ರಾಜ್ಯದ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಧೀಮಂತ ನಾಯಕ ಎಸ್.ಎಂ.ಕೃಷ್ಣರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹ ಕೇಳಿಬಂದಿದೆ.
ರಾಜ್ಯ ಸೇರಿದಂತೆ ರಾಷ್ಟ್ರ ರಾಜಕಾರಣದಲ್ಲೂ ಸೇವೆ ಸಲ್ಲಿಸಿರುವ ಎಸ್.ಎಂ.ಕೃಷ್ಣ ಅವರಿಗೆ ಅವರ ಜನಸೇವೆಯನ್ನು ಪರಿಗಣಿಸಿ ಕರ್ನಾಟಕ ರತ್ನ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಲಾಗಿದೆ.
ಈ ವಿಚಾರದ ಬಗ್ಗೆ ಇಂದು ಟ್ವಿಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ರಾಜ್ಯ ಸರ್ಕಾರ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಕರ್ನಾಟಕ ರತ್ನ ನೀಡುವ ಸಲಹೆಯನ್ನು ಪರಿಗಣಿಸಿ ಎಂದು ಆಗ್ರಹಿಸಿದ್ದಾರೆ.