• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಶ್ಮೀರ ನಾಯಕನಿಗೆ ಜಾಮೀನು ಮಂಜೂರು

ಪ್ರತಿಧ್ವನಿ by ಪ್ರತಿಧ್ವನಿ
August 28, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಪ್ರತ್ಯೇಕತಾವಾದಿ ನಾಯಕ ಶಬೀರ್ ಶಾ ಅವರನ್ನು ಬಿಡುಗಡೆ ಮಾಡುವಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆದೇಶಿಸಿದೆ.ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧೀರಜ್ ಮೋರೆ ಅವರು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಗರಿಷ್ಠ ಶಿಕ್ಷೆ ಏಳು ವರ್ಷಗಳು ಮತ್ತು ಆರೋಪಿಯು ಏಳು ವರ್ಷಗಳಿಗಿಂತ ಹೆಚ್ಚು ಕಸ್ಟಡಿಯಲ್ಲಿ ಕಳೆದಿದ್ದಾರೆ, ಅಂತಹ ಸನ್ನಿವೇಶದಲ್ಲಿ ಅವರನ್ನು ಬಿಡುಗಡೆ ಮಾಡಲು ಆದೇಶಿಸಲಾಗಿದೆ.ಆದಾಗ್ಯೂ, ನ್ಯಾಯಾಲಯದ ಈ ಆದೇಶದ ಹೊರತಾಗಿಯೂ, ಶಬೀರ್ ಷಾ ಜೈಲಿನಿಂದ ಹೊರಬರಲು ಸಾಧ್ಯವಾಗುವುದಿಲ್ಲ, ಏಕೆಂದರೆ ಭಯೋತ್ಪಾದಕ ಸಂಘಟನೆಗಳಿಗೆ ಹಣ ಒದಗಿಸಿದ ಪ್ರಕರಣವೂ ವಿಚಾರಣೆ ನಡೆಯುತಿದ್ದು ಬಾಕಿ ಉಳಿದಿದೆ.

ADVERTISEMENT

ವಿಚಾರಣೆ ವೇಳೆ ಶಬೀರ್ ಷಾ ಪರವಾಗಿ ವಾದ ಮಂಡಿಸಿದ ವಕೀಲರಾದ ಪ್ರಶಾಂತ್ ಪ್ರಕಾಶ್ ಮತ್ತು ಕೌಸರ್ ಖಾನ್, ‘‘ಆರೋಪಿಯು ಈಗಾಗಲೇ ತನ್ನ ವಿರುದ್ಧ ಪ್ರಕರಣ ನಡೆಯುತ್ತಿರುವ ಸೆಕ್ಷನ್‌ಗಳ ಅಡಿಯಲ್ಲಿ ಗರಿಷ್ಠ ಬಂಧನ ಅವಧಿಯನ್ನು ಜೈಲಿನಲ್ಲಿ ಕಳೆದಿದ್ದಾನೆ. ಪ್ರಕರಣವನ್ನು ಪರಿಶೀಲಿಸಿದಾಗ, ಶಬೀರ್ ಶಾ ವಿರುದ್ಧ ಮನಿ ಲಾಂಡರಿಂಗ್ ಕಾಯ್ದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಪ್ರಕರಣ ನಡೆಯುತ್ತಿದೆ ಮತ್ತು ಗರಿಷ್ಠ ಏಳು ವರ್ಷಗಳ ಶಿಕ್ಷೆಗೆ ಅವಕಾಶವಿದೆ ಎಂದು ನ್ಯಾಯಾಲಯವು ಗಮಮಿಸಿತು.

ಜುಲೈ 26, 2017 ರಂದು ಶಬೀರ್ ಷಾ ಅವರನ್ನು ಬಂಧಿಸಲಾಗಿದೆ ಎಂದು ನ್ಯಾಯಾಲಯವು ಗಮನಿಸಿದ್ದು ಅಂದಿನಿಂದ, ಆರೋಪಿಯು ಏಳು ವರ್ಷಗಳಿಗೂ ಹೆಚ್ಚು ಕಾಲ ಕಸ್ಟಡಿಯಲ್ಲಿದ್ದಾನೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 436 ಎ ಅಡಿಯಲ್ಲಿ ಈ ಪ್ರಕರಣದಲ್ಲಿ ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ. ಶಬ್ಬೀರ್ ಶಾ ಕಾಶ್ಮೀರದಲ್ಲಿ ಅಶಾಂತಿಗೆ ಉತ್ತೇಜನ ನೀಡಲು ಪಾಕಿಸ್ತಾನ ಸೇರಿದಂತೆ ದೇಶಗಳಿಂದ ಭಯೋತ್ಪಾದನೆ ನಿಧಿ ಸಂಗ್ರಹದಲ್ಲಿ ತೊಡಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಆರೋಪಿಸಿದೆ.

ವಿಶ್ವಸಂಸ್ಥೆಯಿಂದ ನಿಷೇಧಕ್ಕೊಳಗಾಗಿರುವ ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ಜತೆ ಶಾ ಸಂಪರ್ಕದಲ್ಲಿದ್ದರು ಎಂದು ಸಂಸ್ಥೆ ಹೇಳಿಕೊಂಡಿದೆ. ಷಾ ಪ್ರಸ್ತುತ ತಿಹಾರ್ ಜೈಲಿನಲ್ಲಿ ಜೈಲಿನಲ್ಲಿದ್ದು, ಭಯೋತ್ಪಾದನೆಗೆ ಹಣ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಆರೋಪಗಳನ್ನು ಎದುರಿಸುತ್ತಿದ್ದಾರೆ.

Tags: Kashmir leaderKashmiri separatist leader Shabir Shahmoney Laundering case
Previous Post

ಆದಾಯ ತೆರಿಗೆ ಮತ್ತು ಜಿಎಸ್‌ಟಿ ವಂಚನೆ ; ವೈದ್ಯ ಸೇರಿ ಮೂವರನ್ನು ಬಂಧಿಸಿದ ಸಿಬಿಐ

Next Post

ರೈತರ ವಿರುದ್ದ ಆಕ್ಷೇಪಾರ್ಹ ಹೇಳಿಕೆ ; ಕಂಗನಾ ಕ್ಷಮಯಾಚನೆಗೆ ರೈತ ಸಂಘಗಳ ಒತ್ತಾಯ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ರೈತರ ವಿರುದ್ದ ಆಕ್ಷೇಪಾರ್ಹ ಹೇಳಿಕೆ ; ಕಂಗನಾ ಕ್ಷಮಯಾಚನೆಗೆ ರೈತ ಸಂಘಗಳ ಒತ್ತಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada