• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕೋಲಾರದ ಐಸಿಡಿಎಸ್ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಸಚಿವರ ಹೇಳಿಕೆ, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಲು ಕರೆ

ಪ್ರತಿಧ್ವನಿ by ಪ್ರತಿಧ್ವನಿ
November 24, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share on WhatsAppShare on FacebookShare on Telegram

ADVERTISEMENT

ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿಯಾಗಿದೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು (ಐಸಿಡಿಎಸ್) ಸಮಪರ್ಕವಾಗಿ ಜಾರಿಗೆ ತಂದ ರಾಜ್ಯ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಕೋಲಾರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಇಡೀ ದೇಶಕ್ಕೆ ಮಾದರಿಯಾಗಿ ನಮ್ಮ ಇಲಾಖೆ ಕೆಲಸ ಮಾಡುತ್ತಿದೆ ಎಂದರು.

ಮಹಿಳೆಯರಿಗೆ ಹಾಗೂ ಮಕ್ಕಳಿಗಾಗಿ ಹಲವು ಕಾರ್ಯಕ್ರಮಗಳನ್ನು ಕೊಟ್ಟ ಕ್ರೆಡಿಟ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. 2023ರ‌ ಚುನಾವಣಾ ಪೂರ್ವ ನಾವು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಪಕ್ಷ ಮಾಡುತ್ತಿದೆ ಎಂದು ಹೇಳಿದರು.

ಇಡೀ ದೇಶವೇ ಬಡತನದಿಂದ ತತ್ತರಿಸಿದ್ದ ವೇಳೆ ಬಡ ಮಕ್ಕಳಿಗೂ ಪೌಷ್ಠಿಕ ಆಹಾರ, ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದು 1973ರ ಅಕ್ಟೋಬರ್ 2 ರಂದು ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ನಮ್ಮ ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರು ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದರು. ಇದಾದ ಬಳಿಕ ನಮ್ಮ ಪಕ್ಷ ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಆರ್‌ಟಿಇ, ಆರ್‌ಟಿಐ, ಆಹಾರ ಭದ್ರತೆ ಕಾಯ್ದೆ, ಮಹಿಳೆಯರಿಗೆ ಮೀಸಲಾತಿ,‌ ಸ್ಥಳೀಯ ಆಡಳಿತದಲ್ಲಿ ಶೇಕಡ 50% ಮೀಸಲಾತಿಯನ್ನು ಜಾರಿಗೆ ತಂದಿತು ಎಂದರು.

ನನ್ನ ಕನಸಿನ ಬ್ಯಾಂಕ್ ಯಶಸ್ಸಿಗೆ ಕೈಜೋಡಿಸಿ
ನವೆಂಬರ್ 28ರ ಕಾರ್ಯಕ್ರಮ ಒಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಮುಂದಿನ 50 ವರ್ಷಕ್ಕೆ ಭದ್ರ ಬುನಾದಿ ಹಾಕುವುದೇ ಈ ಕಾರ್ಯಕ್ರಮದ ಉದ್ದೇಶ. ಮಹಿಳೆಯರ ಸಬಲೀಕರಣಕ್ಕೆ ಜಾರಿಗೆ ತಂದ ಯೋಜನೆಯೇ ಗೃಹಲಕ್ಷ್ಮಿ ಯೋಜನೆ. ಇದರ ಯಶಸ್ಸಿನ ಪ್ರಮುಖ ರೂವಾರಿಗಳು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು. ಇದೇ ಮಾದರಿಯಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಯಶಸ್ಸಿಗೊಳಿಸಬೇಕು. ಇದು ನನ್ನ ಕನಸಿನ ಯೋಜನೆಯಾಗಿದೆ ಎಂದು ಹೇಳಿದರು.

ಮಹಿಳೆಯರಿಗೆ ಶಕ್ತಿ‌ ತುಂಬಲು ಹಾಗೂ ರಕ್ಷಣೆ ನೀಡುವ ಸಲುವಾಗಿ ಅಕ್ಕ ಪಡೆಯನ್ನು ಆರಂಭಿಸಲಾಗುತ್ತಿದ್ದು, ಇದರಿಂದ ಮಹಿಳೆಯರಿಗೆ ನೈತಿಕವಾಗಿ ಸ್ಥೈರ್ಯ ಬರಲಿದೆ. ಜನನಿಬಿಡ ಪ್ರದೇಶದಲ್ಲಿ ಅಕ್ಕಪಡೆ ಓಡಾಡಲಿದ್ದು, ಮನೆಯ ಒಳಗೆ ಹಾಗೂ ಹೊರಗೆ ಹೆಣ್ಣುಮಕ್ಕಳು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಿದರೂ ಸಹಾಯವಾಣಿ ಮೂಲಕ ಅಕ್ಕಪಡೆ ಗಮನಕ್ಕೆ ತರಬೇಕು ಎಂದರು.

ಇನ್ನು, ಬಡ ಮಕ್ಕಳಿಗೆ ತಳಹಂತದಲ್ಲಿ ಗುಣಮಟ್ಟದ ಶಿಕ್ಷಣ ಸಿಗುವ ದೃಷ್ಟಿಯಿಂದ ಅಂಗನವಾಡಿ ಕೇಂದ್ರದಲ್ಲಿ ಎಲ್ ಕೆಜಿ, ಯುಕೆಜಿ‌ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಪೌಷ್ಠಿಕ ಆಹಾರದ ಜೊತೆಗೆ ಉತ್ತಮ ಶಿಕ್ಷಣ ಬಡ ಮಕ್ಕಳಿಗೆ ಸಿಗಬೇಕು ಎಂಬುದೇ ನಮ್ಮ ಉದ್ದೇಶ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಈ ವೇಳೆ ಕೋಲಾರ ಸಂಸದ ಮಲ್ಲೇಶ್ ಬಾಬು, ಕೋಲಾರ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ವೈ.ಶಿವಕುಮಾರ್, ನಗರಸಭೆ ಮಾಜಿ ಅಧ್ಯಕ್ಷರಾದ ಲಕ್ಷ್ಮೀ ದೇವಮ್ಮ, ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ, ಜಿಲ್ಲಾ ಪಂಚಾಯತ್ ನ ಸಿಇಒ ಪ್ರವೀಣ್ ಪಿ.ಬಾಗೇವಾಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿ ಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಾರಾಯಣಸ್ವಾಮಿ ಎನ್. ಸೇರಿದಂತೆ ಇಲಾಖೆಯ ಅಧಿಕಾರಿಗಳು,‌ ಸಿಬ್ಬಂದಿ ವರ್ಗದವರು, ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉಪಸ್ಥಿತರಿದ್ದರು.

Tags: anil kumarCEO Praveenkottur manjunathLakshmi hebbalkarlakshmi hebbalkar interviewlakshmi hebbalkar latest newslakshmi hebbalkar livelakshmi hebbalkar newslakshmi hebbalkar press meetlakshmi hebbalkar speechlakshmi hebbalkar statementlakshmi hebbalkar today newslakshmi hebbalkar videoM R RaviMallesh BabuMinister Lakshmi HebbalkarRabi Shankar SPY Shivakumar
Previous Post

ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ವೇದವಾಕ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ, ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ನವೆಂಬರ್ 28ರಂದು ತೆರೆಗೆ

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
Next Post

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ, ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ "GST" ಚಿತ್ರ ನವೆಂಬರ್ 28ರಂದು ತೆರೆಗೆ

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada