ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಗಳನ್ನು ನೀಗಿಸಲು ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ಇಲಾಖೆ ಮುಂದಾಗಿದ್ದು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೇಗಳನ್ನು ನಡೆಸಲು ಉದ್ದೇಶಿಸಿದೆ.
ನೇಮಕಾತಿ ಅಧಿಸೂಚನೆಯಲ್ಲಿ ನಮೂದಿಸಿರುವ ಅರ್ಹ ಶಿಕ್ಷಕರ ಸಂಖ್ಯೆ ಕಡಿಮೆ ಇರುವ ಕಾರಣ ನಾವು ಅಗತ್ಯ ಶಿಕ್ಷಕರ ಸಂಖ್ಯೆಯನ್ನು ಪೂರೈಸಲು ಸಾಧ್ಯವಾಗಲಿಲ್ಲ. ಅವಶ್ಯಕತೆ ಹೆಚ್ಚಿದ್ದರು ಮೂರು ಸಾವಿರ ಅಭ್ಯರ್ಥಿಗಳು ಮಾತ್ರ ಸಿಇಟಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ.
ಈ ವರ್ಷ ಎರಡು ಬಾರಿ ಸಿಇಟಿ ನಡೆಸಲು ಇಲಾಖೆ ನಿರ್ಧರಿಸಿದೆ ಎಂದು ಸಚಿವ ನಾಗೇಶ ತಿಳಿಸಿದರು. ಸರ್ಕಾರಿ ಶಾಲೆಗಳಿಗೆ ಕನಿಷ್ಟ ಐದು ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಖಾಲಿ ಇರುವ ಹುದ್ದೆಗಳು ಭರ್ತಿಯಾಗುವವರೆಗು ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಕಲಬುರ್ಗಿಯಲ್ಲಿ ಶಿಕ್ಷಣ ಸಚಿವರು ಹೇಳಿದ್ದಾರೆ.
ಸೆಪ್ಟೆಂಬರ್ನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಪ್ರಾಥಮಿಕ, ಪ್ರೌಡ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ 45,223 ಹುದ್ದೆಗಳು ಖಾಲಿಯಿಲ್ಲ ಎಂದು ಸೂಚಿಸಿವೆ. ಪ್ರಾಥಮಿಕ ಹಂತದಲ್ಲಿ 25,813 ಹುದ್ದೆಗಳು ಖಾಲಿಯಿದ್ದರೆ, ಪ್ರೌಢಶಾಲಾ ಹಂತದಲ್ಲಿ 15,907 ಶಿಕ್ಷಕರ ಹುದ್ದೆಗಳು ಖಾಲಿಯಿವೆ.

ಹೈ ಸ್ಕೂಲ್ ಶಿಕ್ಷಕರ ನೇಮಕಕ್ಕೆ ನಾವು ಹಣಕಾಸು ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ. ನಾವು ಲಿಖಿತವಾಗಿ ಅನುಮತಿಯನ್ನು ಪಡೆದ ನಂತರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಶುರು ಮಾಡುತ್ತೇವೆ ಎಂದು ಡಿಪಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕ ಮಾಡಲು ಸ್ಥಳೀಯ ಅಧಿಕಾರಿಗಳಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ತಿಂಗಳು ರಾಜ್ಯದಲ್ಲಿ ಶಿಕ್ಷಕರ ದಿನಾಚರಣೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವಾರಜ್ ಬೊಮ್ಮಾಯಿರವರು ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಿರುವ ಕಾರಣ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ರವರ ಮನವಿ ಮೇರೆಗೆ ಶೀಘ್ರದಲ್ಲೇ ಐದು ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಘೋಷಿಸಿದ್ದರು.