ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಅದರಂತೆ ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಕೂಡ ಮುಂಗಾರು ಆರಂಭಗೊಂಡಿದ್ದು, ಕೆಆರ್‌ಎಸ್ ಡ್ಯಾಂನಲ್ಲಿ (KRS dam) ನೀರಿನ ಒಳಹರಿವು ಹೆಚ್ಚಾಗಿದೆ.

ಇನ್ನು ನಿನ್ನೆ ಕೆಆರ್‌ಎಸ್ ಡ್ಯಾಂನಲ್ಲಿ 2,241 ಕ್ಯೂಸೆಕ್ ಒಳಹರಿವು ಇತ್ತು. ಆದ್ರೆ ಒಂದೇ ದಿನದಲ್ಲಿ 1,615 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದ್ದು, ಇವತ್ತು 3,856 ಕ್ಯೂಸೆಕ್ ಒಳಹರಿವು ಹೆಚ್ಚಾಗಿದೆ.ಈ ಹಿನ್ನಲೆ ನೀರಿನ ಮಟ್ಟದಲ್ಲೂ ಹೆಚ್ಚಳವಾಗಿದೆ.
ಒಟ್ಟಾರೆ 124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಮ್‌ನಲ್ಲಿ 88.40 ಅಡಿ ಭರ್ತಿಯಾಗಿದೆ.ಜೊತಗೆ 49.452 ಟಿಎಂಸಿ ಗರಿಷ್ಠ ಸಾಂದ್ರತೆ ಡ್ಯಾನಲ್ಲಿ 15.007 ಟಿಎಂಸಿ ನೀರು ಸಂಗ್ರಹವಾಗಿದೆ. ಇದೇ ರೀತಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಮದುವರೆದ್ರೆ ಆದ್ದಟು ಬೇಗ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವ ಸಾಧ್ಯತೆಯಿದೆ.





