• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತಿಂಗಳಿಗೆ 83 ಲಕ್ಷ ಲಸಿಕೆ ಅವಶ್ಯಕತೆ ಇದೆ: ದೆಹಲಿಗೆ ಹೆಚ್ಚಿನ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೇಜ್ರಿವಾಲ್ ಪತ್ರ

Any Mind by Any Mind
May 9, 2021
in ದೇಶ, ರಾಜಕೀಯ
0
ತಿಂಗಳಿಗೆ 83 ಲಕ್ಷ ಲಸಿಕೆ ಅವಶ್ಯಕತೆ ಇದೆ: ದೆಹಲಿಗೆ ಹೆಚ್ಚಿನ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೇಜ್ರಿವಾಲ್ ಪತ್ರ
Share on WhatsAppShare on FacebookShare on Telegram

ದೆಹಲಿಗೆ ಹೆಚ್ಚಿನ ಲಸಿಕೆ ಪ್ರಮಾಣವನ್ನು ನೀಡಬೇಕೆಂದು ಒತ್ತಾಯಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಅವರಿಗೆ ಪತ್ರ ಬರೆದಿದ್ದಾರೆ. ಇದಕ್ಕಾಗಿ ಆರೋಗ್ಯ ಸಚಿವರು ಸೀರಮ್ ಸಂಸ್ಥೆ ಮತ್ತು ಭಾರತ್ ಬಯೋಟೆಕ್ ಅನ್ನು ನಿರ್ದೇಶಿಸಬೇಕು ಎಂದು ಕೇಜ್ರಿವಾಲ್ ಕೋರಿದ್ದಾರೆ. “ಮೂರನೇ ಅಲೆಯ ಭಯದ ಮಧ್ಯೆ ದೆಹಲಿಯಲ್ಲಿ ಎಲ್ಲರಿಗೂ ಮೂರು ತಿಂಗಳಲ್ಲಿ ಲಸಿಕೆ ನೀಡಲು ನಾವು ಬಯಸುತ್ತೇವೆ” ಎಂದು ತಿಳಿಸಿದ್ದಾರೆ.

ADVERTISEMENT

ದೆಹಲಿಯಲ್ಲಿ ಸುಮಾರು 2 ಕೋಟಿ ಜನಸಂಖ್ಯೆ ಇದ್ದು ಅದರಲ್ಲಿ 1.5 ಕೋಟಿ ಜನರು 18 ವರ್ಷಕ್ಕಿಂತ ಮೇಲ್ಪಟ್ಟವರು. ಎಲ್ಲರಿಗೂ ಲಸಿಕೆ ನೀಡಲು 3 ಕೋಟಿ ಲಸಿಕೆ ಅಗತ್ಯವಿದೆ ಎಂದು ಕೇಜ್ರಿವಾಲ್ ಪತ್ರದಲ್ಲಿ ತಿಳಿಸಿದ್ದಾರೆ.

“ನಾವು ಇಲ್ಲಿಯವರೆಗೆ ಸುಮಾರು 5 ಮಿಲಿಯನ್ ಲಸಿಕೆಗಳನ್ನು ಪಡೆದುಕೊಂಡಿದ್ದೇವೆ. ನಮಗೆ 250 ಲಕ್ಷಕ್ಕೂ ಹೆಚ್ಚಿನ ಲಸಿಕೆಗಳ ಅವಶ್ಯಕತೆ ಇದೆ ಆದರೆ ನಮಗೆ ಅಗತ್ಯವಾದ ಪ್ರಮಾಣದಲ್ಲಿ ಲಸಿಕೆ ಸಿಗುತ್ತಿಲ್ಲ ಎಂದು ತಿಳಿಸಿದ್ದಾರೆ.”

ಕೇಜ್ರಿವಾಲ್ ಬರೆದಿರುವ ಪತ್ರದಲ್ಲಿ, ದೆಹಲಿಯಲ್ಲಿ 18+ ವಯಸ್ಸಿನವರ ಡೇಟಾವನ್ನು ನೀಡಿದರು ಅವರು, “ದೆಹಲಿಯಲ್ಲಿ 18 ರಿಂದ 45 ವರ್ಷದ ನಡುವೆ ಸುಮಾರು 92 ಲಕ್ಷ ಜನರಿದ್ದಾರೆ. ಮೇ ನಿಂದ ಜುಲೈ ಅವಧಿಯಲ್ಲಿ ಪ್ರತಿ ತಿಂಗಳು ದೆಹಲಿಗೆ 60 ಲಕ್ಷ ಲಸಿಕೆ ಪ್ರಮಾಣವನ್ನು ಪೂರೈಸುವಂತೆ ನೀವು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್‌ಗೆ ಸೂಚಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರಿಗೆ ಕೇಳಿಕೊಂಡಿದ್ದಾರೆ. ”

