• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ : ನೋಂದಣಿಯಾದ ಪದವೀಧರರು ಮಾತ್ರ ಮಾತದಾನ ಮಾಡಲು ಅರ್ಹ | Election

ಪ್ರತಿಧ್ವನಿ by ಪ್ರತಿಧ್ವನಿ
September 29, 2026
in Top Story, ಕರ್ನಾಟಕ
0
Karnataka West Graduates Constituency Election
Share on WhatsAppShare on FacebookShare on Telegram

ಧಾರವಾಡ : ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಗೆ (Election) ಸಂಬಂಧಿಸಿದಂತೆ, ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ಪದವೀಧರರು (Graduates) ಮಾತ್ರ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿರುತ್ತಾರೆ. ನವೆಂಬರ್ 1, 2025 ರ ಅರ್ಹತಾ ದಿನಾಂಕದನ್ವಯ ಇಲ್ಲಿಯವರೆಗೆ ಒಟ್ಟು 90,460 ಮತದಾರರು ನೋಂದಾಯಿಸಿಕೊಂಡಿರುತ್ತಾರೆ ಎಂದು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಮ್. ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT
Farmer CM Siddaramaiah in Delhi AICC Office:ದೆಹಲಿಯ ಕರ್ನಾಟಕ ಭವನದಿಂದ ಎಐಸಿಸಿ ಕಚೇರಿಯತ್ತ ಹೊರಟ ಸಿದ್ದರಾಮಯ್ಯ

 ಚುನಾವಣೆಗೆ ಸ್ಪರ್ಧಿಸುವ ಉಮೇದುವಾರರು 30 ವರ್ಷಗಳಿಗೆ ಕಡಿಮೆ ಇರಬಾರದು. ಉಮೇದುವಾರರು ಕರ್ನಾಟಕದ ಯಾವುದಾದರೂ ವಿಧಾನ ಸಭಾ ಕ್ಷೇತ್ರದ ಮತದಾರರಾಗಿರಬೇಕು. ಉಮೇದುವಾರರು  ಯಾವುದೇ ಕಾನೂನಿನಡಿ ಅನರ್ಹರಾಗಿರಬಾರದು. ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿರುವ ನೋಂದಾಯಿತರಾದ ಪದವೀಧರರು ಮಾತ್ರ ಮತದಾರರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ಚುನಾವಣೆಗೆ ಡಿ-ನೋವೋ ಪದ್ಧತಿಯನ್ವಯ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಒಟ್ಟು 137 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 128 ಮೂಲ ಹಾಗೂ 9 ಹೆಚ್ಚುವರಿ ಮತಗಟ್ಟೆಗಳು ಸೇರಿವೆ. ಭಾರತ ಚುನಾವಣಾ ಆಯೋಗವು ಸೆ.22 ರಂದು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅಂದಿನಿಂದಲೇ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ಮಾರ್ಗದರ್ಶನಕ್ಕಾಗಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಹೇಳಿದ್ದಾರೆ.

Santosh Lad : ವಿಶೇಷ ಚೇತನರ ಶಿಕ್ಷಣದಲ್ಲಿ, ಖಾಸಗಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಕಾಯ್ದೆ ಸಿದ್ಧ..! #pratidhvani

 

ಚುನಾವಣೆಗೆ ಸ್ಪರ್ಧಿಸಲು ಬಯಸುವ ಉಮೇದುವಾರರು ನಾಮಪತ್ರ ನಮೂನೆ-2ಇ, ಪರಿಷ್ಕøತ ಪ್ರಮಾಣ ಪತ್ರ (ಅಫಿಡವಿಟ್) ನಮೂನೆ-26 ಸೇರಿದಂತೆ ಇತರ ನಮೂನೆಗಳನ್ನು ಸೆಪ್ಟೆಂಬರ್ 29, 2026 ರಿಂದ ಧಾರವಾಡ ಜಿಲ್ಲಾಧಿಕಾರಿಗಳವರ ಕಚೇರಿಯ ವೇಳೆಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 6, 2026 ರವರೆಗೆ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ, ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಧಾರವಾಡ ಅವರಿಗೆ ಸಲ್ಲಿಸಬಹುದು.

ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಕಲಂ 34ರ ಅನ್ವಯ ಸಾಮಾನ್ಯ ವರ್ಗದ ಉಮೇದುವಾರರು ರೂ. 10,000 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉಮೇದುವಾರರು ರೂ. 5,000 ಠೇವಣಿಯನ್ನು ನಾಮಪತ್ರ ಸಲ್ಲಿಕೆ ಕಾಲಕ್ಕೆ ಠೇವಣಿ ಇಡಬೇಕು.

Santosh Lad : ರಾಜ್ಯದ ಪತ್ರಿಕಾ, ಹಾಲು ವಿತರಕರಿಗೆ ಕಾರ್ಮಿಕರ ಅಪಘಾತ, ಆರೋಗ್ಯ ಸಹಾಯ ನಿಧಿ ಜಾರಿ..! #newspaperboy

ಉಮೇದುವಾರರು ನಾಮಪತ್ರದೊಂದಿಗೆ ಸಲ್ಲಿಸುವ ಪ್ರಮಾಣ ಪತ್ರದಲ್ಲಿನ ಎಲ್ಲ ಅಂಕಣಗಳನ್ನು ಕಡ್ಡಾಯವಾಗಿ ಸೂಕ್ತ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು. ಯಾವುದೇ ಅಂಕಣವನ್ನು ಖಾಲಿ ಬಿಟ್ಟಲ್ಲಿ ನಾಮಪತ್ರ ಪರಿಶೀಲನೆ ವೇಳೆ ತಿರಸ್ಕøತವಾಗುವ ಸಾಧ್ಯತೆ ಇದೆ. ಪ್ರಮಾಣ ಪತ್ರ, ನಮೂನೆ ‘ಎಎ’ ಹಾಗೂ ‘ಬಿಬಿ’ಗಳನ್ನು ನಾಮಪತ್ರದೊಂದಿಗೆ ಸಲ್ಲಿಸದೇ ಇದ್ದಲ್ಲಿ, ಅವುಗಳನ್ನು ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಅಕ್ಟೋಬರ್ 6, 2026 ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ಸಲ್ಲಿಸಬೇಕು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಮ್. ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವ ಹೃದಯ ದಿನದ ವಿಶೇಷ : ಈ ಅಭ್ಯಾಸಗಳಿಂದ ಹೆಚ್ಚಾಗಬಹುದು `ಹೃದಯಾಘಾತ’ದ ಭೀತಿ | World Heart Day

 

Tags: ElectionKarnataka West Graduates ConstituencyVote
Previous Post

ವಿಶ್ವ ಹೃದಯ ದಿನದ ವಿಶೇಷ : ಈ ಅಭ್ಯಾಸಗಳಿಂದ ಹೆಚ್ಚಾಗಬಹುದು `ಹೃದಯಾಘಾತ’ದ ಭೀತಿ | World Heart Day

Next Post

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಸತಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
Applications invited for scholarships, financial incentives, and hostel admission for Scheduled Caste students

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಸತಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada