ಯುದ್ದ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳು ರಾಜ್ಯಕ್ಕೆ ವಾಪಸ್ ಆಗಮಿಸುತ್ತಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಒಂದು ಹೊಸ ಆದೇಶ ಹೊರಡಿಸಿದೆ ಅದೇನೆಂದರೆ ಉಕ್ರೇನ್ನಿಂದ ರಾಜ್ಯಕ್ಕೆ ವಾಪಾಸ್ಸಾದ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗುತ್ತಿದೆ.
ಈ ಕುರಿತು KSRTC ವ್ಯವಸ್ಥಾಪಕ ನಿರ್ದೇಶಕ (MD) ಶಿವಯೋಗಿ ಕಳಸದ್ ಅಧಿಕಾರಿಗಳಿಗೆ ಆದೇಶಿಸಿದ್ದು ವಿಮಾಣ ನಿಲ್ದಾಣದಲ್ಲಿ ನಿಯೋಜನೆಗೊಂಡಿರುವ ನೋಡೆಲ್ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಕಾರ್ಯರೂಒಕ್ಕೆ ತರುವಂತೆ ಆದೇಶಿಸಿದ್ದಾರೆ.
ಭಾನುವಾರ ಏರ್ ಇಂಡಿಯಾ ವಿಮಾನದ ಮೂಲಕ ಮುಂಬೈಗೆ ಬಂದಿಳಿದ 12 ಜನ ಕರ್ನಾಟಕ ಮೂಲದ ವಿದ್ಯಾರ್ಥಿಗಳನ್ನು ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಕರ್ನಾಟಕ ಸರ್ಕಾರ ಸಚಿವರು ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.
ಬೆಂಗಳೂರು ನಗರದ 135 ವಿದ್ಯಾರ್ಥಿಗಳು ಸೇರಿದಂತೆ ರಾಜ್ಯದ 405 ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿದ್ದಾರೆ. ಇಲ್ಲಿಯವರೆಗೆ 30 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು ಇನ್ನುಳಿದ ವಿದ್ಯಾರ್ಥಿಗಳನ್ನು ಆದಷ್ಟು ಬೇಗ ಕರೆತರಲಾಗುವುದು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡೆಲ್ ಅಧಿಕಾರಿ ಮನೋಜ್ ರಂಜನ್ ತಿಳಿಸಿದ್ದಾರೆ.