2025-2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಫಲಿತಾಂಶ ಆನ್ಲೈನ್ನಲ್ಲಿ ಪ್ರಕಟವಾಗಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಆನ್ಲೈನ್ಲ್ಲಿ ರಿಸಲ್ಟ್ ನೋಡುವುದ್ಹೇಗೆ ಎನ್ನುವ ಸಂಪೂರಣ ವಿವರ ಈ ಕೆಳಗಿನಂತಿದೆ ನೋಡಿ..

2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ (Karnataka 2nd PUC Result 2026) ಹೊರಬಿದ್ದಿದೆ. ಆನ್ಲೈನ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಬಳಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು (ಏಪ್ರಿಲ್ 09) ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಇದಕ್ಕೂ ಮೊದಲು ಆನ್ಲೈನ್ನಲ್ಲಿ https://karresults.nic.in ವೆಬ್‌ಸೈಟ್ ಮೂಲಕ ಫಲಿತಾಂಶವನ್ನು ನೋಡಬಹುದು.

ಪರೀಕ್ಷೆಗೆ ಎದುರಿಸಿದ ವಿದ್ಯಾರ್ಥಿಗಳ ಸಂಖ್ಯೆ
ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1217 ಕೇಂದ್ರಗಳಲ್ಲಿ ನಡೆದಿದ್ದು, 5174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ಸೈನ್ಸ್ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.

ರಿಸಲ್ಟ್ ಹೀಗೆ ಚೆಕ್ ಮಾಡಬಹುದು
ದ್ವಿತೀಯ ಪಿಯುಸಿ ಫಲಿತಾಂಶದ ಮಾಹಿತಿ ಅಧಿಕೃತ ವೆಬ್‌ಸೈಟ್ https://karresults.nic.in ಲಿಂಕ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ನಂಬರ್ ನಮೂದಿಸಿ, ‘Submit’ ಬಟನ್ ಒತ್ತಿದ ತಕ್ಷಣ ಅಂಕಪಟ್ಟಿ ಪರದೆ ಓಪನ್ ಆಗಲಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್ಸೈಟ್ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೇ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.