18-45 ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಎರಡು ತರಹದ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ದೆಹಲಿಗೆ ಪ್ರತಿ ತಿಂಗಳು 83 ಲಕ್ಷ ಲಸಿಕೆಗಳು ಬೇಕಾಗುತ್ತವೆ, ಇದರಿಂದಾಗಿ ಮುಂದಿನ 3 ತಿಂಗಳಲ್ಲಿ ವ್ಯಾಕ್ಸಿನೇಷನ್ ಪೂರ್ಣಗೊಳಿಸಬಹುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ನಾವು ಪ್ರತಿದಿನ ಸುಮಾರು 1 ಲಕ್ಷ ಜನರಿಗೆ ಲಸಿಕೆಗಳನ್ನು ನೀಡುತ್ತಿದ್ದೇವೆ. ಮುಂದಿನ ಕೆಲವು ದಿನಗಳಲ್ಲಿ ನಾವು ಈ ಸಾಮರ್ಥ್ಯವನ್ನು ದಿನಕ್ಕೆ 3 ಲಕ್ಷಕ್ಕೆ ಹೆಚ್ಚಿಸಲಿದ್ದೇವೆ. ಆದ್ದರಿಂದ, ತಿಂಗಳಿಗೆ 90 ಲಕ್ಷ ಲಸಿಕೆ ಪ್ರಮಾಣವನ್ನು ತಲುಪಿಸುವ ಸಾಮರ್ಥ್ಯ ನಮಗಿದೆ. ದೆಹಲಿಯಲ್ಲಿ ಇದಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಸಹ ಸಿದ್ಧಪಡಿಸಲಾಗಿದೆ” ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಪತ್ರದಲ್ಲಿ ಬರೆದಿದ್ದಾರೆ.

ಲಸಿಕೆಯ ನೋಂದಣಿ ಪೋರ್ಟಲ್ ನಲ್ಲಿನ ಸಮಸ್ಯೆಯ ಬಗ್ಗೆ ಕೇಜ್ರಿವಾಲ್ ಆರೋಗ್ಯ ಸಚಿವರಿಗೆ ಮಾಹಿತಿ ನೀಡಿದ್ದಾರೆ. ಎಲ್ಲಾ ಜನರಿಗೆ ಸುಲಭವಾಗಿ ಲಸಿಕೆ ನೀಡುವಂತೆ ರಾಜ್ಯ ಸರ್ಕಾರಗಳು ತಮ್ಮದೇ ಆದ ಪೋರ್ಟಲ್ ಅಥವಾ ಆ್ಯಪ್ ತಯಾರಿಸುವಂತೆ ಸೂಚಿಸಿದರೆ ಉತ್ತಮ ಎಂದು ಸಿಎಂ ಒತ್ತಾಯಿಸಿದ್ದಾರೆ. “ಅಪ್ಲಿಕೇಶನ್‌ನಲ್ಲಿನ ಸಮಸ್ಯೆಗಳಿಂದಾಗಿ ಸಾಮಾನ್ಯ ಜನರಿಂದ ಸಮಯ ವ್ಯರ್ಥವಾಗುತ್ತಿದೆ”. ಲಸಿಕೆ ಪಡೆಯಲು ಜನರಿಗೆ ತೊಂದರೆಯಾಗದಂತೆ ನೀವು ರಾಜ್ಯಗಳು ತಮ್ಮದೇ ಆದ ಅಪ್ಲಿಕೇಶನ್ ಅಥವಾ ಬೇರೆ ವಿಧಾನವನ್ನು ರಚಿಸಲು ಅವಕಾಶ ನೀಡಬೇಕು ಎಂದು ಕೇಜ್ರಿವಾಲ್ ಕೇಳಿಕೊಂಡಿದ್ದಾರೆ.

ಲಸಿಕೆಯ ಬೆಲೆ ತಾರತಮ್ಯದ ಕುರಿತು ಅನೇಕ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ತಿಳಿದುಬಂದಿದೆ.

Previous Post

Covid ನಿಯಂತ್ರಣ- ಪ್ರಧಾನಿಗೆ ಸಲಹೆ ನೀಡಿದ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ

Next Post

ಭಾರತದಲ್ಲಿ ಪ್ರತಿದಿನ 25000 ಸಾವು ಆಗ್ತಿದೆ, ಆದರೆ ಸರ್ಕಾರ ತಪ್ಪು ಅಂಕಿ ಅಂಶಗಳನ್ನು ನೀಡುತ್ತಿವೆ!: ಖ್ಯಾತ ತಜ್ಞ ಕೆ.ಆಶಿಶ್

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಭಾರತದಲ್ಲಿ ಪ್ರತಿದಿನ 25000 ಸಾವು ಆಗ್ತಿದೆ, ಆದರೆ ಸರ್ಕಾರ ತಪ್ಪು ಅಂಕಿ ಅಂಶಗಳನ್ನು ನೀಡುತ್ತಿವೆ!: ಖ್ಯಾತ ತಜ್ಞ ಕೆ.ಆಶಿಶ್

ಭಾರತದಲ್ಲಿ ಪ್ರತಿದಿನ 25000 ಸಾವು ಆಗ್ತಿದೆ, ಆದರೆ ಸರ್ಕಾರ ತಪ್ಪು ಅಂಕಿ ಅಂಶಗಳನ್ನು ನೀಡುತ್ತಿವೆ!: ಖ್ಯಾತ ತಜ್ಞ ಕೆ.ಆಶಿಶ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!