ಬೆಂಗಳೂರು : ಕಳೆದ ತಿಂಗಳಷ್ಟೇ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಜೋಸೇಫ್ ಅವರು ಶಕ್ತಿ ದೇವತೆ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಅಲ್ಲದೆ ದೇವಿಗೆ ಕೆಲ ಕಾಣಿಕೆಗಳನ್ನು ನೀಡುವ ಮೂಲಕ ಗಮನ ಸೆಳೆದಿದ್ದರು. ಆದರೆ ಇಂದು ಕೇರಳದ ನೂತನ ಸಿಎಂ ವಿ.ಡಿ. ಸತೀಶನ್ ಇದೇ ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಮೊಲದ ಬಾರಿಗೆ ಉಡುಪಿಯ ಕೊಲ್ಲೂರಿಗೆ ಆಗಮಿಸಿದ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಝಡ್ ಪ್ಲಸ್ ಭದ್ರತೆಯಲ್ಲಿ ದೇವಸ್ಥಾನಕ್ಕೆ ಎಂಟ್ರಿಕೊಟ್ಟಿದ್ದ ಸತೀಶನ್‌ಗೆ ಸ್ಥಳೀಯ ಮುಖಂಡರು ಸಾಥ್ ನೀಡಿದ್ದರು.
ಇನ್ನೂ ಪ್ರಮುಖವಾಗಿ ದೈವ ಭಕ್ತರಾಗಿರುವ ಸತೀಶನ್ ಅವರು ಕೊಲ್ಲೂರು ಮೂಕಾಂಬಿಕೆಯ ಮೇಲೆ ಆಪಾರ ನಂಬಿಕೆ ಹಾಗೂ ಶ್ರದ್ಧೆಯನ್ನು ಹೊಂದಿದ್ದಾರೆ. ಹೀಗಾಗಿ ಇಂದು ಬೆಳಂಬೆಳಿಗ್ಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಂಗಳೂರಿಗೆ ತೆರಳಿ ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.






