ಇಂದಿನಿಂದ ಆಗಸ್ಟ್ 15ರವರೆಗೆ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 212ನೇ ಫಲ ಪುಷ್ಪ ಪ್ರದರ್ಶನಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ ಬಳಿಕ ಸಿಎಂ ಬೊಮ್ಮಾಯಿ, ನೆವೆಂಬರ್ .1ರಂದು ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡ್ತೇವೆ ಎಂದು ಹೇಳಿದ್ದಾರೆ.

ದಿ. ಪುನೀತ್ ರಾಜ್ ಕುಮಾರ್ ಅವರಿಗೆ ನ.1 ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತಯಾರಿ ನಡೆಸಲಾಗುತ್ತಿದೆ. ಕರ್ನಾಟಕ ರತ್ನ ಪ್ರಶಸ್ತಿಗೆ ಈಗಾಗಲೇ ಸಣ್ಣ ಸಮಿತಿ ಸಹ ರಚನೆ ಮಾಡಿಕೊಂಡಿದ್ದೇವೆ. ಡಾ. ಪುನೀತ್ ಕುಟುಂಬ ಸದಸ್ಯರು ಇರಲಿದ್ದಾರೆ ಎಂದು ಹೇಳಿದ್ದಾರೆ.













