• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ಪ್ರತಿಧ್ವನಿ by ಪ್ರತಿಧ್ವನಿ
October 8, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

2032ರ ವೇಳೆಗೆ 1 ಟ್ರಿಲಿಯನ್ ಡಾಲರ್‌ ಆರ್ಥಿಕ ಲಕ್ಷ್ಯವನ್ನು ಸಾಧಿಸುವ ಗುರಿ

ADVERTISEMENT

ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ ನೀಡಿದ್ದು, ಇದು ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ‘ನಿಪುಣ’ ದೃಷ್ಟಿಕೋನಕ್ಕೆ ಪೂರಕವಾಗಿ, ಅತಿದೊಡ್ಡ ಕೌಶಲ್ಯ, ಉನ್ನತೀಕರಣ ಮತ್ತು ಮರುಕೌಶಲ್ಯ ಯೋಜನೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಏಳು ವರ್ಷಗಳ ಮಾರ್ಗಸೂಚಿ ಮತ್ತು 4,432.5 ಕೋಟಿ ರೂ. ವೆಚ್ಚದೊಂದಿಗೆ, ಈ ನೀತಿಯು ಕರ್ನಾಟಕವನ್ನು ಕೌಶಲ್ಯಪೂರ್ಣ ಕಾರ್ಯಪಡೆಯ ಪ್ರಮುಖ ಕೇಂದ್ರವನ್ನಾಗಿ ಮಾಡುವುದು ಹಾಗೂ 2032ರ ವೇಳೆಗೆ ರಾಜ್ಯದ 1 ಟ್ರಿಲಿಯನ್ ಡಾಲರ್‌ ಆರ್ಥಿಕ ಲಕ್ಷ್ಯವನ್ನು ಸಾಧಿಸುವ ಗುರಿಯನ್ನು ಹೊಂದಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಹೂಡಿಕೆ ರಾಜಧಾನಿ ಮಾತ್ರವಲ್ಲ, ಇದು ಕೌಶಲ್ಯ ಮತ್ತು ಜ್ಞಾನ ರಾಜಧಾನಿಯೂ ಆಗಿದೆ ಹಾಗೂ ನಮ್ಮ ಜನರನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸುವ ಮೂಲಕ ಈ ನಾಯಕತ್ವವನ್ನು ಮುಂದುವರಿಸಲು ನಾವು ಉದ್ದೇಶಿಸಿದ್ದೇವೆ ಎಂದು ತಿಳಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬದಲಾಗುತ್ತಿರುವ ತಂತ್ರಜ್ಞಾನಗಳು ಮತ್ತು ಉದ್ಯಮದ ಅಗತ್ಯತೆಗಳನ್ನು ಈ ನೀತಿಯು ಪರಿಹರಿಸುತ್ತದೆ, ಕ್ರೆಡಿಟ್ ಆಧಾರಿತ ಕಾರ್ಯಕ್ರಮಗಳ ಮೂಲಕ ಶಾಲೆಗಳು, ಉನ್ನತ ಶಿಕ್ಷಣ ಹಾಗೂ ವಿಶ್ವವಿದ್ಯಾಲಯಗಳಲ್ಲಿ ವೃತ್ತಿಪರ ಶಿಕ್ಷಣವನ್ನು ಸಂಯೋಜಿಸುತ್ತದೆ ಹಾಗೂ ಅಪ್ರೆಂಟಿಸ್‌ಶಿಪ್‌ಗಳು ಮತ್ತು ತರಬೇತಿಯ ಮೂಲಕ ಉದ್ಯಮ ಸಹಯೋಗವನ್ನು ಬಲಪಡಿಸುತ್ತದೆ ಎಂದು ವಿವರಗಳನ್ನು ನೀಡಿದ್ದಾರೆ.

ಕರ್ನಾಟಕದ ಪ್ರತಿಯೊಬ್ಬ ಯುವಜನರು ನಾಳಿನ ಆರ್ಥಿಕತೆಗೆ ಉದ್ಯೋಗಕ್ಕೆ ಸಿದ್ಧರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು, ಕೈಗಾರಿಕೆ ಮತ್ತು ಖಾಸಗಿ ಕ್ಷೇತ್ರಗಳು ಸೇರಿದಂತೆ ಸಕ್ರಿಯ ಭಾಗವಹಿಸುವಿಕೆಯ ಜೊತೆ, ಐಟಿ-ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯ ಅಭಿವೃದ್ಧಿ ಇಲಾಖೆ, ಕೆಕೆಆರ್‌ಡಿಬಿ ಸೇರಿದಂತೆ ಇತರೆ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮವನ್ನು ಮುನ್ನೆಡಸಲಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

Tags: lokesh vs priyank khargePriyank Khargepriyank kharge audiopriyank kharge breaking newspriyank kharge bytepriyank kharge critiquepriyank kharge interviewpriyank kharge latestpriyank kharge newspriyank kharge news 2025priyank kharge on bjppriyank kharge on modipriyank kharge on pm modipriyank kharge reactionpriyank kharge speechpriyank kharge statementpriyank kharge today newspriyank kharge updatespriyank kharge videopriyank kharge vs bjpPriyanka Kharge
Previous Post

ಸಾಮಾಜಿಕ ವ್ಯಾಧಿಗೆ ಮದ್ದು ಇರುವುದೆಲ್ಲಿ ?

Next Post

NS Bhosaraju: ಸಮೀಕ್ಷೆಗೆ ಸಹಕಾರ ನೀಡದೆ ವಿಪಕ್ಷಗಳಿಂದ ರಾಜಕೀಯ: ಸಚಿವ ಎನ್‌ ಎಸ್‌ ಭೋಸರಾಜು

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post

NS Bhosaraju: ಸಮೀಕ್ಷೆಗೆ ಸಹಕಾರ ನೀಡದೆ ವಿಪಕ್ಷಗಳಿಂದ ರಾಜಕೀಯ: ಸಚಿವ ಎನ್‌ ಎಸ್‌ ಭೋಸರಾಜು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada