ಬಾಲಿವುಡ್ ನಟಿ ಕತ್ರಿನಾ ಕೈಫ್ ಶಾಲಾ ಮಕ್ಕಳೊಂದಿಗೆ ಹೆಜ್ಜೆ ಹಾಕಿ ಸಂಬ್ರಮಿಸಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
ಇತ್ತೀಚಿಗೆ ತಮಿಳುನಾಡಿನ ಮಧುರೈನಲ್ಲಿರುವ ಮೌಂಟೇನ್ ವೀವ್ ಖಾಸಗಿ ಶಾಲೆಯ ಕಾರ್ಯಕ್ರಮವೊಂದಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕತ್ರಿನಾ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿ ಕುಷಿ ಪಟ್ಟಿದ್ದಾರೆ.
ಈ ಹಿಂದೆ 2020 ಹಾಗೂ 2021ರ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಶಾಲೆಗೆ ದೇಣಿಗೆ ನೀಡುವಂತೆ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದರು.