ಕಳೆದ ಒಂದೂವರೆ ವರ್ಷದಿಂದ ಕರೋನ ವೈರಸ್ ನಿಂದಾಗಿ ಶಿಕ್ಷಣ ವ್ಯವಸ್ಥೆಯೇ ಅತಂತ್ರವಾಗಿದೆ. ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿಯುತ್ತಿದ್ದಾರೆ. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡುತ್ತು ಕರೋನ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 23 ರಿಂದ ಶಾಲೆ ತೆರೆಯಲು ಸರ್ಕಾರ ನಿರ್ಧರಿಸಿದೆ.
ದಿನಾಂಕ 23-08-2021ರಿಂದ ರಾಜ್ಯದಲ್ಲಿ ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9ನೇ ರಿಂದ 12ನೇ ತರಗತಿಗಳನ್ನು ಪ್ರಾರಂಭಿಸುವ ಕುರಿತು ನೆನ್ನೆ ಅಂದರೆ ಭಾನುವಾರ ಸಿಎಂ ಕರೋನ ನಿಯಂತ್ರಣ ಸಮೀತಿ, ತಜ್ಞರ ಜೊತೆ ಚರ್ಚೆ ಮಾಡಿದ್ದರು ಸಮೀತಿಯ ಸದಸ್ಯರು ಮತ್ತು ತಜ್ಞರು ಆಗಸ್ಟ್23 ರಿಂದ ಒಂದಷ್ಟು ಮಾರ್ಗಸೂಚಿಯೊಂದಿಗೆ ಶಾಲೆಯನ್ನು ತೆರೆಯಬಹುದು ಎಂದು ಸಿಎಂಗೆ ತಿಳಿಸಿದ ಬಳಿಕ ಸಿಎಂ ಪ್ರತಿ ದಿನ ಅರ್ಧ ದಿನ ಬೆಳಗಿನ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ತೆರೆಯಲು ಅವಕಾಶ ನೀಡುವುದಾಗಿ ಹೇಳಿದ್ದರು. 1 ರಿಂದ 8ನೇ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ನಂತ್ರ ನಿರ್ಧರಿಸಲಾಗುವುದು ಎಂದು ತೀರ್ಮಾನಿಸಲಾಗಿದೆ. ಈ ಕುರಿತು ತರಗತಿ ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಹೇಳಿದ್ದರು.
ಆದ್ದರಿಂದ ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಹೆಚ್ಚು ಇರುವ ಜಿಲ್ಲೆಗಳಲ್ಲಿ 1 ರಿಂದ 10ನೇ ತರಗತಿಗಳಿಗೆ ಪರ್ಯಾಯ ವಿಧಾನದಲ್ಲಿ ಕಲಿಕೆ ಮತ್ತು ಬೋಧನಾ ಪ್ರಕ್ರಿಯೆಗಳನ್ನು ಮುಂದುವರೆಸಲು ತಿಳಸಲಾಗಿದೆ.
ಮುಂದುವರೆದು ದಿನಾಂಕ 23-08-2021ರಿಂದ ಕೋವಿಡ್-19ರ ಸೋಂಕಿನ ಪ್ರಮಾಣ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಗಳಿಗೆ ಸಂಬಂಧಿಸಿದಂತೆ ಈ ಕೆಳಗಿನಂತೆ ಕ್ರಮವಹಿಸಲು ಸೂಚಿಸಿದೆ.
9 ಮತ್ತು 10ನೇ ತರಗತಿ ಆರಂಭಿಸಲು ಮಾರ್ಗಸೂಚಿ ಕ್ರಮಗಳು
ಶೇ.2ಕ್ಕಿಂತ ಕಡಿಮೆ ಸೋಂಕಿನ ಪ್ರಮಾಣ ಇರುವ ಜಿಲ್ಲೆಗಳಲ್ಲಿ 9 ಮತ್ತು 10ನೇ ತರಗತಿಗಳನ್ನು ದಿನಾಂಕ 23-08-2021ರಿಂದ ಪ್ರತಿ ದಿನ ಅರ್ಧ ದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗಳನ್ನು ನಡೆಸುವುದು.
ಶಾಲೆ ಪ್ರಾರಂಭಿಸಲು ನಿಗಧಿಪಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.
ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ. ಅನುಮತಿ ಪತ್ರದಲ್ಲಿ ಮಗುವಿಗೆ ಕೋವಿಡ್-19 ಸೋಂಕಿನ ಯಾವುದೇ ಲಕ್ಷಣಗಳಿರುವುದಿಲ್ಲ ಎಂದು ದೃಢೀಕರಿಸಬೇಕು.
9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯವಾದ ಕುಡಿಯುವ ನೀರು, ಉಪಹಾರವನ್ನು ತರುವುದು
ಅವಶ್ಯಕತೆ ಅನುಸಾರ ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿನೀರಿನ ವ್ಯವಸ್ಥೆ ಮಾಡುವುದು.
ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲಿ ಹಾಜರಾಗಬಹುದು.
ಶಾಲೆಗೆ ಹಾಜರಾಗಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಈಗ ಅನುಸರಿಸುತ್ತಿರುವ ಆನ್ ಲೈನ್, ಇತರೆ ಪರ್ಯಾಯ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಹೋಗಬೇಕು.