ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೌದು, ರಾಜ್ಯ ಸರ್ಕಾರಿ ನೌಕರರಿಗೆ (Karnataka Govt Employees) ನೂತನ ಕಾಂಗ್ರೆಸ್ ಸರ್ಕಾರ ತುಟ್ಟಿಭತ್ಯೆಯನ್ನು ಶೇ.೪ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ.

ಈ ಮೂಲಕ ಸಿಎಂ ಸಿದ್ದರಾಮಯ್ಯ (cmsiddaramaiah) , ಡಿಸಿಎಂ ಡಿಕೆ ಶಿವಕುಮಾರ್ (DCM DKShivakumar) ನೇತೃತ್ವದ ಕಾಂಗ್ರೆಸ್ ಸರ್ಕಾರ (congress) ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಸರ್ಕಾರಿ ನೌಕರರಿ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 2023ರ ಜನವರಿ 1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಶೇಕಡ 35ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ರಾಜ್ಯ ಸರ್ಕಾರದ ಆದೇಶದಲ್ಲಿ ತಿಳಿಸಿದೆ.

ಪರಿಷ್ಕೃತ ತುಟ್ಟಿ ಭತ್ಯೆ (Dearness Allowance) 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಹೆಚ್ಚಿಸಲಾಗಿದೆ. ಈ ಮೂಲ ವೇತನದ ಶೇ.31 ರಿಂದ ಶೇಕಡ 35ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸೂಚಿಸಲಾಗಿದೆ ಎಂದು ಆರ್ಥಿಕ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.


ಯುಜಿಸಿ / ಎಐಸಿಟಿಇ / ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಹಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಶಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸರ್ಕಾರ ತಿಳಿಸಿದೆ

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ ಮೂಲ ವೇತನ ಮತ್ತು ಅದರಲ್ಲಿ ಸ್ಥಗಿತ ವೇತನ ಬಡ್ತಿ, ಇತರೆ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ ಅದು, ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ನೀಡಲಾಗಿದ್ದಲ್ಲಿ ಅವುಗಳು ಸೇರಿರುತ್ತವೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.


