆಬ್ಸೈಟ್ಗಳು ಹಾಗೂ ಫಲಕಗಳಲ್ಲಿ ರಾಜ ಭವನ ಕರ್ನಾಟಕ ಬದಲು ಲೋಕ ಭವನ ಕರ್ನಾಟಕ ಎಂದು ಬಳಸಬೇಕೆಂದು ತಿಳಿಸಿದ್ದಾರೆ.




