ನವದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 6 ಫ್ಲಾಗ್‌ಸ್ಟಾಫ್ ರಸ್ತೆಯ ಮುಖ್ಯಮಂತ್ರಿ ನಿವಾಸವನ್ನು ಖಾಲಿ ಮಾಡಿದ್ದಾರೆ.
ದೆಹಲಿಯ ಲುಟಿಯನ್ಸ್ ವಲಯದ ಮಂಡಿ ಹೌಸ್ ಬಳಿಯ ಫಿರೋಜ್ ಷಾ ರಸ್ತೆಯಲ್ಲಿರುವ ತಮ್ಮ ಹೊಸ ವಿಳಾಸವಾದ ಬಂಗಲೆ ನಂ.5ಗೆ ಸ್ಥಳಾಂತರಗೊಂಡಿದ್ದಾರೆ.ಕೇಜ್ರಿವಾಲ್ ಅವರು ತಮ್ಮ ಪೋಷಕರು, ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರಿನಲ್ಲಿ ಫಿರೋಜ್ ಶಾ ರಸ್ತೆಯಲ್ಲಿರುವ ಪಕ್ಷದ ಸದಸ್ಯ ಅಶೋಕ್ ಮಿತ್ತಲ್ ಅವರ ಅಧಿಕೃತ ನಿವಾಸದ ಕಡೆಗೆ ತಲುಪಿದರು.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಇಡಿ ಹಾಗೂ ಸಿಬಿಐನಿಂದ ಬಂಧಿನಕ್ಕೊಳಗಾಗಿದ್ದ ಕೇಜ್ರಿವಾಲ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿನಿಂದ ಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ಮುಂದಿನ ಚುನಾವಣೆಯಲ್ಲಿ ಮತದಾರರಿಂದ ಪ್ರಾಮಾಣಿಕತೆಯ ಸರ್ಟಿಫಿಕೆಟ್ ಸಿಗುವವರೆಗೂ ಮುಖ್ಯಮಂತ್ರಿ ಸ್ಥಾನ ಏರುವುದಿಲ್ಲ ಎಂದು ಹೇಳಿದ್ದರು.
ನವರಾತ್ರಿ ವೇಳೆಯಲ್ಲಿ ಮುಖ್ಯಮಂತ್ರಿ ನಿವಾಸವನ್ನು ತೊರೆಯುವುದಾಗಿ ಹೇಳಿದ್ದರು. ಗುರುವಾರದಿಂದ ನವರಾತ್ರಿ ಆಚರಣೆ ಆರಂಭವಾಗಿದೆ.