ದೆಹಲಿ: ಸರ್ವಾಧಿಕಾರದ ವಿರುದ್ಧ ಮತ ಪ್ರತಿಯೊಬ್ಬರೂ ಚಲಾಯಿಸಿ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಇಂದು ನಡೆಯುತ್ತಿರುವ 6ನೇ ಹಂತದ ಮತದಾನದ ಸಂದರ್ಭದಲ್ಲಿ ಚಾಂದಿನಿ ಚೌಕ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಿವಿಲ್ ಲೈನ್ಸ್ ಪ್ರದೇಶದ ಮತಗಟ್ಟೆಯಲ್ಲಿ ಕುಟುಂಬಸ್ಥರೊಂದಿಗೆ ತೆರಳಿ ಮತ ಚಲಾಯಿಸಿ ಮಾತನಾಡಿದ ಅವರು, ಸರ್ವಾಧಿಕಾರ, ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧ ಇಂದು ನಾನು ಮತ ಹಾಕಿದ್ದೇನೆ. ಪ್ರತಿಯೊಬ್ಬರು ಇದೇ ರೀತಿ ಮತ ಹಾಕಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾಪ್ರಭುತ್ವದ ಮಹಾನ್ ಹಬ್ಬದಲ್ಲಿ, ಪ್ರತಿಯೊಂದು ಮತವೂ ಸರ್ವಾಧಿಕಾರಿ ಚಿಂತನೆಯ ವಿರುದ್ಧ ಮತ್ತು ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಬಲಪಡಿಸುತ್ತದೆ. ಮತಗಟ್ಟೆಗೆ ಹೋಗಿ ಭಾರತದಲ್ಲಿ ಪ್ರಜಾಪ್ರಭುತ್ವವಿದೆ ಎಂದು ನಿಮ್ಮ ಮತದೊಂದಿಗೆ ತೋರಿಸಿ. ಪ್ರಜಾಪ್ರಭುತ್ವ ಉಳಿಯುತ್ತದೆ ಎಂದು ಕೇಜ್ರಿವಾಲ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.
ದೆಹಲಿಯ ಎಲ್ಲ 7 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಈಶಾನ್ಯ ದೆಹಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ವಿರುದ್ಧ ಬಿಜೆಪಿಯ ಮನೋಜ್ ತಿವಾರಿ ಸೇರಿದಂತೆ ಬಿಜೆಪಿ ಹಾಗೂ ಇನ್ನಿತರ ಪಕ್ಷಗಳ ಮಧ್ಯೆ ಭಾರೀ ಪೈಪೋಟಿ ನಡೆಯುತ್ತಿದೆ.