![](https://pratidhvani.com/wp-content/uploads/2024/05/KERALA-RAIN-1.png)
ರಾಜ್ಯಾದ್ಯಂತ ಮೇ 25ರಂದು ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಲಾಗಿದೆ.
ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಗದಗ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಿನ ಹಾಸನ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ.
ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.